ಬೆಂಗಳೂರು: ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ಹೆಸರು: ಸಹಾಯಕ ಪ್ರಾಧ್ಯಾಪಕರು (Assistant Professor)
ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 1242 ಹುದ್ದೆಗಳು
ಉದ್ಯೋಗ ಸ್ಥಳ: ಕರ್ನಾಟಕ
ಅನ್ವಯಿಸುವ ವಿಧಾನ: ಆನ್‌ಲೈನ್
ಅಧಿಕೃತ ವೆಬ್‌ಸೈಟ್: https://cetonline.karnataka.gov.in/kea
ಇದನ್ನೂ ಓದಿ- ರೈತನ ಮಗನಿಗೆ ಒಲಿದ ಚಿನ್ನದ ಪದಕ..!
ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿ 2021ರ ಅರ್ಹತಾ ಮಾನದಂಡ:-
ಶೈಕ್ಷಣಿಕ ಅರ್ಹತೆ:
ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ (Karnataka Assistant Professor Recruitment 2021) ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಜೊತೆಗೆ NET, KSET ಹಾಗೂ Phd ಮುಗಿಸಿರಬೇಕು.
ವಯಸ್ಸಿನ ಮಾನದಂಡ:
ಕನಿಷ್ಠ 22 ವರ್ಷಗಳ ನಂತರ ಹಾಗೂ ಗರಿಷ್ಠ 40 ವರ್ಷಗಳ ಒಳಗಿನ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಪ್ರವರ್ಗ 2ಎ, ಪ್ರವರ್ಗ 2ಬಿ ಹಾಗೂ ಪ್ರವರ್ಗ 3ಎ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುವುದು.
ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶುಲ್ಕ ವಿವರ:
* ಸಾಮಾನ್ಯ ವರ್ಗ ಮತ್ತು ಇತರ ಪ್ರವರ್ಗದ ಅಭ್ಯರ್ಥಿಗಳಿಗೆ ಶುಲ್ಕ = 2,000ರೂ.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶುಲ್ಕ = 1,000 ರೂ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ - ಅಕ್ಟೋಬರ್ 31, 2021
ಇದನ್ನೂ ಓದಿ- Gita Gopinath To Leave IMF: IMF ನೌಕರಿಯನ್ನು ತೊರೆಯಲಿದ್ದಾರೆಯೇ ಗೀತಾ ಗೋಪಿನಾಥ್? ಅವರ ಮುಂದಿನ ಯೋಜನೆ ಏನು?
ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ:
ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ಸಹಾಯಕ ಪ್ರಾಧ್ಯಾಪಕರ ನೇಮಕಾತಿ 2021 ಫಾರ್ಮ್ ಕರ್ನಾಟಕ ಅರ್ಜಿದಾರರ ಸುಧಾರಣಾ ಮಂಡಳಿಯಿಂದ ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ಅಧಿಕೃತ ವೆಬ್ಸೈಟ್ https://cetonline.karnataka.gov.in/kea ಗೆ ಭೇಟಿ ನೀಡುವ ಮೂಲಕ ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ಸಹಾಯಕ ಪ್ರಾಧ್ಯಾಪಕರ ಅಧಿಸೂಚನೆಯನ್ನು ತಪ್ಪದೇ ಓದಿ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ https://kea.kar,nic.in ಗೆ ಭೇಟಿ ನೀಡಬಹುದು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ