ಸಿಎಂ, ಡಿಸಿಎಂ ಕಿತ್ತಾಟದಲ್ಲಿ ಕಾಂಗ್ರೆಸ್ ಶಾಸಕರು ಅನಾಥರಾಗಿದ್ದಾರೆ: ಬಿಜೆಪಿ ಟೀಕೆ

Fake Bill Scams: ಸಿಎಂ, ಡಿಸಿಎಂ ಕಿತ್ತಾಟದಲ್ಲಿ ಕಾಂಗ್ರೆಸ್ ಶಾಸಕರು ಅಂತೂ ಅನಾಥರಾಗಿದ್ದಾರೆ. ಯಾವುದೇ ಕ್ಷೇತ್ರವಿರಲಿ #ATMSarkaraಕ್ಕೆ ಕಮಿಷನ್ ಗ್ಯಾರಂಟಿ‌ ಆದ್ರೆ ಮಾತ್ರ ಅನುದಾನಕ್ಕೆ ಪರ್ಮಿಷನ್..! ಎಂದು ಬಿಜೆಪಿ ಟೀಕಿಸಿದೆ.

Written by - Puttaraj K Alur | Last Updated : Aug 12, 2023, 02:23 PM IST
  • ನೀನೇ ಸಾಕಿದ ಗಿಣಿ ಹದ್ದಾಗಿ‌‌ ಕುಕ್ಕಿತಲ್ಲ ಎನ್ನುವಂತಹ ಸ್ಥಿತಿ ಕಾಂಗ್ರೆಸ್ ಶಾಸಕರದ್ದಾಗಿದೆ
  • ಒಂದು‌ ಕಡೆ ಸಚಿವರು ಶಾಸಕರ ಎದುರು ಧಿಮಾಕು ದೌಲತ್ತು ತೋರಿಸುತ್ತಿದ್ದಾರೆ
  • ಇನ್ನೊಂದು ಕಡೆ ಡಿಕೆಶಿ ದುರಹಂಕಾರಕ್ಕೆ ಬೆಂಗಳೂರಿನ ಶಾಸಕರು ತಲೆ ಚಚ್ಚಿಕೊಳ್ಳುವಂತಾಗಿದೆ
ಸಿಎಂ, ಡಿಸಿಎಂ ಕಿತ್ತಾಟದಲ್ಲಿ ಕಾಂಗ್ರೆಸ್ ಶಾಸಕರು ಅನಾಥರಾಗಿದ್ದಾರೆ: ಬಿಜೆಪಿ ಟೀಕೆ title=
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ!

ಬೆಂಗಳೂರು: ನಕಲಿ ಬಿಲ್ ಆರೋಪಕ್ಕೆ ಕಾಂಗ್ರೆಸ್ ಶಾಸಕರಲ್ಲಿಯೇ ಬೇಸರ ವ್ಯಕ್ತವಾಗಿರುವ ವಿಚಾರವಾಗಿ ಬಿಜೆಪಿ ಟೀಕಿಸಿದೆ. ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಬಿಜೆಪಿ, ‘"ನೀನೇ ಸಾಕಿದ ಗಿಣಿ ಹದ್ದಾಗಿ‌‌ ಕುಕ್ಕಿತಲ್ಲ" ಎನ್ನುವಂತಹ ಸ್ಥಿತಿ ಕಾಂಗ್ರೆಸ್ ಶಾಸಕರದ್ದಾಗಿದೆ’ ಎಂದು ಕುಟುಕಿದೆ.

‘ಒಂದು‌ ಕಡೆ ಸಚಿವರು ಶಾಸಕರ ಎದುರು ಧಿಮಾಕು ದೌಲತ್ತು ತೋರಿಸುತ್ತಿದ್ದಾರೆ. ಇನ್ನೊಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ದುರಹಂಕಾರಕ್ಕೆ ಬೆಂಗಳೂರಿನ ಶಾಸಕರು ತಲೆ ಚಚ್ಚಿಕೊಳ್ಳುವಂತಾಗಿದೆ. ಶಾಸಕರು ಸಿದ್ದರಾಮಯ್ಯನವರಿಗೆ ಪತ್ರ ಬರೆದು ಅನುದಾನ ಬಿಡುಗಡೆಗೆ ಒತ್ತಾಯಿಸಿದ್ರೂ, ಡಿ.ಕೆ.ಶಿವಕುಮಾರ್ ಅವರು ಕ್ಯಾರೆ ಎನ್ನುತ್ತಿಲ್ಲ. ಸಿಎಂ, ಡಿಸಿಎಂ ಕಿತ್ತಾಟದಲ್ಲಿ ಕಾಂಗ್ರೆಸ್ ಶಾಸಕರು ಅಂತೂ ಅನಾಥರಾಗಿದ್ದಾರೆ. ಯಾವುದೇ ಕ್ಷೇತ್ರವಿರಲಿ #ATMSarkaraಕ್ಕೆ ಕಮಿಷನ್ ಗ್ಯಾರಂಟಿ‌ ಆದ್ರೆ ಮಾತ್ರ ಅನುದಾನಕ್ಕೆ ಪರ್ಮಿಷನ್..!’ ಎಂದು ಬಿಜೆಪಿ ಟೀಕಿಸಿದೆ.

ಇದನ್ನೂ ಓದಿ: ಬಿಬಿಎಂಪಿ ಪ್ರಧಾನ ಕಚೇರಿ ಆವರಣದಲ್ಲಿ ಭಾರೀ ಅಗ್ನಿ ಅವಘಡ, 9 ನೌಕರರಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

‘ರಾಜ್ಯದ ಗುತ್ತಿಗೆದಾರರಿಗೆ #ATMSarkaraದ ಆಡಳಿತಾವಧಿಯಲ್ಲಿ ಬಿಲ್ ಬಾಕಿ 'ನಿಶ್ಚಿತ', ಅವಮಾನ 'ಉಚಿತ', ಬೆದರಿಕೆ 'ಖಚಿತ' ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಬಿಬಿಎಂಪಿ ಗುತ್ತಿಗೆದಾರರ ಬಳಿಕ ಈಗ ರಾಯಚೂರು ಗುತ್ತಿಗೆದಾರರು ಸಹ ದಿವಾಳಿ ಸರ್ಕಾರದ ದುರ್ಬಲ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಸರ್ಕಾರ ಮಾತ್ರ ಗುತ್ತಿಗೆದಾರರನ್ನೇ ತಪ್ಪಿತಸ್ಥರನ್ನಾಗಿಸಿ, ತನಗೆ ತಾನೇ ಸಾಚಾತನದ ಸರ್ಟಿಫಿಕೇಟ್ ನೀಡಿಕೊಳ್ಳುತ್ತಿದೆ’ ಎಂದು ಬಿಜೆಪಿ ಕುಟುಕಿದೆ.

3 ತಿಂಗಳಿಂದ ಸಂಬಳವಿಲ್ಲ!  

‘ರಾಜ್ಯದ #ATMSarkara ಸ್ವಾತಂತ್ರ್ಯ ಹೋರಾಟಗಾರರ ಜೀವನಚರಿತ್ರೆಯುಳ್ಳ ಪಠ್ಯವನ್ನು ತೆಗೆಯುವಲ್ಲಿ ತೋರಿದ ಉತ್ಸಾಹ ಮತ್ತು ಕಾಳಜಿಯನ್ನು ಸರ್ಕಾರಿ ಶಾಲೆಗಳು, ಮಕ್ಕಳು ಹಾಗೂ ಶಿಕ್ಷಕರ ಮೇಲೆ ತೋರುತ್ತಿಲ್ಲ. ಆಗಸ್ಟ್ ಅರ್ಧ ತಿಂಗಳು ಮುಗಿಯುತ್ತಾ ಬಂದರೂ ಸರ್ಕಾರಿ ಶಾಲೆಗಳ ಶಿಕ್ಷಕರಿಗೆ 3 ತಿಂಗಳಿಂದ ಸಂಬಳವೇ ಆಗಿಲ್ಲ. ಶಿಕ್ಷಣ ಸಚಿವ ಮಧು ಬಂಗಾರಪ್ಪನವರೇ ನಿಮ್ಮ #ATMSarkaraದ ವರ್ಗಾವಣೆ ದಂಧೆ ಮುಗಿದಿದ್ದರೆ, ಕೊಂಚ ಈ ಕಡೆ ಗಮನಹರಿಸಿ’ ಎಂದು ಟೀಕಿಸಿದೆ.

ಇದನ್ನೂ ಓದಿ: Photo Gallery : ವಿಕ್ಟೋರಿಯಾ ಆಸ್ಪತ್ರೆಗೆ ಸಿಎಂ, ಡಿಸಿಎಂ ಭೇಟಿ, ಗಾಯಾಳುಗಳ ಆರೋಗ್ಯ ವಿಚಾರಣೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News