ಕಾಸಿಗಾಗಿ ಹುದ್ದೆ: ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದ ಜೆಡಿಎಸ್

JDS Party Slams congress Government: ಕೊಡುಗೆ ಮತ್ತು ಸುಲಿಗೆ ಒಟ್ಟೊಟ್ಟಿಗೆ ಕೊಂಡೊಯ್ಯುವುದೇ ಅಭಿವೃದ್ಧಿಯ ಹೊಸ ಭರವಸೆ, ಹೊಸ ಕನಸು ಎಂಬುದು ನನಗೆ ಈಗಷ್ಟೇ ಅರ್ಥವಾಗಿದೆ. ಕರ್ನಾಟಕ ಮಾದರಿ ಅಭಿವೃದ್ಧಿ ಎಂದರೆ ಇದೇನಾ? ಎಂದು ಜೆಡಿಎಸ್ ಕಟುವಾಗಿ ಪ್ರಶ್ನಿಸಿದೆ.  

Written by - Prashobh Devanahalli | Edited by - Puttaraj K Alur | Last Updated : Jul 13, 2023, 03:05 PM IST
  • ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ
  • ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ!!
  • ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ಎಂದ ಜೆಡಿಎಸ್
ಕಾಸಿಗಾಗಿ ಹುದ್ದೆ: ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಿದ ಜೆಡಿಎಸ್ title=
ಕಾಂಗ್ರೆಸ್ ಸರ್ಕಾರಕ್ಕೆ JDS ಚಾಟಿ!

ಬೆಂಗಳೂರು: ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿ ಎಂದು ಜೆಡಿಎಸ್ ಪಕ್ಷವು ಖಾರವಾಗಿ ಟೀಕಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪಕ್ಷವು, ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ ಎಂದಿದೆ.

‘ರಾಜ್ಯದ ಜನರು ಇಷ್ಟು ದಿನ ಟೊಮೇಟೊ, ತರಕಾರಿ, ಆಹಾರ ಧಾನ್ಯ, ಗ್ಯಾಸ್ ಇತ್ಯಾದಿಗಳ ಬೆಲೆ ಏರಿಕೆಯಿಂದ ಬಸವಳಿದು ಹೋಗಿದ್ದಾರೆ. ಈಗ ವರ್ಗಾವಣೆ ದರಪಟ್ಟಿಯಿಂದ ಅಧಿಕಾರಿ, ನೌಕರರೂ ಹೌಹಾರಿದ್ದಾರೆ. ಇದು ಕಾಂಗ್ರೆಸ್  ಸರ್ಕಾರದ 6ನೇ ಗ್ಯಾರಂಟಿ. ಒಂದು ಕಡೆ ಉಚಿತ ಕೊಡುಗೆ! ಇನ್ನೊಂದು ಕಡೆ ಖಚಿತ ಸುಲಿಗೆ!!’ ಎಂದು ಜೆಡಿಎಸ್ ಕಿಡಿಕಾರಿದೆ.

ಇದನ್ನೂ ಓದಿ: ʻಶಕ್ತಿʼ ಯೋಜನೆಯಿಂದ ʻಮರು ಶಕ್ತಿʼ ಪಡೆದ ಬಸ್‌ ನಿಲ್ದಾಣ

ವೈಎಸ್‍ಟಿ ಟ್ಯಾಕ್ಸ್, ಕ್ಯಾಶ್ ಫಾರ್ ಪೋಸ್ಟಿಂಗ್ ಹ್ಯಾಷ್ ಟ್ಯಾಗ್ ಮಾಡಿ ಕಾಂಗ್ರೆಸ್ ಸರ್ಕಾರವನ್ನು ಕುಟುಕಿರುವ ಜೆಡಿಎಸ್, ‘ಭಾಗ್ಯಗಳ ಮೇಲೆ ಭಾಗ್ಯಗಳನ್ನು ಕೊಟ್ಟ ಕಾಂಗ್ರೆಸ್ ಸರ್ಕಾರದ ವರ್ಗಾವಣೆ 'ಸಂಕಷ್ಟಭಾಗ್ಯ' ವರ್ಣಿಸದಸಳ. ಕೊಡುಗೆ ಮತ್ತು ಸುಲಿಗೆ ಒಟ್ಟೊಟ್ಟಿಗೆ ಕೊಂಡೊಯ್ಯುವುದೇ ಅಭಿವೃದ್ಧಿಯ ಹೊಸ ಭರವಸೆ, ಹೊಸ ಕನಸು ಎಂಬುದು ನನಗೆ ಈಗಷ್ಟೇ ಅರ್ಥವಾಗಿದೆ. ಕರ್ನಾಟಕ ಮಾದರಿ ಅಭಿವೃದ್ಧಿ ಎಂದರೆ ಇದೇನಾ?’ ಎಂದು ಜೆಡಿಎಸ್ ಕಟುವಾಗಿ ಪ್ರಶ್ನಿಸಿದೆ.  

ಈ ಸರ್ಕಾರ ಬಂದು 2 ತಿಂಗಳೂ ಕಳೆದಿಲ್ಲ. ಆಗಲೇ ಕಾಸಿಗಾಗಿ ಹುದ್ದೆ ಬಿಸ್ನೆಸ್ ಪರಾಕಾಷ್ಠೆ ಮುಟ್ಟಿದೆ. ಇವರು ವರ್ಗಾವಣೆ ಅಂಕದಲ್ಲಿ ‘ಪರಕಾಯ ಪ್ರವೇಶ’ ಮಾಡಿದ್ದಾರೆ. ಗ್ಯಾರಂಟಿ, ಭಾಗ್ಯಗಳ ಮೂಲಕ ಜನರನ್ನು ಯಾಮಾರಿಸಿದ ಇವರು ಹುಂಡಿಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದಾರೆ. ಇದೇ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಕ್ಕಾಗಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ರೇಟ್‍ಕಾರ್ಡ್ ಬಿಡುಗಡೆ ಮಾಡಿ ಪ್ರಚಾರ ಮಾಡಿತ್ತು. ಈಗ ಕೈ ಸರ್ಕಾರದ ರೇಟ್‍ಕಾರ್ಡ್ ಎಲ್ಲರ ಕೈಗಳಲ್ಲೂ ನಲಿದು ನರ್ತಿಸುತ್ತಿದೆ. ಕ್ಯಾಶ್ ಫಾರ್ ಪೋಸ್ಟಿಂಗ್ ಎನ್ನುವುದು ಸರ್ಕಾರದ  'ಅಧಿಕೃತ ಅರ್ಥನೀತಿ’ ಆಗಿದೆ ಎಂದು ಜೆಡಿಎಸ್ ಪಕ್ಷವು ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದೆ.

ಇದನ್ನೂ ಓದಿ: AAP ನೂತನ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ

ಹನಿಮೂನ್ ಪೀರಿಯಡ್ ಹೊತ್ತಿನಲ್ಲೇ ಹೀಗಾದರೆ ಫುಲ್ ಮೂನ್ ಸಮಯದಲ್ಲಿ ಇದು ಇನ್ನಾವ ಹಂತಕ್ಕೆ ಹೋಗಲಿದೆ ಎನ್ನುವ ಊಹೆ ಜನರಿಗೇ ಬಿಟ್ಟಿದ್ದು. ಇಂಥ ಕಮಿಷನ್‍ಗೇಡಿ ಸರ್ಕಾರದ ಬಗ್ಗೆ ಸರ್ಕಾರಿ ನೌಕರರು, ಅಧಿಕಾರಿಗಳು ಆತಂಕಗೊಂಡಿದ್ದಾರೆ. ಜನರಲ್ಲೂ ಆಕ್ರೋಶ ಮಡುಗಟ್ಟುತ್ತಿದೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News