ಕನ್ನಡಿಗರೇ..! ಕನ್ನಡ ಭಾಷೆ ಬಳಕೆ ಇಲ್ಲದ ಬೋರ್ಡ್‌ ಕಂಡ್ರೆ ಈ ಆಪ್‌ ಮೂಲಕ ದೂರು ನೀಡಿ

ಕನ್ನಡ ಭಾಷೆಯ ಬಳಕೆ ಕುರಿತು ಯಾವುದೇ ವ್ಯಕ್ತಿ ದೂರು ನೀಡಲು ವಿಶೇಷವಾದ ಆಪ್ ಅನ್ನು ರೂಪಿಸಲಾಗುತ್ತಿದೆ. ಇಲ್ಲಿಗೆ ಬರುವ ದೂರುಗಳನ್ನು ಸಂಬಂಧಪಟ್ಟ ಸಮಿತಿಗಳಿಗೆ ಕಳುಹಿಸಲಾಗುವುದು. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.. 

Written by - Krishna N K | Last Updated : Feb 15, 2024, 04:00 PM IST
  • ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ -2024ವನ್ನು ಅಂಗೀಕಾರ.
  • ಕನ್ನಡ ಭಾಷೆಯ ಬಳಕೆ ಕುರಿತು ಯಾವುದೇ ವ್ಯಕ್ತಿ ದೂರು ನೀಡಲು ವಿಶೇಷವಾದ ಆಪ್.
  • ಇಲ್ಲಿಗೆ ಬರುವ ದೂರುಗಳನ್ನು ಸಂಬಂಧಪಟ್ಟ ಸಮಿತಿಗಳಿಗೆ ಕಳುಹಿಸಲಾಗುವುದು.
ಕನ್ನಡಿಗರೇ..! ಕನ್ನಡ ಭಾಷೆ ಬಳಕೆ ಇಲ್ಲದ ಬೋರ್ಡ್‌ ಕಂಡ್ರೆ ಈ ಆಪ್‌ ಮೂಲಕ ದೂರು ನೀಡಿ title=

ಬೆಂಗಳೂರು : ಇಂದು ವಿಧಾನಸಭೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ -2024ವನ್ನು ಅಂಗೀಕರಿಸಲಾಯಿತು. ಈ ಮೂಲಕ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯವಾಗಿದೆ. ಒಂದು ವೇಳೆ ಸರ್ಕಾರಿ ಕಚೇರಿ ಸೇರಿದಂತೆ ಅಂಗಡಿ ಮುಂಗಟ್ಟಗಳ ಫಲಕದಲ್ಲಿ ಕನ್ನಡ ಬಳಕೆ ಇಲ್ಲವಾದದ್ದು ಕಂಡು ಬಂದರೆ ಜನರು ದೂರು ನೀಡಬಹುದಾಗಿದೆ. 

ಹೌದು.. ಕನ್ನಡ ಭಾಷೆಯ ಬಳಕೆ ಕುರಿತು ಯಾವುದೇ ವ್ಯಕ್ತಿ ದೂರು ನೀಡಲು ʼಕನ್ನಡ ಕಣ್ಗಾವಲುʼ ಎಂಬ ಆಪ್ ಅನ್ನು ರೂಪಿಸಲಾಗುತ್ತಿದೆ. ಇಲ್ಲಿಗೆ ಬರುವ ದೂರುಗಳನ್ನು ಸಂಬಂಧಪಟ್ಟ ಸಮಿತಿಗಳಿಗೆ ಕಳುಹಿಸಲಾಗುವುದು. ಆ ದೂರುಗಳ ಬಗ್ಗೆ ಶೀಘ್ರವೇ ಕ್ರಮವಹಿಸುವಂತೆ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಇದನ್ನೂ ಓದಿ: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ : ವಿಧೇಯಕ ಅಂಗೀಕಾರ

ಕರ್ನಾಟಕ ವಿಧಾನ ಸಭೆಯು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ -2024 ವನ್ನು ಇಂದು ಅಂಗೀಕರಿಸಿತು. ಅದರಂತೆ ಇನ್ನು ಮುಂದೆ ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕುಗಳು, ಇತರ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು ಎಂಬ ನಿಯಮ ಕಡ್ಡಾಯವಾಗಿದೆ. 

ಈ ವಿಧೇಯಕದ ಸೂಚನೆಯಂತೆ, ನಾಮಫಲಕಗಳ ಒಟ್ಟಾರೆ ವಿಸ್ತೀರ್ಣದಲ್ಲಿ ಕನ್ನಡ ಭಾಷೆಯನ್ನು ಮೇಲ್ಭಾಗದಲ್ಲಿ ಶೇ.60 ರಷ್ಟು ಪ್ರದರ್ಶಿಸುವುದು ಕಡ್ಡಾಯ ಮಾಡಲಾಗಿದೆ. ಶೇ.40 ರಷ್ಟು ಇತರ ಭಾಷೆಯನ್ನು ಕೆಳಭಾಗದಲ್ಲಿ ಬಳಸಬಹುದಾಗಿದೆ. ಈ ಹಿಂದೆ ಇದನ್ನು ಶೇ.50:50 ಎಂದು ಆದೇಶ ಹೊರಡಿಸಲಾಗಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News