ಬೆಂಗಳೂರು: ಬಿಜೆಪಿಗೆ ಬಿ.ವೈ.ವಿಜಯೇಂದ್ರ ಅವರು ಲಾಟರಿ ಅಧ್ಯಕ್ಷ. ಕೇವಲ 7 ತಿಂಗಳಲ್ಲಿ ಲಾಟರಿ ಹೊಡೆದು ಅವರು ಅಧ್ಯಕ್ಷರಾಗಿದ್ದಾರೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗಲಿದೆ ಲಾಟರಿನಾ? ಅಥವಾ ಬಂಪರ್ ಲಾಟರಿನಾ ಅಂತಾ ಖಡಕ್ ಎಚ್ಚರಿಕೆ ನೀಡಿದ್ದಾರೆ. ಚುನಾವಣೆಯಲ್ಲಿ ಲಾಟರಿ ಎಂಬುದನ್ನು ನಮ್ಮ ಕಾರ್ಯಕರ್ತರು ಮತ್ತು ರಾಜ್ಯದ ಜನರು ನಿರ್ಧರಿಸುತ್ತಾರೆ ಅಂತಾ ಡಿ.ಕೆ.ಶಿವಕುಮಾರ್‌ಗೆ ತಿರುಗೇಟು ನೀಡಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಹೈನುಗಾರರು ಹೈರಾಣಾಗಿದ್ದಾರೆ. ಮಾನ್ಯ @BSYBJP ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿದ್ದರ ಪರಿಣಾಮವಾಗಿ ಬಿಜೆಪಿ ಆಡಳಿತದಲ್ಲಿ ಪ್ರತಿ ನಿತ್ಯ 80 ರಿಂದ 85 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿತ್ತು.
ಆದರೆ ಇಂದಿನ ಕಾಂಗ್ರೆಸ್ ಸರ್ಕಾರ… pic.twitter.com/CvoEBbJVNN
— Vijayendra Yediyurappa (@BYVijayendra) February 5, 2024
ಇದನ್ನೂ ಓದಿ: Budget Session 2024: ಲೋಕಸಭಾ ಚುನಾವಣೆಯಲ್ಲಿ BJP 400ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ- ಪ್ರಧಾನಿ ಮೋದಿ
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಜನರು ಮಾತ್ರವಲ್ಲ ಜಾನುವಾರುಗಳು ಸಹ ಸರ್ಕಾರಕ್ಕೆ ಶಾಪ ಹಾಕುತ್ತಿವೆ. ಜಾನುವಾರುಗಳ ಕೋಪಕ್ಕೆ ಸರ್ಕಾರ ಬಲಿಯಾಗಲಿದೆ ಎಂದು ಬಿ.ವೈ.ವಿಜಯೇಂದ್ರ ಅವರು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಬಿ.ಎಸ್.ಯಡಿಯೂರಪ್ಪನವರು ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುತ್ತಿದ್ದರು. ಪರಿಣಾಮ ಬಿಜೆಪಿ ಆಡಳಿತದಲ್ಲಿದ್ದಾಗ 26 ಲಕ್ಷ ಗ್ರಾಮೀಣ ರೈತರಿಂದ 80-85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಈ ಸರ್ಕಾರ ಬರೋಬ್ಬರಿ 716 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ. ಇದರಿಂದ 10 ಲಕ್ಷ ಲೀಟರ್ ಹಾಲು ಸಂಗ್ರಹಣೆ ಕಡಿಮೆ ಆಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Sanjay Singh: ಜೈಲಿನಲ್ಲಿರುವ AAP ನಾಯಕ ಸಂಜಯ್ ಸಿಂಗ್ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುವಂತಿಲ್ಲ!
ಕಾಂಗ್ರೆಸ್ ನಾಯಕರು ಬಿಜೆಪಿ ಬಗ್ಗೆ ಟೀಕೆ ಮಾಡುತ್ತಾರೆ. ಮಾನ ಮಾರ್ಯಾದೆ ಇದೆಯಾ ಅಂತಾರೆ. ನಾನು ಆ ಭಾಷೆ ಬಳಕೆ ಮಾಡುವುದಿಲ್ಲ. ಈ ಸರ್ಕಾರ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ರೈತರಿಗೆ ಬಿಡುಗಡೆ ಮಾಡಬೇಕು. ಈ ಸರ್ಕಾರ ರೈತರ ಪ್ರೋತ್ಸಾಹ ಧನ ಉಳಿಸಿಕೊಂಡ ಪಾಪದ ಸರ್ಕಾರ ಅಂತಾರೆ. ಅನುದಾನ ನೀಡಿಲ್ಲವೆಂದು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುತ್ತಾರೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.