Minister Priyank Kharge: ಬೆಂಗಳೂರು: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿರುವ ಸಂಸದ ಉಮೇಶ ಜಾಧವ್ ಅವರಿಗೆ ಬಿಜೆಪಿ ಸರ್ಕಾರ ಇದ್ದಾಗ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 28 ಕೊಲೆಗಳಾಗಿದ್ದವು ಎಂದು ಅಂಕಿ ಅಂಶಗಳ ನೀಡುವ ಮೂಲಕ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.
ಈ ಹಿಂದೆ “ಪ್ರಿಯಾಂಕ್ ಖರ್ಗೆ ಉಸ್ತುವಾರಿ ಸಚಿವರಾದ ನಂತರ ಜಿಲ್ಲೆಯಲ್ಲಿ 13 ಕೊಲೆಗಳಾಗಿವೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ” ಎಂದು ಸಂಸದ ಉಮೇಶ ಜಾಧವ್ ಹೇಳಿಕೆ ನೀಡಿದ್ದರು.
ಇದನ್ನೂ ಓದಿ:IPL 2024: ಚೊಚ್ಚಲ IPLನಲ್ಲಿ ಕ್ರಿಕೆಟ್ ಲೆಜೆಂಡ್ ವಿರಾಟ್ ಕೊಹ್ಲಿ ಪಡೆದ ಸಂಬಳವೆಷ್ಟು ಗೊತ್ತಾ? ಈಗೆಷ್ಟಾಗಿದೆ?
ಈ ಹೇಳಿಕೆಗೆ ತಿರುಗೇಟು ನೀಡಿದ ಪ್ರಿಯಾಂಕ್ ಖರ್ಗೆ, “ಬಹುತೇಕ ಕೊಲೆಗಳಲ್ಲಿ ಅವರ ಚಿರಪರಿಚಿತರೇ ಆರೋಪಿಗಳಾಗಿದ್ದಾರೆ. ಅಫಜಲ್ಪುರ ತಾಲೂಕಿನಲ್ಲಿ ನಮ್ಮ ಸರ್ಕಾರದ ಅಧಿಕಾರಿಯ ಮೇಲೆ ಟ್ರಾಕ್ಟರ್ ಹತ್ತಿಸಿದ್ದರು ಯಾರು?” ಎಂದು ತಿರುಗೇಟು ನೀಡಿದರು.
“ಬಿಜೆಪಿ ಸರ್ಕಾರದ ಅವಧಿಯಲ್ಲಿ 28 ಕೊಲೆಗಳಾಗಿದ್ದವು. ಗುಜರಾತ್’ನಲ್ಲಿ ಕಳೆದ ವರ್ಷದ ಅವಧಿಯಲ್ಲಿ 2209 ಅತ್ಯಾಚಾರ ನಡೆದಿದ್ದು 36 ಗ್ಯಾಂಗ್ ರೇಪ್’ಗಳಾಗಿವೆ. ಇದಕ್ಕೆ ಸುವ್ಯವಸ್ಥೆ ಕುಸಿದಿದೆ ಎನ್ನಬಹುದು. ಬಿಜೆಪಿ ಅಧಿಕಾರವಿದ್ದಾಗಲೇ ಎಬಿವಿಪಿ ಕಾರ್ಯಕರ್ತರು ಕೇಂದ್ರ ಸಚಿವ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರ ಕಾರಿಗೆ ಅಡ್ಡಹಾಕಿದ್ದರು. ಅದನ್ನು ಕಾನೂನು ಸುವ್ಯವಸ್ಥೆ ಕುಸಿದಿದೆ ಎನ್ನಬಹುದು. ಬಿಜೆಪಿ ಅಧಿಕಾರದಲ್ಲಿ ಆಳಂದದ ಲಾಡ್ಲೆ ಮಷಾಖ್ ದರ್ಗಾದಲ್ಲಿ ಪೂಜೆ ಮಾಡುವ ವಿಚಾರದಲ್ಲಿ ಗಲಾಟೆಗಳಾಗಿದ್ದವು ಆಗ ಕಾನೂನು ಸುವ್ಯವಸ್ಥೆ ಕುಸಿದಿತ್ತು. ಈ ಸಲ ಅಂತಹ ಯಾವುದೇ ಘಟನೆ ನಡೆಯದಂತೆ ನೋಡಿಕೊಂಡಿದ್ದೇವೆ” ಎಂದು ಮರು ಉತ್ತರ ನೀಡಿದರು.
ಚಿತ್ತಾಪುರದ ಅಪರಂಜಿ ಈಗ ಎಲ್ಲಿ? ಎಂದು ಜಾಧವ್’ರನ್ನು ಪ್ರಶ್ನಿಸಿದ ಸಚಿವರು, ಅಪಘಾತವನ್ನು ಹಲ್ಲೆ ಎಂದು ಬಿಂಬಿಸಲಾಗಿತ್ತು. ಪೊಲೀಸ್ ತನಿಖೆ ನಂತರ ಅದು ಸುಳ್ಳು ಎಂದು ಸಾಬೀತಾಗಿತ್ತು. ಆ ನಂತರ ಜಾಧವ್ ರ ಅಪರಂಜಿ ನಾಪತ್ತೆಯಾಗಿದ್ದಾನೆ ಎಂದು ಕುಟುಕಿದರು.
ನಮ್ಮ ಸರ್ಕಾರದಲ್ಲಿ ರೌಡಿಗಳನ್ನು ನಿಯಂತ್ರಣ ಮಾಡಿರುವುದಕ್ಕೆ ಬಿಜೆಪಿಗರಿಗೆ ಸಂಕಷ್ಟವಾಗಿದೆ ಎಂದ ಖರ್ಗೆ, ಕಾನೂನು ಸುವ್ಯವಸ್ಥೆ ಕುಸಿದಿಲ್ಲ ಎನ್ನುವುದಕ್ಕೆ ಹಲವಾರು ಉದಾಹರಣೆಗಳಿವೆ. ಸಂಸದರಾಗಿ ಜಾಧವ ಏನು ಅಭಿವೃದ್ದಿ ಮಾಡಿದ್ದಾರೆ ಹೇಳಲಿ. ಸಿಯುಕೆಗೆ ಸುಣ್ಣ ಬಣ್ಣ ಬಳಿಸಿಲ್ಲ, ರೈಲ್ವೆ ವಲಯ, ಟೆಕ್ಸ್’ಟೈಲ್ ಪಾರ್ಕ್ ಮುಂತಾದ ಯೋಜನೆಗಳು ವಾಪಸ್ ಹೋಗಿವೆ. ಈ ಸಲದ ರೈಲ್ವೆ ಬಜೆಟ್’ನಲ್ಲಿ ಕಲಬುರಗಿಗೆ ಕೇವಲ ಒಂದು ಸಾವಿರ ರೂಪಾಯಿ ಮೀಸಲಿಟ್ಟಿದ್ದಾರೆ. ಇವತ್ತು ವಂದೇ ಭಾರತ ಡಕೋಟಾ ರೈಲ್ವೆಗೆ ಉದ್ಘಾಟನೆ ಮಾಡಿದ್ದಾರೆ. ಜಾಧವ್ ವಾಸ್ತವದ ಮೇಲೆ ಮಾತನಾಡಲಿ ಎಂದು ಕುಟುಕಿದರು.
ಪ್ರೊಟೋಕಾಲ್ ಬಗ್ಗೆ ಯಾವಾಗಲೂ ಮಾತನಾಡುವ ಜಾಧವ್, ಇತ್ತೀಚಿಗೆ ರಿಂಗ್ ರಸ್ತೆಯ ಸರ್ವಿಸ್ ರಸ್ತೆಗೆ ಅಡಿಗಲ್ಲು ಹಾಕುವ ಕಾರ್ಯಕ್ರಮದಲ್ಲಿ ಪ್ರೊಟೋಕಾಲ್ ಪಾಲನೆ ಮಾಡಿದ್ದಾರೆಯೇ? ಯಾವೊಬ್ಬ ಅಧಿಕಾರಿ ಇರಲಿಲ್ಲ. ಕೇವಲ ಬಿಜೆಪಿಯ ಕೆಲವರು ಮಾತ್ರ ಇದ್ದರು. ಒಂದು ವಿಚಾರ ಗೊತ್ತಿರಲಿ, ಯೋಜನೆಗೆ ಅನುಮತಿಯೇ ನೀಡಲಾಗಿಲ್ಲ ಎಂದರು.
ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡುವುದು ಅನುಮಾನ ಎಂಬುದರ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್, “ಬಿಜೆಪಿಯಲ್ಲಿ ಯಾರಿಗೆ ಟಿಕೆಟ್ ನೀಡುತ್ತಾರೆ, ನಿರಾಕರಿಸುತ್ತಾರೆ ನನಗೆ ಸಂಬಂಧಿಸಿದ್ದಲ್ಲ ಎಂದರು. ಈ ಸಲ ಗೆಲುವು ನನ್ನದೇ ಎಂದು ಜಾಧವ ಹೇಳಿದ್ದಾರೆ ಎಂದು ಕೇಳಿದಾಗ, ಚುನಾವಣೆಯಲ್ಲಿ ಗೊತ್ತಾಗುತ್ತದೆ ಬಿಡಿ. ಪ್ರತಿಯೊಬ್ಬರು ಗೆಲ್ಲಬೇಕೆಂದೆ ಸ್ಪರ್ಧಿಸುತ್ತಾರೆ ಎಂದರು.
ಚಕ್ರವರ್ತಿ ಸೂಲಿಬೆಲೆ ಅವರಿಗೆ ಜಿಲ್ಲೆಯ ಪ್ರವೇಶ ನಿರಾಕರಣೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ನನಗೆ ಮಾಡಲು ಬಹಳಷ್ಟು ಕೆಲಸಗಳಿವೆ, ಬಾಡಿಗೆ ಭಾಷಣಕಾರನ ಬಗ್ಗೆ ಮಾತನಾಡಲು ಸಮಯವಿಲ್ಲ. ಅವನು ಒಂದೇ ಒಂದು ಗ್ರಾಮ ಪಂಚಾಯತ್ ಚುನಾವಣೆ ಗೆದ್ದಿಲ್ಲ ಎಂದು ತೀಕ್ಷವಾಗಿ ಪ್ರತಿಕ್ರಿಯಿಸಿದರು.
ಆರ್ ಅಶೋಕ್’ರಿಂದ ಹಿಡಿದು ಸ್ಥಳೀಯ ಬಿಜೆಪಿ ನಾಯಕರಿಗೆ ನಾನು ಮನೆಯ ದೇವರು ಇದ್ದಹಾಗೆ. ನನ್ನನ್ನು ನೆನಪಿಸಿಕೊಳ್ಳುತ್ತಿರುತ್ತಾರೆ. ಇಲ್ಲದಿದ್ದರೆ ಅವರಿಗೆ ಆಹಾರ ಜೀರ್ಣವಾಗುವುದಿಲ್ಲ.
ಇದನ್ನೂ ಓದಿ: CSKಯ ಆಕರ್ಷಣೆ ಧೋನಿಯಾದ್ರೂ ಅವರಿಗಿಂತ ಅತಿ ಹೆಚ್ಚು ಸಂಬಳ ಪಡೆಯುತ್ತಾರೆ ತಂಡದ ಈ ಕ್ರಿಕೆಟಿಗರು
ಸಂವಿಧಾನ ಬದಲಿಸುವ ಬಗ್ಗೆ ಮಾತನಾಡಿದ ಸಂಸದ ಅನಂತ ಕುಮಾರ್ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು ಅವರಿಗೆ ತಲೆ ಕೆಟ್ಟಿದೆ, ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ