ಭರ್ಜರಿ ಯಶಸ್ಸು ಕಂಡ ಕಲಬುರ್ಗಿ ಉದ್ಯೋಗ ಮೇಳ, 2,240 ಜನರಿಗೆ ಒಲಿದ ಉದ್ಯೋಗಾವಕಾಶ

ಇದೇ ತಿಂಗಳ 12 ರಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ  ಕಲಬುರಗಿಯಲ್ಲಿ ನಡೆಸಿದ ಉದ್ಯೋಗ ಮೇಳದಲ್ಲಿ ಒಟ್ಟು 2,240 ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Written by - Prashobh Devanahalli | Last Updated : Feb 27, 2022, 07:57 PM IST
  • ಒಂದು ದಿನ ನಡೆದ ಈ ಬೃಹತ್ ಉದ್ಯೋಗ ಮೇಳದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಬಿ.ಇ./ಬಿ.ಟೆಕ್. ಮತ್ತು ಎಂ.ಟೆಕ್ ವಿದ್ಯಾರ್ಹತೆ ಹೊಂದಿರುವ ಒಟ್ಟು 8,670 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು.
ಭರ್ಜರಿ ಯಶಸ್ಸು ಕಂಡ ಕಲಬುರ್ಗಿ ಉದ್ಯೋಗ ಮೇಳ, 2,240 ಜನರಿಗೆ ಒಲಿದ ಉದ್ಯೋಗಾವಕಾಶ  title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಇದೇ ತಿಂಗಳ 12 ರಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ  ಕಲಬುರಗಿಯಲ್ಲಿ ನಡೆಸಿದ ಉದ್ಯೋಗ ಮೇಳದಲ್ಲಿ ಒಟ್ಟು 2,240 ಜನರಿಗೆ ಉದ್ಯೋಗ ಸಿಕ್ಕಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಭಾನುವಾರ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು ಒಂದು ದಿನ ನಡೆದ ಈ ಬೃಹತ್ ಉದ್ಯೋಗ ಮೇಳದಲ್ಲಿ (Job Fair) ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ, ಬಿ.ಇ./ಬಿ.ಟೆಕ್. ಮತ್ತು ಎಂ.ಟೆಕ್ ವಿದ್ಯಾರ್ಹತೆ ಹೊಂದಿರುವ ಒಟ್ಟು 8,670 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು.

ಇದನ್ನೂ ಓದಿ: ಫೆ.12 ರಂದು ಕಲಬುರಗಿಯಲ್ಲಿ ಬೃಹತ್ ಉದ್ಯೋಗ ಮೇಳ, 5000 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ

ಒಟ್ಟು 83 ಕಂಪನಿಗಳು ಉದ್ಯೋಗ ಮೇಳದಲ್ಲಿ  ಭಾಗವಹಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿದ್ದವು. ಕೊನೆಗೆ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾದ ಅಭ್ಯರ್ಥಿಗಳಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆಯುಳ್ಳ 382, ಪಿಯುಸಿ ಮಟ್ಟದ 342, ಐಟಿಐ ವಿದ್ಯಾರ್ಹತೆಯುಳ್ಳ 520, ಡಿಪ್ಲೊಮಾ ಓದಿರುವ 343, ಪದವಿ ಓದಿರುವ 425, ಸ್ನಾತಕೋತ್ತರ ಶಿಕ್ಷಣ ಹೊಂದಿರುವ 72, ಬಿ.ಇ./ಬಿ.ಟೆಕ್ ಓದಿರುವ 133 ಮತ್ತು ಎಂ.ಟೆಕ್ ವಿದ್ಯಾಭ್ಯಾಸವುಳ್ಳ 23 ಮಂದಿ ಇದ್ದಾರೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ :  IND vs WI: ಟೀಂ ಇಂಡಿಯಾದಲ್ಲಿ 3 ಮಾರಕ ಆಟಗಾರರ ದಿಢೀರ್ ಎಂಟ್ರಿ; , ವೆಸ್ಟ್ ಇಂಡೀಸ್ ತಂಡಕ್ಕೆ ಆಘಾತ

ಸಂದರ್ಶನದಲ್ಲಿ ಪಾಲ್ಗೊಂಡ ಉದ್ಯೋಗಾಕಾಂಕ್ಷಿಗಳಿಗೆ 298 ಮಂದಿಯನ್ನು ಮುಂದಿನ ಸುತ್ತಿಗೆ ಆಯ್ಕೆ ಮಾಡಲಾಗಿದೆ. ಈ ಎಲ್ಲಾ ಆಕಾಂಕ್ಷಿಗಳಿಗೆ ಸೂಕ್ತ ರೀತಿಯ ತರಬೇತಿ ನೀಡಿ ಅವರನ್ನು ಉದ್ಯೋಗ ಪಡೆಯಲು ಸಮರ್ಥ ಅಭ್ಯರ್ಥಿಗಳನ್ನಾಗಿ ಪರಿವರ್ತಿಸಲಾಗುವುದು. ಇದು ಉಚಿತ ಕಾರ್ಯಕ್ರಮವಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.ಉದ್ಯೋಗ ಮೇಳದಲ್ಲಿ ಸಿಂಪ್ಲಿಫೈ3ಎಕ್ಸ್, ಬಾಶ್, ಟೊಯೋಟಾ ಕಿರ್ಲೋಸ್ಕರ್, ಬೈಜೂಸ್, ಎನ್.ಟಿ.ಟಿ.ಎಫ್., ಗ್ರೀಟ್ ಟೆಕ್ನಾಲಜೀಸ್, ಟೆಕ್ ವೈಸ್ ಐಟಿ ಸೊಲ್ಯೂಶನ್ಸ್, ಸಿನಾಪ್ಟೆಕ್ಸ್, ಗ್ರಾಮ ವಿಕಾಸ ಸೊಸೈಟಿ, ಸಾಯಿ ಫಾರ್ಮಿಕಲ್ಚರ್, ಹಿಮಾಲಯ ವೆಲ್ನೆಸ್ ಕಂಪನಿ, ಪ್ರಾಣ ಹೆಲ್ತ್ ಕೇರ್, ಯೂನಿಬಿಕ್, ಅಜೀಂ ಪ್ರೇಂಜಿ ಫೌಂಡೇಶನ್, ಯೋನೆಕ್ಸ್ ಕಂಪನಿಗಳು ಭಾಗವಹಿಸಿದ್ದವು ಎಂದು ಅವರು ಮಾಹಿತಿ ನೀಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News