ಮೇ 13 ರಂದು ನೆಲಮಂಗಲ ಬಳಿ ಜೆಡಿಎಸ್ ನಿಂದ ಬೃಹತ್ ಜಲಧಾರೆ ಸಮಾವೇಶ

ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿಯಾಗಿ ನಡಿದಿದ್ದು, ಇದೇ ಮೇ ತಿಂಗಳ 13ರಂದು ನೆಲಮಂಗಲ ಟೋಲ್ ಪ್ಲಾಜಾ ಬಳಿ ಬೃಹತ್ ಜನತಾ ಜಲಧಾರೆ ಸಮಾವೇಶ ನಡೆಯಲಿದೆ.

Written by - Zee Kannada News Desk | Last Updated : May 5, 2022, 09:19 PM IST
ಮೇ 13 ರಂದು ನೆಲಮಂಗಲ ಬಳಿ ಜೆಡಿಎಸ್ ನಿಂದ ಬೃಹತ್ ಜಲಧಾರೆ ಸಮಾವೇಶ title=

ಬೆಂಗಳೂರು: ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿಯಾಗಿ ನಡಿದಿದ್ದು, ಇದೇ ಮೇ ತಿಂಗಳ 13ರಂದು ನೆಲಮಂಗಲ ಟೋಲ್ ಪ್ಲಾಜಾ ಬಳಿ ಬೃಹತ್ ಜನತಾ ಜಲಧಾರೆ ಸಮಾವೇಶ ನಡೆಯಲಿದೆ.

ಜಲಧಾರೆ ಕಾರ್ಯಕ್ರಮವು ಈ ಸಮಾವೇಶದ ಮೂಲಕ ಸಮಾಪ್ತಿಯಾಗಲಿದ್ದು, ಆ ಬೃಹತ್ ಸಮಾವೇಶದ ಸಿದ್ಧತೆ ಮತ್ತು ರೂಪುರೇಶೆಗಳ ಬಗ್ಗೆ ಇಂದು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಪಕ್ಷದ ಪ್ರಮುಖರ ಸಭೆ (ಕೋರ್ ಕಮಿಟಿ) ಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.

ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು.ಸಭೆಯ ನಂತರ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಷೆಂಪೂರ ಅವರು ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದರು. ಅವರು ಹೇಳಿದ್ದಿಷ್ಟು;

ಇದನ್ನೂ ಓದಿ: ಸೂಪರ್‌ ಸಿಂಗರ್‌ ಗ್ಲೋಬಲ್‌ʼ: ಜಿಕೆ ಎಂಟರ್‌ಪ್ರೈಸಸ್‌ ಮೂಲಕ ವಿದೇಶದಲ್ಲಿ ಪಸರಿಸಿದ ದೇಶೀ ಕಂಪು

ರಾಜ್ಯದ 184 ವಿಧಾನಸಭೆ  ಕ್ಷೇತ್ರಗಳಲ್ಲಿ ಜಲಧಾರೆಯ 15 ಗಂಗಾ ರಥಗಳು ಯಶಸ್ವಿಯಾಗಿ ಸಂಚರಿಸುತ್ತಿವೆ. ಇವುಗಳ ಮೂಲಕ ರಾಜ್ಯದ ಎಲ್ಲಾ ಜೀವ ನದಿಗಳಿಂದ ಸಂಗ್ರಹ ಮಾಡಲಾಗಿರುವ ಪುಣ್ಯಜಲವನ್ನು ಒಂದು ಬೃಹತ್ ಕಲಶಕ್ಕೆ ತುಂಬಿಸಿ ಸಮಾವೇಶದಲ್ಲಿ ಪೂಜೆ ನೆರವೇರಿಸಲಾಗುವುದು. ಈ ಸಮಾವೇಶದಲ್ಲಿ 5 ಲಕ್ಷಕ್ಕಿಂತ ಹೆಚ್ಚು ಜನ ಸೇರಲಿದ್ದಾರೆ.

ಇದನ್ನೂ ಓದಿ: ಸಾಗರದಾಚೆಗೆ ʼನಮ್‌ ರೇಡಿಯೋʼ ಹವಾ: ಕನ್ನಡ ಕೇಳುಗರ ಮನಮುಟ್ಟಿದ ಅಂತರ್ಜಾಲ ರೇಡಿಯೋ

ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ಸಿಕ್ಕರೆ ಐದು ವರ್ಷಗಳಲ್ಲಿ ಜನತಾ ಸರಕಾರ ಕೈಗೊಳ್ಳಲಿರುವ ಕಾರ್ಯಕ್ರಮಗಳ ಬಗ್ಗೆ ಆ ಸಮಾವೇಶದಲ್ಲಿ ಸಂಕಲ್ಪ ಮಾಡಲಾಗುವುದು.

ಸಂಜೆ 4 ಗಂಟೆಗೆ ಆರಂಭ ಆಗಲಿರುವ ಸಮಾವೇಶದಲ್ಲಿ ಮಾಜಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ, ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಹಿರಿಯ ಮುಖಂಡರು, ಸಾಹಿತಿಗಳು, ಬುದ್ಧಿಜೀವಿಗಳು, ಕನ್ನಡಪರ, ರೈತಪರ ಹೋರಾಟಗಾರರು ಭಾಗಿಯಾಗುವರು.

ಗಂಗಾ ಆರತಿ:

ಸಮಾವೇಶದ ಕೊನೆಯಲ್ಲಿ ಗಂಗಾ ಪೂಜೆ ನೆರವೇರಿಸಿದ ಮೇಲೆ ಅತ್ಯಂತ ಸಂಪ್ರದಾಯಬದ್ಧವಾಗಿ ಗಂಗಾ ಆರತಿಯನ್ನು ನೆರವೇರಿಸಲಾಗುವುದು. ಈ ಕಾರ್ಯಕ್ರಮ ನಡೆಸಿಕೊಡಲು ವಾರಾಣಸಿಯಿಂದ ಪಂಡಿತರನ್ನು ಕರೆಸಲಾಗುವುದು. ಸಂಜೆಯ ಹೊತ್ತಿನಲ್ಲಿ ಆರತಿ ಕಾರ್ಯಕ್ರಮ ವಿಶೇಷವಾಗಿ ಮೂಡಿಬರಲಿದೆ.

ಐದು ಉಪ ಸಮಿತಿ ರಚನೆ:

ಜಲಧಾರೆ ಸಮಾವೇಶವನ್ನು ಯಶಸ್ವಿಯಾಗಿ ಮಾಡುವ ಉದ್ದೇಶದಿಂದ ಐದು ಉಪ ಸಮಿತಿಗಳನ್ನು ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಲಾಯಿತು. ವಾಹನ ನಿಲುಗಡೆ, ಊಟ, ಮಾಧ್ಯಮ, ಸಭಾಂಗಣ ಹಾಗೂ ಗಂಗಾ ಆರತಿ ವ್ಯವಸ್ಥೆಗಾಗಿ ಈ ಉಪ ಸಮಿತಿಗಳನ್ನು ರಚನೆ ಮಾಡಲಾಗಿದೆ. ಅವುಗಳ ಮುಖ್ಯಸ್ಥರು ಯಾರು ಎಂಬುದನ್ನು ಒಂದೆರಡು ದಿನದಲ್ಲಿ ತಿಳಿಸಲಾಗುವುದು.

Omicron ಹೊಸ ರೂಪಾಂತರಿಗಳು ಸಂಕಷ್ಟ ಹೆಚ್ಚಿಸಲಿವೆ, ಅಪಾಯಕಾರಿ ಸಾಬೀತಾಗಬಹುದು 4ನೆ ಅಲೆ

ಅಭ್ಯರ್ಥಿ ಆಯ್ಕೆ:

ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನಾಗಿ ಚಂದ್ರಶೇಖರ್ ಲೋಣಿ ಅವರನ್ನು ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News