ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಬಿ.ವೈ.ವಿಜಯೇಂದ್ರ ಹೇಳಿದ್ದೇನು?

Karnataka BJP new office-bearers appointed: ಮುರುಗೇಶ್ ನಿರಾಣಿ, ಬೈರತಿ ಬಸವರಾಜ್, ರಾಜುಗೌಡ ನಾಯಕ್, ಎನ್.ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯ್ಕ್, ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್, ಎಂ.ರಾಜೇಂದ್ರರನ್ನು ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

Written by - Puttaraj K Alur | Last Updated : Dec 24, 2023, 01:52 PM IST
  • ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ
  • 10 ಉಪಾಧ್ಯಕ್ಷರು, 4 ರಾಜ್ಯ ಪ್ರಧಾನ ಕಾರ್ಯದರ್ಶಿಗಳು
  • 10 ರಾಜ್ಯ ಕಾರ್ಯದರ್ಶಿಗಳು, ಖಜಾಂಚಿ & 7 ಮೋರ್ಚಾಗಳ ರಾಜ್ಯ ಅಧ್ಯಕ್ಷರಿಗೆ ಸ್ಥಾನ
ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಬಿ.ವೈ.ವಿಜಯೇಂದ್ರ ಹೇಳಿದ್ದೇನು? title=
ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿ 1 ತಿಂಗಳ ನಂತರ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಹೊಸ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ವಿಜಯೇಂದ್ರ ಅವರು ಶನಿವಾರ ಬಿಜೆಪಿ ಕರ್ನಾಟಕದ ನೂತನ ರಾಜ್ಯ ಪದಾಧಿಕಾರಿಗಳನ್ನು ಘೋಷಿಸಿದ್ದಾರೆ. ಈ ಪಟ್ಟಿಯಲ್ಲಿ 10 ಉಪಾಧ್ಯಕ್ಷರು, 4 ರಾಜ್ಯ ಪ್ರಧಾನ ಕಾರ್ಯದರ್ಶಿಗಳು, 10 ರಾಜ್ಯ ಕಾರ್ಯದರ್ಶಿಗಳು, ಖಜಾಂಚಿ ಮತ್ತು 7 ಮೋರ್ಚಾಗಳ ರಾಜ್ಯ ಅಧ್ಯಕ್ಷರ ಹೆಸರುಗಳಿವೆ.

ಬಿಜೆಪಿ ರಾಜ್ಯ ಉಪಾಧ್ಯಕ್ಷರು: ಹಿರಿಯ ನಾಯಕರಾದ ಮುರುಗೇಶ್ ನಿರಾಣಿ, ಬೈರತಿ ಬಸವರಾಜ್, ರಾಜುಗೌಡ ನಾಯಕ್, ಎನ್.ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯ್ಕ್, ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್, ಎಂ.ರಾಜೇಂದ್ರ ಅವರನ್ನು ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಯಡಿಯೂರಪ್ಪ ಆಪ್ತ ಬಳಗಕ್ಕೆ ರಾಜ್ಯ ಪದಾಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು: 4 ಬಾರಿ ಶಾಸಕರಾಗಿರುವ ಮಾಜಿ ಸಚಿವ ವಿ.ಸುನೀಲ್ ಕುಮಾರ್, ಪಿ.ರಾಜೀವ್‌, ಕೆ.ಆರ್‌.ಪುರಂನ ಮಾಜಿ ಶಾಸಕ ಎನ್‌.ಎಸ್‌.ನಂದೀಶ್ ರೆಡ್ಡಿ, ಹಾಸನದ ಜೆ.ಪ್ರೀತಂ ಗೌಡರಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯದರ್ಶಿಗಳು: ಶೈಲೇಂದ್ರ ಬೆಲ್ದಾಳೆ, ಡಿ.ಎಸ್.ಅರುಣ್, ಬಸವರಾಜ ಮತ್ತೀಮೋಡ್, ಸಿ.ಮುನಿರಾಜು, ವಿನಯ್ ಬಿದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಲಕ್ಷ್ಮಿ ಅಶ್ವಿನ್ ಗೌಡ ಮತ್ತು ಅಂಬಿಕಾ ಹುಲಿನಾಯ್ಕರ್ ಅವರು ರಾಜ್ಯ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ.

ಇನ್ನು ಬಿಜೆಪಿ ರಾಜ್ಯ ಖಜಾಂಚಿಯಾಗಿ ಸುಬ್ಬನರಸಿಂಹ ಆಯ್ಕೆಯಾಗಿದ್ದರೆ, ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಸಿ.ಮಂಜುಳಾ, ಯುವ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಧೀರಜ್ ಮುನಿರಾಜು, ಎಸ್‍ಟಿ ಮೋರ್ಚಾಗೆ ಬಂಗಾರು ಹನುಮಂತು, ಎಸ್‍ಸಿ ಮೋರ್ಚಾಗೆ ಎಸ್.ಮಂಜುನಾಥ್ ಅಲಿಯಾಸ್ ಸಿಮೆಂಟ್ ಮಂಜು, ಹಿಂದುಳಿದ ವರ್ಗಗಳ ಮೋರ್ಚಾಗೆ ರಘು ಕೌಟಿಲ್ಯ, ರೈತ ಮೋರ್ಚಾಗೆ ಎ.ಎಸ್.ಪಾಟೀಲ್ ನಡಹಳ್ಳಿ, ಅಲ್ಪಸಂಖ್ಯಾತ ಮೋರ್ಚಾಗೆ ಅನಿಲ್ ಥಾಮಸ್ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ:  ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ

ಮೋದಿ ಪ್ರಧಾನಿ ಮಾಡಲು ಶಪಥ ಮಾಡೋಣ!

ಬಿಜೆಪಿಯ ಹೊಸ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಬಳಿಕ ಟ್ವೀಟ್ ಮಾಡಿರುವ ಬಿ.ವೈ.ವಿಜಯೇಂದ್ರ ಅವರು, ಪಕ್ಷ ಸಂಘಟನೆಗೆ ಹೊಸ ಚೈತನ್ಯ ತುಂಬಲು ರಾಜ್ಯ ಬಿಜೆಪಿಗೆ ನೂತನವಾಗಿ ನೇಮಕಗೊಂಡಿರುವ ಪದಾಧಿಕಾರಿಗಳಿಗೆ ಆತ್ಮೀಯ ಅಭಿನಂದನೆಗಳನ್ನು ತಿಳಿಸಿದ್ದಾರೆ. ‘ಮುಂಬರುವ ಲೋಕಸಭಾ ಮಹಾ ಚುನಾವಣೆಯಲ್ಲಿ ಶತಕೋಟಿ ಜನರ ಅಭಿಲಾಷೆ ಹಾಗೂ ಕಾರ್ಯಕರ್ತ ಸಮೂಹದ ಅಪೇಕ್ಷೆಯಂತೆ ನಮ್ಮೆಲ್ಲರ ಸಂಕಲ್ಪದ ಗುರಿ ತಲುಪಲು ವಿರಮಿಸದೇ ಶ್ರಮಿಸೋಣ, ಮತ್ತೆ ನಮ್ಮ ಹೆಮ್ಮೆಯ ಪ್ರಧಾನಿ ಮೋದಿಯವರನ್ನು ಪ್ರಧಾನಿಯನ್ನಾಗಿಸಲು ಕರ್ನಾಟಕದ ಗೆಲುವಿನ ಕಿರೀಟ ಸಮರ್ಪಿಸುವ ಶಪಥ ಮಾಡೋಣ. ಈ ಕ್ಷಣದಿಂದಲೇ ತಾವೆಲ್ಲರೂ ಕ್ರಿಯಾಶೀಲರಾಗಿ  ಜವಾಬ್ದಾರಿ ಪ್ರಾರಂಭಿಸುವಂತೆ ವಿನಂತಿಸುವೆ’ ಎಂದು ಮನವಿ ಮಾಡಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News