Karnataka 2nd PUC Result 2024: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ!

Karnataka 2nd PUC Result 2024: 2024ರ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 3.3 ಲಕ್ಷ ವಿದ್ಯಾರ್ಥಿಗಳಾಗಿದ್ದು, 3.6 ಲಕ್ಷ ವಿದ್ಯಾರ್ಥಿನಿಯರಾಗಿದ್ದಾರೆ.

Written by - Puttaraj K Alur | Last Updated : Apr 9, 2024, 09:52 PM IST
  • ನಾಳೆ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ
  • ಬುಧವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶವನ್ನು ಪ್ರಕಟಿಸಲಾಗುವುದು
  • ದ್ವಿತೀಯ ಪಿಯುಸಿ ಪರೀಕ್ಷೆಗೆ 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು
Karnataka 2nd PUC Result 2024: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ! title=
Karnataka 2nd PUC Result 2024

Karnataka 2nd PUC Result 2024: ಏಪ್ರಿಲ್‌ 10 ಅಂದರೆ ನಾಳೆ ರಾಜ್ಯದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಜಗದೀಶ್‌ ಶೆಟ್ಟರ್‌ ತಿರುಗೇಟು!

ಈ ಬಗ್ಗೆ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಲಿದ್ದು, 11ಗಂಟೆಗೆ ನಂತರ https://karresults.nic.in ಅಥವಾ pue.kar.nic ಅಧಿಕೃತ ವೆಬ್‌ಸೈಟ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಇದರ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. 

ಇದನ್ನೂ ಓದಿ: ಲೋಕಸಭಾ ಚುನಾವಣೆಯ ಯುಗಾದಿ ಫಲ ಭವಿಷ್ಯ ಏನು ಗೊತ್ತಾ..?

ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2024ರ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 3.3 ಲಕ್ಷ ವಿದ್ಯಾರ್ಥಿಗಳಾಗಿದ್ದು, 3.6 ಲಕ್ಷ ವಿದ್ಯಾರ್ಥಿನಿಯರಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News