ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿ ಪಿಯುಸಿ ಫಲಿತಾಂಶ ತಡವಾಗುವುದಿಲ್ಲ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನೀಡಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜೂನ್ ಕೊನೇ ವಾರದಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದೆ.
ಪ್ರತಿ ವರ್ಷ ಎಲ್ಲಾ ವಿಷಯಗಳ ಪರೀಕ್ಷೆ ನಂತರ ಮೌಲ್ಯಮಾಪನ ಆಗುತ್ತಿತ್ತು. ಆದರೆ, ಈ ಬಾರಿ ಒಂದೊಂದು ವಿಷಯ ಪರೀಕ್ಷೆ ಆಗುತ್ತಿದ್ದಂತೆ ಮೌಲ್ಯಮಾಪನಕ್ಕೆ ಪ್ಲಾನ್ ಮಾಡಲಾಗಿದೆ. ದ್ವಿತೀಯ ಪಿಯುಸಿ ಕೊನೆಯ ಪರೀಕ್ಷೆ ಮುಗಿಯುವುದರೊಳಗೆ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ಆಪರೇಷನ್ ಕಮಲದ ಸುಳಿವು! "ಚುನಾವಣೆವರೆಗೆ ಕಾದು ನೋಡಿ, ಹಲವರು ನಮ್ಮ ಪಕ್ಷಕ್ಕೆ ಬರುತ್ತಾರೆ"
ಕಳೆದ ವರ್ಷ ಕೊರೊನಾದಿಂದ ಒಂದು ತಿಂಗಳು ತಡವಾಗಿ ಪರೀಕ್ಷೆ ಆರಂಭವಾಗಿತ್ತು. ಪ್ರತಿ ವರ್ಷ ಮಾರ್ಚ್-ಏಪ್ರಿಲ್ ತಿಂಗಳಿನಲ್ಲಿ ಪರೀಕ್ಷೆ ನಡೆಯುತ್ತಿತ್ತು. ಆದರೆ, ಈ ವರ್ಷ ಏಪ್ರಿಲ್-ಮೇ ತಿಂಗಳು ಪರೀಕ್ಷೆ ಜರುಗುತ್ತಿದೆ. ಬೇಗನೆ ಫಲಿತಾಂಶ ನೀಡಲು ರಜಾ ದಿನಗಳಲ್ಲಿಯೂ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಹೀಗಾಗಿ ಈ ಮೊದಲಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಮೌಲ್ಯಮಾಪಕರನ್ನು ನಿಯೋಜಿಸಲಾಗುತ್ತಿದೆ.
ಮೇ 20 ರಿಂದ ಜೂನ್ 15ರೊಳಗೆ ಮೌಲ್ಯಮಾಪನ ಕಾರ್ಯ ಸಂಪೂರ್ಣವಾಗಿ ಮುಗಿಯಲಿದೆ. ಉನ್ನತ ಶಿಕ್ಷಣಕ್ಕೆ ಹೋಗುವ ರಾಜ್ಯದ ಮಕ್ಕಳಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ. ಕೇಂದ್ರ ಪರೀಕ್ಷೆಗಳಿಗೆ ಅನುಕೂಲವಾಗುವಂತಹ ನಿಖರವಾಗಿ ಮತ್ತು ತ್ವರಿತ ಗತಿಯಲ್ಲಿ ಫಲಿತಾಂಶ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಪಿಯು ಮಂಡಳಿಯ ನಿರ್ದೇಶಕ ಆರ್.ರಾಮಚಂದ್ರನ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಶೀಘ್ರವೇ ಕೊರೊನಾ ಮಾರ್ಗಸೂಚಿ ಬಿಡುಗಡೆ ಮಾಡಲಿರುವ ರಾಜ್ಯ ಸರ್ಕಾರ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.