2nd PUC Result: ವಿದ್ಯಾರ್ಥಿಗಳ ಆತ್ಮಹತ್ಯೆಯಿಂದ ತೀವ್ರ ದಿಗ್ಭ್ರಮೆ - ಎಚ್‌ಡಿಕೆ

ಕಡಿಮೆ ಅಂಕ ಬಂದವರು ಮುಂದಿನ ತರಗತಿಯಲ್ಲಿ ಉತ್ತಮ ಅಂಕ ಪಡೆಯಲು ಯತ್ನಿಸಬೇಕು. ಫೇಲಾದವರು ಪಾಸಾಗಲು ಶ್ರಮಿಸಬೇಕು ಎಂದು ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Written by - Zee Kannada News Desk | Last Updated : Jun 19, 2022, 02:39 PM IST
  • ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆಂಬ ಸುದ್ದಿ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ
  • ಅಂಕವೇ ಎಲ್ಲವೂ ಅಲ್ಲ. ಪಾಸು-ಫೇಲು ಸಾಮಾನ್ಯ, ಜೀವನದಲ್ಲೂ ಏಳುಬೀಳು ಇದ್ದೇ ಇರುತ್ತದೆ
  • ಶೈಕ್ಷಣಿಕ ವ್ಯವಸ್ಥೆಯಲ್ಲಿ ಪರೀಕ್ಷಾ ಹಂತಗಳು ಇರುವಂತೆಯೇ ಬದುಕಿನುದ್ದಕ್ಕೂ ಅಗ್ನಿಪರೀಕ್ಷೆಗಳೇ ಇರುತ್ತವೆ
2nd PUC Result: ವಿದ್ಯಾರ್ಥಿಗಳ ಆತ್ಮಹತ್ಯೆಯಿಂದ ತೀವ್ರ ದಿಗ್ಭ್ರಮೆ - ಎಚ್‌ಡಿಕೆ  title=
ಎಚ್.ಡಿ.ಕುಮಾರಸ್ವಾಮಿ ಬೇಸರ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರದಿರುವುದಕ್ಕೆ ಮತ್ತು ಫೇಲಾಗಿದ್ದಕ್ಕೆ 8 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಎಚ್‍ಡಿಕೆ, ‘ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಅಂಕ ಬರಲಿಲ್ಲ ಅಥವಾ ಫೇಲಾದೆವು ಎನ್ನುವ ಕಾರಣಕ್ಕೆ ರಾಜ್ಯದಲ್ಲಿ 8 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಸುದ್ದಿ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಸಿಬಿ ಪೊಲೀಸರ ಕಾರ್ಯಾಚರಣೆ: ನೈಜೀರಿಯನ್ ಡ್ರಗ್ ಪೆಡ್ಲರ್ ಬಂಧನ

‘ಅಂಕವೇ ಎಲ್ಲವೂ ಅಲ್ಲ. ಪಾಸು-ಫೇಲು ಸಾಮಾನ್ಯ, ಜೀವನದಲ್ಲೂ ಏಳುಬೀಳು ಇದ್ದೇ ಇರುತ್ತದೆ. ಕಡಿಮೆ ಅಂಕ ಬಂದವರು ಮುಂದಿನ ತರಗತಿಯಲ್ಲಿ ಉತ್ತಮ ಅಂಕ ಪಡೆಯಲು ಯತ್ನಿಸಬೇಕು. ಫೇಲಾದವರು ಪಾಸಾಗಲು ಶ್ರಮಿಸಬೇಕು. ಅದನ್ನು ಬಿಟ್ಟು ಅಂಕಕ್ಕಾಗಿ ಜೀವವನ್ನೇ ಅಂತ್ಯ ಮಾಡಿಕೊಳ್ಳುವುದು ಹೆತ್ತವರಿಗೆ ಮಾಡುವ ಅನ್ಯಾಯ’ವೆಂದು ಎಚ್‍ಡಿಕೆ ಟ್ವೀಟ್ ಮಾಡಿದ್ದಾರೆ.

‘ಶೈಕ್ಷಣಿಕ ವ್ಯವಸ್ಥೆಯಲ್ಲಿ ಪರೀಕ್ಷಾ ಹಂತಗಳು ಇರುವಂತೆಯೇ ಬದುಕಿನುದ್ದಕ್ಕೂ ಅಗ್ನಿಪರೀಕ್ಷೆಗಳೇ ಇರುತ್ತವೆ. ಅವನ್ನು ಧೈರ್ಯ, ಛಲದಿಂದ ಎದುರಿಸಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ಪೋಷಕರು, ಬೋಧಕರು, ಶಿಕ್ಷಣ ಸಂಸ್ಥೆಗಳು & ಶಿಕ್ಷಣ ಇಲಾಖೆ ಮನದಟ್ಟು ಮಾಡಿಸಬೇಕು’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಶ್ರೀರಾಮ, ಸೀತಾಮಾತೆಗೆ ಅವಮಾನ: ಡಿಕೆಶಿ ರಾಜೀನಾಮೆಗೆ ಬಿಜೆಪಿ ಆಗ್ರಹ

ವಿದ್ಯಾಭ್ಯಾಸದಲ್ಲಿ ಹಿಂದುಳಿದ ಅನೇಕರು ಉನ್ನತ ಸ್ಥಾನಗಳಿಗೆ ಹೋಗಿರುವ ಉದಾಹರಣೆಗಳು ನಮ್ಮ ಮುಂದೆ ಇವೆ. ಹೀಗಾಗಿ ಧೃತಿಗೆಡಬೇಕಿಲ್ಲ. ಪೋಷಕರು ಕೂಡ ಮಕ್ಕಳಿಗೆ ಧೈರ್ಯ ತುಂಬಬೇಕು, ಸೂಕ್ಷ್ಮ ಮನಸ್ಸಿನ ಅವರಿಗೆ ಅಕ್ಕರೆಯಿಂದ ಆತ್ಮಸ್ಥೈರ್ಯ ಮೂಡಿಸಬೇಕು’ ಎಂದು ಸಲಹೆ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News