JOB News: ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 4 ಅಂಗನವಾಡಿ ಕಾರ್ಯಕರ್ತೆಯರು ಮತ್ತು 19 ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.

Written by - Zee Kannada News Desk | Last Updated : Jan 16, 2022, 06:51 AM IST
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 4 ಅಂಗನವಾಡಿ ಕಾರ್ಯಕರ್ತೆಯರು ಮತ್ತು 19 ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.
 JOB News: ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ title=
FILE PHOTO

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 4 ಅಂಗನವಾಡಿ ಕಾರ್ಯಕರ್ತೆಯರು ಮತ್ತು 19 ಸಹಾಯಕಿಯರ ಹುದ್ದೆಗೆ ಅರ್ಜಿ ಅಹ್ವಾನಿಸಲಾಗಿದೆ.

ಇದನ್ನೂ ಓದಿ: ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ: KSRTCಯಲ್ಲಿ 4,600ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಮನವಿ

ಭದ್ರಾವತಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯ ಹಾವುಗೊಲ್ಲರಕ್ಯಾಂಪ್ ಮಿನಿ, ಚಿಕ್ಕಗೊಪ್ಪೆನಹಳ್ಳಿ, ಸಿಂಗನ ಮನೆ-2, ಹೊಸೂರು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 4 ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Big News: ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ, ಧಗಧಗಿಸಿ ಹೊತ್ತಿ ಉರಿದ ಶಾಂಪಿಂಗ್ ಮಾಲ್!

ಅಂಗನವಾಡಿ ಕೇಂದ್ರಗಳಾದ ಸಿದ್ದರಹಳ್ಳಿ(ಪ.ಜಾ), ದೊಣಭಘಟ್ಟ-4, ಸಿಂಗನಮನೆ-2, ಶಾಂತಿನಗರ-1, ನಾಗಸಮುದ್ರ-1, ಸುರಗಿತೋಪು-1, ಮೂಫಾಕಾಂಪೌಂಡ್, ಸೀಗೆಬಾಗಿ-3, ಫಿಲ್ಟರ್ಶೆಡ್, ಸಂಜಯ್ಕಾಲೋನಿ, ಹುತ್ತಾಕಾಲೋನ್, ಅಶೋಕ್‍ನಗರ-2, ಅರದೊಟ್ಟಲು, ಎಂ ಎಂ ಕಾಂಪೌಡ್, ಅರಳೀಹಳ್ಳಿ-1, ನೆಹರುನಗರ, ಸಣ್ಣಕುರುಬರ ಬೀದಿ, ಹಳೇಕೂಡ್ಲಿಗೆರೆ(ಪ.ಜಾತಿ) ಮತ್ತು ವೇಲೂರ್‍ಶೆಡ್-1 ಗಳಲ್ಲಿ  19 ಅಂಗನವಾಡಿ ಸಹಾಯಕಿರಯರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: ಪಿಯುಸಿ ತೇರ್ಗಡೆಯಾಗಿದ್ದಿರಾ? ಹಾಗಿದ್ದಲ್ಲಿ ಈ ಜಿಲ್ಲೆಯ ಯುವಕರಿಗೆ ಇಲ್ಲಿದೆ ಉದ್ಯೋಗದ ಸುವರ್ಣಾವಕಾಶ..!

ಅರ್ಜಿಗಳನ್ನು ವೆಬ್‍ಸೈಟ್ www.anganwadirecruit.kar.nic.inನಲ್ಲಿ ಆನ್‍ಲೈನ್ ಮೂಲಕ ಫೆ.13 ರೊಳಗೆ ಸಲ್ಲಿಸಬೇಕಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ, ಫಲಕ ಹಾಗೂ ಕಚೇರಿಯ ವೇಳೆಯಲ್ಲಿ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು ಎಂದು ಭದ್ರಾವತಿ ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News