ಬೆಂಗಳೂರು : ನಗರದ ಬಿಜೆಪಿಯ ಜಗನ್ನಾಥ ಭವನದಲ್ಲಿ ಹೆಡ್ ಬುಷ್ ಚಿತ್ರದಲ್ಲಿ ವೀರಗಾಸೆ ವಿವಾದಕ್ಕೆ ಪ್ರತಿಕ್ರಿಯೆ ನೀಡಿ, ನಾನಿನ್ನೂ ಆ ಸಿನಿಮಾ ನೋಡಿಲ್ಲ. ಆದರೆ, ಮನರಂಜನೆಗಾಗಿ ಜಾನಪದ ಸಾಂಸ್ಕೃತಿಕ ಕಲೆಗಳನ್ನು ಅವಮಾನ ಮಾಡಬಾರದು. ಅಂಥ ಅವಮಾನ ಆಗಿದ್ದರೆ ಸಿನಿಮಾ ನಿರ್ಮಾಪಕರು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು. ಕನ್ನಡ ರಾಜ್ಯೋತ್ಸವ ನಿಮಿತ್ತ ನಡೆಯುವ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮಕ್ಕೆ ಅದ್ಭುತ ಪ್ರತಿಕ್ರಿಯೆ ಲಭಿಸಿದೆ. ನಾಳೆ ವೇಳೆಗೆ ಇನ್ನಷ್ಟು ಜನರು ನೋಂದಣಿ ಮಾಡುವ ನಿರೀಕ್ಷೆ ಇದ್ದು, 1.25 ಕೋಟಿ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಇನ್ನೂ ಓದಿ : BCCI Big Announcement: ಭಾರತೀಯ ಮಹಿಳಾ ಆಟಗಾರ್ತಿಯರಿಗೆ ಬಂಬಾಟ್ ಸುದ್ದಿ ಪ್ರಕಟಿಸಿದ ಬಿಸಿಸಿಐ
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರ ನೀಡಿದ ಅವರು, 10 ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಸಾವಿರಾರು ಸಂಘ ಸಂಸ್ಥೆಗಳು ಹೆಸರು ನೋಂದಾಯಿಸಿವೆ. 45 ದೇಶಗಳಲ್ಲಿ, 26 ರಾಜ್ಯಗಳಿಂದ ಜನರು ನೋಂದಣಿ ಮಾಡಿದ್ದಾರೆ. ಇದು ಅತ್ಯಂತ ಯಶಸ್ವಿ ಕಾರ್ಯಕ್ರಮವಾಗಿ ಹೊರಹೊಮ್ಮಿದೆ ಎಂದರು.
ನೆಲ, ಜಲ, ಆಕಾಶದಲ್ಲಿ ಕಾರ್ಯಕ್ರಮ ನಡೆಯಲಿದೆ. ವಿಧಾನಸೌಧದ ಮೆಟ್ಟಿಲು, ಮೈಸೂರು ಅರಮನೆ, ಪೌರಕಾರ್ಮಿಕರ ನಡುವೆ, ಜೋಗ್ ಜಲಪಾತ, ಚಿತ್ರದುರ್ಗದ ಕೋಟೆ, ರಾಯಚೂರಿನ ಥರ್ಮಲ್ ಪ್ಲಾಂಟ್ ಹೀಗೆ ಎಲ್ಲ ಕಡೆ ಗಾಯನ ನಡೆಯಲಿದೆ ಎಂದು ತಿಳಿಸಿದರು.
ಇನ್ನೂ ಓದಿ : Puneeth Rajkumar Statue : ಬಳ್ಳಾರಿಯಲ್ಲಿ ಕೃಷ್ಣ ಶಿಲೆಯಲ್ಲಿ ನಿರ್ಮಿಸಿದ ಪುನೀತ್ ಪ್ರತಿಮೆ ಅನಾವರಣ
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ 50 ಸಾವಿರ ಜನರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ಪಾಲ್ಗೊಳ್ಳಲಿದ್ದಾರೆ ಎಂದು ವಿವರ ನೀಡಿದರು. ಸಂಸದ ಪಿ.ಸಿ.ಮೋಹನ್, ಒಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷ ನೆ.ಲ.ನರೇಂದ್ರಬಾಬು ಅವರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.