ಆಪರೇಷನ್ ಕಮಲದ ಸುಳಿವು! "ಚುನಾವಣೆವರೆಗೆ ಕಾದು ನೋಡಿ, ಹಲವರು ನಮ್ಮ ಪಕ್ಷಕ್ಕೆ ಬರುತ್ತಾರೆ"

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೊಂದೆ ವರ್ಷ ಬಾಕಿ ಇದ್ದು, ಚುನಾವಣೆವರೆಗೆ ಕಾದು ನೋಡಿ, ಹಲವರು ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಪರೇಷನ್ ಕಮಲದ ಸುಳಿವನ್ನ ನೀಡಿದ್ರಾ ಎಂಬ ಪ್ರಶ್ನೆ ಕಾಡುತ್ತಿದೆ.

Written by - Prashobh Devanahalli | Edited by - Chetana Devarmani | Last Updated : Apr 24, 2022, 02:32 PM IST
  • ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೊಂದೆ ವರ್ಷ ಬಾಕಿ ಇದೆ
  • ಚುನಾವಣೆವರೆಗೆ ಕಾದು ನೋಡಿ, ಹಲವರು ನಮ್ಮ ಪಕ್ಷಕ್ಕೆ ಬರುತ್ತಾರೆ
  • ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ
  • ಆಪರೇಷನ್ ಕಮಲದ ಸುಳಿವನ್ನ ನೀಡಿದ್ರಾ ಎಂಬ ಪ್ರಶ್ನೆ?
ಆಪರೇಷನ್ ಕಮಲದ ಸುಳಿವು! "ಚುನಾವಣೆವರೆಗೆ ಕಾದು ನೋಡಿ, ಹಲವರು ನಮ್ಮ ಪಕ್ಷಕ್ಕೆ ಬರುತ್ತಾರೆ" title=
ನಳಿನ್ ಕುಮಾರ್ ಕಟೀಲ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೊಂದೆ ವರ್ಷ ಬಾಕಿ ಇದ್ದು, ಚುನಾವಣೆವರೆಗೆ ಕಾದು ನೋಡಿ, ಹಲವರು ನಮ್ಮ ಪಕ್ಷಕ್ಕೆ ಬರುತ್ತಾರೆ ಎಂದು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಪರೇಷನ್ ಕಮಲದ ಸುಳಿವನ್ನ ನೀಡಿದ್ರಾ ಎಂಬ ಪ್ರಶ್ನೆ ಕಾಡುತ್ತಿದೆ.

ಇದನ್ನೂ ಓದಿ: ಬಾಡಿಗೆ ಕೇಳುವ ನೆಪದಲ್ಲಿ ಮನೆಯನ್ನೇ ದೋಚುತ್ತಾರೆ ಹುಷಾರ್!

ನಗರದ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ಚುನಾವಣಾ ತಯಾರಿ ಸಭೆಗೂ ಮುನ್ನ ಮಾತನಾಡಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿಯಲ್ಲಿ ಬಹಳ‌ ಜನ ಗೆಲ್ಲುವ ಅಭ್ಯರ್ಥಿಗಳಿದ್ದಾರೆ. ಹೀಗಾಗಿ ಹೆಚ್ಚು ಅವಶ್ಯಕತೆ ಇಲ್ಲ. ಹಳೇ ಮೈಸೂರು ಭಾಗದಲ್ಲಿ ತುಂಬಾ ಜನ ನಮ್ಮ ಪಕ್ಷದ ಸಂಪರ್ಕದಲ್ಲಿದ್ದಾರೆ. ಸಿಎಂ ಸಂಪರ್ಕದಲ್ಲಿಯೂ ಇದ್ದಾರೆ. ಎಲ್ಲವನ್ನೂ ಪರಿಶೀಲನೆ ಮಾಡುತ್ತಿದ್ದೇವೆ. ನಾವು ತೆಗೆದುಕೊಂಡ ನಿರ್ಣಯದ ಮೇಲೆ ವರಿಷ್ಠರು ಸಹಕಾರ ಕೊಡುತ್ತಾರೆ. ನಾನು ಮತ್ತು‌ ಮುಖ್ಯಮಂತ್ರಿಗಳು ಇದರ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.

ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಪಕ್ಷ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಇದಕ್ಕೆ ರಾಷ್ಟ್ರೀಯ ನಾಯಕರ ಒಪ್ಪಿಗೆ ಪಡೆದುಕೊಳ್ಳುತ್ತೇವೆ. ಬೇರೆ ಬೇರೆ ಪಕ್ಷಗಳ ಹತ್ತಾರು ಜನ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಬೇರೆ ಬೇರೆ ಪಕ್ಷಗಳ ನಾಯಕರೂ ನಮ್ಮ ಸಂಪರ್ಕದಲ್ಲಿದ್ದಾರೆ. ಯಾರನ್ನು ತಗೋಬೇಕು, ಅಲ್ಲಿರುವ ಸಮಸ್ಯೆಗಳ ಅವಲೋಕನ ಮಾಡ್ಕೊಂಡು ನಿರ್ಧಾರ ಮಾಡಲಾಗುವುದು. ಎಲ್ಲವನ್ನೂ ಯೋಚನೆ ಮಾಡ್ಕೊಂಡು ಮುಂದಿನ ದಿನಗಳಲ್ಲಿ ನಿರ್ಧರಿಸುತ್ತೇವೆ. ಸರ್ಕಾರ ಮತ್ತು ಪಕ್ಷ‌ ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ತರಕಾರಿ ಬೆಲೆ ಕೊಂಚ ಏರಿಳಿತ: ಇಂದಿನ ದರ ಇಂತಿದೆ

ಮುಂದಿನ ಚುನಾವಣೆಗೆ ಅಭ್ಯರ್ಥಿಗಳ‌ ಆಯ್ಕೆಗೆ ಸರ್ವೆ ವಿಚಾರ:

ನಾವು ಎಲ್ಲ ರೀತಿಯ ಸರ್ವೆಗಳನ್ನೂ ಮಾಡುತ್ತೇವೆ. ಸರ್ವೆ ಕಾರ್ಯಗಳು ಪ್ರಾರಂಭ ಆಗುತ್ತವೆ. ಸರ್ಕಾರ, ಜನಾಭಿಪ್ರಾಯ ಎಲ್ಲವನ್ನೂ ನೋಡ್ತೇವೆ ಎಂದರು. ಇದೇ ವೇಳೆ ಸ್ವಾಮೀಜಿಗಳಿಗೆ 50 ಕ್ಷೇತ್ರ ಬಿಟ್ಟುಕೊಡಿ ಎಂದು ಭಟ್ಕಳದಲ್ಲಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿಕೆ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, ಬ್ರಹ್ಮಾನಂದ ಸ್ವಾಮೀಜಿಗಳು ನಮ್ಮ ಗುರುಗಳು. ಅವರ ಮೇಲೆ ಅಪಾರ ಗೌರವ ಇದೆ. ರಾಜಕಾರಣದ ಬಗ್ಗೆ ಅವರು ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅವರ ಹೇಳಿಕೆ ಬಗ್ಗೆ ವಿಚಾರಿಸುತ್ತೇವೆ ಎಂದು ಹೇಳಿದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News