ಕರ್ನಾಟಕವನ್ನು ಬರ್ಬಾದ್‌ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಮಾಡೆಲ್: ಬಿಜೆಪಿ ಆಕ್ರೋಶ

ರಾಜ್ಯದ ಇಂಧನ ಇಲಾಖೆ ತನ್ನ ದೈನಂದಿನ ಚಟುವಟಿಕೆಗಳಿಗೂ ಸಹ ಹಣವಿಲ್ಲವೆಂದು ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿಯನ್ನು ಪಾವತಿಸಿ ಎಂದು ಪತ್ರ ಬರೆದಿರುವುದು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸುಸ್ಪಷ್ಟ ನಿದರ್ಶನವೆಂದು ಬಿಜೆಪಿ ಟೀಕಿಸಿದೆ.

Written by - Puttaraj K Alur | Last Updated : Jul 2, 2024, 05:46 PM IST
  • ಆರ್ಥಿಕ ಮುಗ್ಗಟ್ಟಿನ ಬಗ್ಗೆ ರಾಜ್ಯ ಸರ್ಕಾರಕ್ಕೆ ಇಂಧನ ಇಲಾಖೆಯಿಂದ ಪತ್ರ ವಿಚಾರ
  • ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ ಬಿಜೆಪಿ
  • ಸುಭಿಕ್ಷವಾಗಿದ್ದ ಕರ್ನಾಟಕವನ್ನು ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಹಾಳು ಮಾಡಿದೆ
ಕರ್ನಾಟಕವನ್ನು ಬರ್ಬಾದ್‌ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಮಾಡೆಲ್: ಬಿಜೆಪಿ ಆಕ್ರೋಶ title=
ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ!

ಬೆಂಗಳೂರು: ಆರ್ಥಿಕ ಮುಗ್ಗಟ್ಟಿನ ಬಗ್ಗೆ ರಾಜ್ಯ ಸರ್ಕಾರಕ್ಕೆ ಇಂಧನ ಇಲಾಖೆ ಬರೆದಿರುವ ಪತ್ರವನ್ನು ಉಲ್ಲೇಖಿಸಿ ಕರ್ನಾಟಕ ಬಿಜೆಪಿಯು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದೆ.

ಈ ಬಗ್ಗೆ ಮಂಗಳವಾರ ಟ್ವೀಟ್‌ ಮಾಡಿರುವ ಬಿಜೆಪಿ, ‘ಕರ್ನಾಟಕವನ್ನು ಎಲ್ಲಾ ವಲಯಗಳಲ್ಲೂ ಬರ್ಬಾದ್‌ ಮಾಡುವುದೇ ಕಾಂಗ್ರೆಸ್ ಸರ್ಕಾರದ ಅಸಲಿ ಕರ್ನಾಟಕ ಮಾಡೆಲ್, ಈಗಾಗಲೇ ಸುಭಿಕ್ಷವಾಗಿದ್ದ ಕರ್ನಾಟಕವನ್ನು ಒಂದು ವರ್ಷದಲ್ಲಿ ಹಾಳು ಮಾಡಿದ್ದು, ಇದರ ಸಂಪೂರ್ಣ ಶ್ರೇಯ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆʼ ಎಂದು ತೀವ್ರ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್‌ ರಾಜೀನಾಮೆ ನೀಡುವ ಸಾಧ್ಯತೆ!

ʼರಾಜ್ಯದ ಇಂಧನ ಇಲಾಖೆ ತನ್ನ ದೈನಂದಿನ ಚಟುವಟಿಕೆಗಳಿಗೂ ಸಹ ಹಣವಿಲ್ಲವೆಂದು ಅಸಹಾಯಕತೆ ವ್ಯಕ್ತಪಡಿಸಿ, ಹೆಚ್ಚಿನ ಸಾಲ ಪಡೆಯಲು ಅನುಮತಿ ನೀಡಿ, ಇಲ್ಲವೇ ಸರ್ಕಾರದಿಂದ ಬರಬೇಕಿರುವ ಬಾಕಿಯನ್ನು ಪಾವತಿಸಿ ಎಂದು ಪತ್ರ ಬರೆದಿರುವುದು ಕಾಂಗ್ರೆಸ್ ಸರ್ಕಾರ ಕರ್ನಾಟಕವನ್ನು ಎಷ್ಟರ ಮಟ್ಟಿಗೆ ಹದಗೆಡಿಸಿದೆ ಎಂಬುದರ ಸುಸ್ಪಷ್ಟ ನಿದರ್ಶನʼವೆಂದು ಟೀಕಿಸಿದೆ.

ʼಸಿಎಂ ಸಿದ್ದರಾಮಯ್ಯನವರೇ ಕರ್ನಾಟಕ ಬರ್ಬಾದ್‌ ಆಗಿದೆ ಎಂಬುದು ನಿಮ್ಮ ಇಂಧನ ಇಲಾಖೆ ಬರೆದ ಪತ್ರದಿಂದಲೇ ಕೊನೆಗೂ ಋಜುವಾತಾಗಿದೆ. ಸಿದ್ದರಾಮಯ್ಯನವರು, ಕರ್ನಾಟಕ ಕಂಡ ಅತ್ಯಂತ ದುರ್ಬಲ ಸಿಎಂ ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿಯ ಅಗತ್ಯವಿದೆಯೇ..!?ʼ ಎಂದು ಬಿಜೆಪಿ ಪ್ರಶ್ನಿಸಿದೆ.

ಇದನ್ನೂ ಓದಿ: ಸಂತೆಯಲ್ಲಿ ಸುಂಕ ವಸೂಲಿ: ರೈತರಿಂದ ದಿಢೀರ್ ಪ್ರತಿಭಟನೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News