ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಡೆತ್ ಆಡಿಟ್‌ಗೆ ಆರೋಗ್ಯ ಇಲಾಖೆ ಮುಂದಾಗಿದೆ. ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ, ಈ ವರ್ಷದ ಜನವರಿಯಿಂದ ರಾಜ್ಯದಾದ್ಯಂತ ಒಟ್ಟು 93,012 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 5,878 ಪ್ರಕರಣಗಳು ಬಿಬಿಎಂಪಿ ವ್ಯಾಪ್ತಿಯಲ್ಲಿ, 310 ಬೆಂಗಳೂರು ನಗರ ಮತ್ತು 467 ಬೆಂಗಳೂರು ಗ್ರಾಮಾಂತರದಲ್ಲಿ ವರದಿಯಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ಕಾಯಿಲೆಯಿಂದ ಉಂಟಾಗುತ್ತಿರುವ ಸಾವುಗಳು ಆತಂಕವನ್ನುಂಟು ಮಾಡಿವೆ. ಹೀಗಾಗಿ ಡೆಂಗ್ಯೂಗೆ ಬಲಿಯಾದವರ ಕುರಿತು ಡೆತ್ ಆಡಿಟ್ ನಡೆಸಲು ಆರೋಗ್ಯ ಇಲಾಖೆ ಮುಂದಾಗಿದೆ. ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ʼಡೆಂಗ್ಯೂ ಪ್ರಕರಣಗಳು ಹೆಚ್ಚಾದ ತಕ್ಷಣ ಎಚ್ಚರವಹಿಸಬೇಕಿದ್ದ ಆರೋಗ್ಯ ಇಲಾಖೆ ಸಿಎಂ ಸಿದ್ದರಾಮಯ್ಯರನ್ನು ಮೀರಿಸುವಂತೆ ನಿದ್ದೆಗೆ ಶರಣಾಗಿದ್ದೇ ಡೆಂಗ್ಯೂ ರಾಜ್ಯದೆಲ್ಲೆಡೆ ಹಬ್ಬಲು ಪ್ರಮುಖ ಕಾರಣʼವೆಂದು ಕಿಡಿಕಾರಿದೆ.
ಜವಾಬ್ದಾರಿಯುಳ್ಳ ಮಗನಿದ್ದರೆ ಮನೆ ಚೆನ್ನಾಗಿರುತ್ತದೆ ಎಂಬ ಮಾತಿದೆ, ಆದರೆ ವಿಪರ್ಯಾಸವೆಂದರೆ ಕರ್ನಾಟಕದ ಘನತೆವೆತ್ತ ಸರ್ಕಾರದಲ್ಲಿ ಬಹುತೇಕ ಸಚಿವರೆಲ್ಲರೂ ಬೇಜವಾಬ್ದಾರಿಗಳು!! ಅದರಲ್ಲಿಯೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ 🏥 ಇಲಾಖೆಯ ಹೊಣೆ ಹೊತ್ತ ಸಚಿವ @dineshgrao ಅವರು, ಅದ್ಯಾವ ದೇಶದಲ್ಲಿದ್ದಾರೆ ಏನು ಮಾಡುತ್ತಿದ್ದಾರೆ ಎಂಬುದು…
— BJP Karnataka (@BJP4Karnataka) July 2, 2024
ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡುವ ಸಾಧ್ಯತೆ!
ʼಜವಾಬ್ದಾರಿಯುಳ್ಳ ಮಗನಿದ್ದರೆ ಮನೆ ಚೆನ್ನಾಗಿರುತ್ತದೆ ಎಂಬ ಮಾತಿದೆ, ಆದರೆ ವಿಪರ್ಯಾಸವೆಂದರೆ ಕರ್ನಾಟಕದ ಘನತೆವೆತ್ತ ಸರ್ಕಾರದಲ್ಲಿ ಬಹುತೇಕ ಸಚಿವರೆಲ್ಲರೂ ಬೇಜವಾಬ್ದಾರಿಗಳು!! ಅದರಲ್ಲಿಯೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೊಣೆ ಹೊತ್ತ ಸಚಿವ ದಿನೇಶ್ ಗುಂಡೂರಾವ್ ಅವರು, ಅದ್ಯಾವ ದೇಶದಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಎಂಬುದು ತಿಳಿಯದು. ಡೆಂಗ್ಯೂ ಮಹಾಮಾರಿ ಕನ್ನಡಿಗರನ್ನು ಈ ಪರಿ ಕಾಡುತ್ತಿದ್ದರೂ ಆರೋಗ್ಯ ಸಚಿವರು ಟ್ವೀಟ್ ಹೊರತುಪಡಿಸಿ ಮತ್ತಿನ್ನೇನನ್ನೂ ಮಾಡದಿರುವುದು ಬೇಜವಾಬ್ದಾರಿತನದ ಸುಸ್ಪಷ್ಟ ನಿದರ್ಶನʼವೆಂದು ಬಿಜೆಪಿ ಟೀಕಿಸಿದೆ.
ʼಕಾಂಗ್ರೆಸ್ ಸರ್ಕಾರ ಕರ್ನಾಟಕಕ್ಕೆ ವಕ್ಕರಿಸಿದ ದಿನದಿಂದ ಇಲ್ಲಿಯವರೆಗೂ ಕಲುಷಿತ ನೀರು ಸೇವಿಸಿ ಅಸುನೀಗಿದ ಹಾಗೂ ಅಸ್ವಸ್ಥಗೊಂಡವರ ಸಂಖ್ಯೆ ದಿನೇ ದಿನೇ ಏರುತ್ತಿದೆ. ಕನ್ನಡಿಗರಿಗೆ ಶುದ್ಧ ಕುಡಿಯುವ ನೀರನ್ನೂ ಸಹ ನೀಡಲಾಗದ ಅಯೋಗ್ಯ ಸರ್ಕಾರ ಎಂಬ ಕುಖ್ಯಾತಿ ಕಾಂಗ್ರೆಸ್‌ನದ್ದು. ಕನ್ನಡಿಗರ ಆರೋಗ್ಯದ ಬಗ್ಗೆ ಕಾಂಗ್ರೆಸ್‌ಗೆ ಅದ್ಯಾವ ಪರಿ ಕಾಳಜಿ ಇದೆ ಎಂಬುದಕ್ಕೆ ಈ ಮೇಲಿನ ಘಟನೆಗಳೇ ಸಾಕ್ಷಿʼ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಸಂತೆಯಲ್ಲಿ ಸುಂಕ ವಸೂಲಿ: ರೈತರಿಂದ ದಿಢೀರ್ ಪ್ರತಿಭಟನೆ
ʼಈ ಹಿಂದಿನ ಸರ್ಕಾರ ಅಂಗನವಾಡಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಮಕ್ಕಳ ಸರ್ವತೋಮುಖ ಹಾಗೂ ಸದೃಢ ಬೆಳವಣಿಗೆಗೆ ಕಾರಣವಾಗಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಅಂಗನವಾಡಿ ಮಕ್ಕಳಿಗೆ ಕೊಳೆತ ಮೊಟ್ಟೆಯನ್ನು ವಿತರಿಸುವ ಮೂಲಕ ತಾನೆಷ್ಟು ದುಷ್ಟ ಎಂಬುದನ್ನು ನಿರೂಪಿಸಿತ್ತು. ಈಗ ಅದು ಸಾಲದೆಂಬಂತೆ ಹುಳು ಹಿಡಿದಿರುವ ಗೋಧಿ ರವೆಯನ್ನು ನೀಡಿ ಅದರಲ್ಲಿ ಉಪ್ಪಿಟ್ಟು ಮಾಡಿಕೊಳ್ಳಿ ಎನ್ನುತ್ತಿದೆ. ಇಂತಹ ಭಂಡ ಸರ್ಕಾರವನ್ನು ಕರ್ನಾಟಕದ ಇತಿಹಾಸದಲ್ಲಿ ಹಿಂದೆಂದೂ ನೋಡಿರಲಿಲ್ಲʼವೆಂದು ಬಿಜೆಪಿ ಟ್ವೀಟ್ ಮಾಡಿದೆ.
ʼಕನ್ನಡಿಗರನ್ನು ಸಮಸ್ಯೆಗಳು ಕಿತ್ತು ತಿನ್ನುತ್ತಿದ್ದರೂ ಕಾಂಗ್ರೆಸ್ ಸರ್ಕಾರ ತನಗೂ ಅದಕ್ಕೂ ಸಂಬಂಧವೇ ಇಲ್ಲವೆಂಬಂತೆ ಲೂಟಿಯಲ್ಲಿ ನಿರತವಾಗಿದೆ. ಲೂಟಿ ಹೊಡೆಯುವ ಸಮಯದಲ್ಲಿ ಒಗ್ಗಟ್ಟು ತೋರುವ ಕಾಂಗ್ರೆಸ್ಸಿಗರು ಲೂಟಿ ಮುಗಿದ ನಂತರ ಕುರ್ಚಿ ಬೇಕು ಎಂದು ಕಚ್ಚಾಡುವುದು ಅತ್ಯಂತ ಬಾಲಿಶ. ಕನ್ನಡಿಗರ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸದೆ ಕೇವಲ ತಮ್ಮ ಸ್ವಾರ್ಥಕ್ಕಾಗಿ ಕುರ್ಚಿ ಕಿತ್ತಾಟದಲ್ಲಿ ನಿರತವಾಗಿರುವುದು ಏಳು ಕೋಟಿ ಕನ್ನಡಿಗರಿಗೆ ಮಾಡುತ್ತಿರುವ ಅವಮಾನʼವೆಂದು ಬಿಜೆಪಿ ಟ್ವೀಟ್ ಮಾಡಿದೆ.
ಕನ್ನಡಿಗರನ್ನು ಸಮಸ್ಯೆಗಳು ಕಿತ್ತು ತಿನ್ನುತ್ತಿದ್ದರೂ ಕಾಂಗ್ರೆಸ್ ಸರ್ಕಾರ ತನಗೂ ಅದಕ್ಕೂ ಸಂಬಂಧವೇ ಇಲ್ಲವೆಂಬಂತೆ ಲೂಟಿಯಲ್ಲಿ ನಿರತವಾಗಿದೆ. ಲೂಟಿ ಹೊಡೆಯುವ ಸಮಯದಲ್ಲಿ ಒಗ್ಗಟ್ಟು ತೋರುವ ಕಾಂಗ್ರೆಸ್ಸಿಗರು ಲೂಟಿ ಮುಗಿದ ನಂತರ ಕುರ್ಚಿ ಬೇಕು ಎಂದು ಕಚ್ಚಾಡುವುದು ಅತ್ಯಂತ ಬಾಲಿಶ 🏴☠️
ಕನ್ನಡಿಗರ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸದೆ ಕೇವಲ…
— BJP Karnataka (@BJP4Karnataka) July 2, 2024
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.