ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನ ಮೇಲ್ವಿಚಾರಣೆಗಾಗಿ ತಾಲೂಕು ಪಂಚಾಯತಿಗಳು ಪ್ರಮುಖ ಪಾತ್ರ ಹೊಂದಿದ್ದು, ತಾಲೂಕು ಪಂಚಾಯತಿಗಳಿಗೆ ಮಂಜೂರಾದ ಬಹಳಷ್ಟು ಹುದ್ದೆಗಳು ಖಾಲಿ ಇರುವುದರಿಂದ ಯೋಜನೆಯ ಮೇಲ್ವಿಚಾರಣೆಗೆ ಅಡಚಣೆ ಉಂಟಾಗಿರುತ್ತದೆ.
ಇದನ್ನೂ ಓದಿ: ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಟ್ವಿಟ್ಟರ್ ಖಾತೆ ಹ್ಯಾಕ್..!
ನರೇಗಾ ಯೋಜನೆಯ ಅನುಷ್ಠಾನಕ್ಕೆ ವಿವಿಧ ಹಂತದ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಧಾರವಾಡ ಜಿಲ್ಲೆಯಲ್ಲಿ 2020-21 ನೇ ಸಾಲಿನಲ್ಲಿ ಒಂದು ಲಕ್ಷಕ್ಕಿಂತ ಹೆಚ್ಚು ಮಾನವ ದಿನಗಳನ್ನು ಸೃಜನೆ ಮಾಡಿದ ಅಣ್ಣಿಗೇರಿ, ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಮತ್ತು ನವಲಗುಂದ ತಾಲೂಕು ಪಂಚಾಯತಿಗಳಿಗೆ ತಲಾ ಒಬ್ಬರಂತೆ ಒಟ್ಟು ಆರು ಆಡಳಿತಾತ್ಮಕ ಸಹಾಯಕರ (Administrative Assistant) ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: Viral Video: ಸಹೋದರಿ ಜೊತೆಗೆ ಸಖತ್ ಆಗಿ ವೆಡ್ಡಿಂಗ್ ಡ್ಯಾನ್ಸ್ ಮಾಡಿದ ವಧು..!
ಅರ್ಜಿ ಸಲ್ಲಿಸುವವರು ಜ.17 ರೊಳಗೆ ಜಿಲ್ಲಾ ಪಂಚಾಯತ ಧಾರವಾಡದ ಅಧೀಕೃತ ವೆಬ್‍ಸೈಟ್ http://zpdharwad.karnataka.gov.in ಮತ್ತು ಧಾರವಾಡ ಜಿಲ್ಲೆಯ ಅಧೀಕೃತ ವೆಬ್‍ಸೈಟ್ http://dharwad.nic.in ಮುಖಾಂತರ ನೀಡಲಾಗಿರುವ ಲಿಂಕ್‍ನಲ್ಲಿ ಅಭ್ಯರ್ಥಿಗಳು ಆನ್‍ಲೈನ್ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಿಲ್ಲಾ ಪಂಚಾಯತಿಯ ದೂರವಾಣಿ ಸಂಖ್ಯೆ:0836-2447542, 0836-2742221 ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.