ಕಲೆಕ್ಷನ್ ಕೊಡಿ, ನಿಗಮ-ಮಂಡಳಿ ಅಧಿಕಾರ ಪಡಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ!

Congress Nigama Mandali: ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನಿಗಮ-ಮಂಡಳಿಗಳ ಅಧ್ಯಕ್ಷರ ಸ್ಥಾನಗಳ ನೇಮಕಾತಿ ನೆನೆಗುದಿಗೆ ಬಿದ್ದಿದೆ. ನಿಗಮ-ಮಂಡಳಿಗಳ ಹಂಚಿಕೆ ವಿಚಾರದಲ್ಲಿಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸಿದೆ.

Written by - Puttaraj K Alur | Last Updated : Nov 22, 2023, 07:07 PM IST
  • ನಿಗಮ-ಮಂಡಳಿಗಳ ಹಂಚಿಕೆ ವಿಚಾರದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ
  • ವರ್ಗಾವಣೆ ದಂಧೆ ನಡೆಸುತ್ತಿದ್ದ ಸಿಎಂ ಸಿದ್ದರಾಮಯ್ಯರ ಸರ್ಕಾರ ನಿಗಮ ಮಂಡಳಿ ಹರಾಜಿಗೆ ಇಷ್ಟು ದಿನ ಕಾಯತ್ತಿತ್ತು
  • ನಿಗಮ-ಮಂಡಳಿಗಳ ಹುದ್ದೆಗೆ ಕೊಡಬೇಕಾದ ಕಲೆಕ್ಷನ್‌ ಪ್ರಮಾಣ ಮತ್ತೆ ಚರ್ಚೆಗೆ ಬಂದಿದೆ ಎಂದ ಬಿಜೆಪಿ
ಕಲೆಕ್ಷನ್ ಕೊಡಿ, ನಿಗಮ-ಮಂಡಳಿ ಅಧಿಕಾರ ಪಡಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ!  title=
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟೀಕೆ!

ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ನಿಗಮ-ಮಂಡಳಿಗಳ ಅಧ್ಯಕ್ಷರ ಸ್ಥಾನಗಳ ನೇಮಕಾತಿ ನೆನೆಗುದಿಗೆ ಬಿದ್ದಿದೆ. ನಿಗಮ-ಮಂಡಳಿಗಳ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸಿದೆ. ಈ ಬಗ್ಗೆ ಬುಧವಾರ ಟ್ವೀಟ್ ಮಾಡಿರುವ ಬಿಜೆಪಿ, ‘ಕಲೆಕ್ಷನ್ ಕೊಡಿ, ನಿಗಮ-ಮಂಡಳಿ ಅಧಿಕಾರ ಪಡಿ’ ಎಂದು ಕಿಡಿಕಾರಿದೆ.

‘ಈಗಾಗಲೇ ವರ್ಗಾವಣೆಯನ್ನು ಫೋನ್‌ ಕರೆಯಲ್ಲೇ ನಿಭಾಯಿಸುವ ವ್ಯವಸ್ಥಿತ ದಂಧೆಯನ್ನಾಗಿ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯನವರ ಸರ್ಕಾರ ನಿಗಮ-ಮಂಡಳಿ ಹರಾಜಿಗೆ ಇಷ್ಟು ದಿನ ಕಾಯತ್ತಿತ್ತು. ಈ ಹಿಂದೆ ವ್ಯವಹಾರ ಸರಿಯಾಗಿ ಕುದುರದ ಕಾರಣ ಮುಂದೂಡಲಾಗಿದ್ದ ನಿಗಮ-ಮಂಡಳಿ ಹುದ್ದೆಗಳ ಹರಾಜು ಪ್ರಕ್ರಿಯೆ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ದೆಹಲಿಯಿಂದ ಬಂದು ಸಮಾಲೋಚನೆಗಳನ್ನು ನಡೆಸಿದ್ದಾರೆ. ಪರಿಣಾಮ ನಿಗಮ-ಮಂಡಳಿ ಹುದ್ದೆಗೆ ಕೊಡಬೇಕಾದ ಕಲೆಕ್ಷನ್‌ ಪ್ರಮಾಣ ಮತ್ತೆ ಚರ್ಚೆಗೆ ಬಂದಿದೆ’ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಇದನ್ನೂ ಓದಿ: ಬಡತನ-ದಾರಿದ್ರ್ಯ-ಅನಕ್ಷರತೆ ಹೋಗದೆ ಎಲ್ಲರಿಗೂ ಉತ್ತಮ ಆರೋಗ್ಯ ಸಿಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಬಿಜೆಪಿಯಿಂದ ಕಾಂಗ್ರೆಸ್ ಕಲೆಕ್ಷನ್ ಪಟ್ಟಿ ಬಿಡುಗಡೆ!

ಇನ್ನೂ ನಿಗಮ-ಮಂಡಳಿಗಳ ನೇಮಕಾತಿ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ವಿವಿಧ ಪೋಸ್ಟ್ ಗಳ ಕಲೆಕ್ಷನ್ ಪಟ್ಟಿಯನ್ನು ಬಿಡುಗಡೆ ಮಾಡಿದೆ. ‘ಕಾಂಗ್ರೆಸ್ ಸರ್ಕಾರವು ಬಿಡಿಎಗೆ ಅತಿಹೆಚ್ಚು ಅಂದರೆ 50 ಕೋಟಿ ರೂ. ನಿಗದಿಪಡಿಸಿದೆ. ಅದೇ ರೀತಿ BWSSBಗೆ 45 ಕೋಟಿ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಗೆ 28 ಕೋಟಿ ರೂ., ಕರ್ನಾಟಕ ವಿದ್ಯುತ್ ಕಾರ್ಖಾನೆ ನಿಯಮಿತಕ್ಕೆ 25 ಕೋಟಿ ರೂ., KRIDLಗೆ 20 ಕೋಟಿ ರೂ., ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ 19 ಕೋಟಿ, ಕರ್ನಾಟಕ ಸಾಬೂನು ಮತ್ತು ಮಾರ್ಜಕಕ್ಕೆ 16 ಕೋಟಿ ರೂ ಮತ್ತು ಕಿಯೋನಿಕ್ಸ್‍ಗೆ 15 ಕೋಟಿ ರೂ. ನಿಗದಿಪಡಿಸಲಾಗಿದೆ’ ಎಂದು ಬಿಜೆಪಿ ತಿಳಿಸಿದೆ.

ಮುಂದುವರೆದು ‘ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ 13 ಕೋಟಿ ರೂ., ಕರ್ನಾಟಕ ಉಗ್ರಾಣ ನಿಗಮ 12 ಕೋಟಿ ರೂ., ಹಟ್ಟಿ ಗೋಲ್ಡ್ ಮೈನ್ಸ್ ಲಿಮಿಟೆಡ್‍ಗೆ 11 ಕೋಟಿ ರೂ., ಕರ್ನಾಟಕ ಗೃಹ ಮಂಡಳಿಗೆ 10 ಕೋಟಿ ರೂ. ಮತ್ತು ಕರ್ನಾಟಕ ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್‍ಗೆ 5 ಕೋಟಿ ರೂ. ನಿಗದಿಪಡಿಸಲಾಗಿದೆ’ ಎಂದು ಬಿಜೆಪಿ ಆರೋಪಿಸಿದೆ.

ಇದನ್ನೂ ಓದಿ: ತಾಯಿ, ಮಗು ಸಾವಿನ ನೈತಿಕ ಹೊಣೆ ಹೊತ್ತು ಸಚಿವ ಜಾರ್ಜ್ ರಾಜೀನಾಮೆಗೆ ಪ್ರತಿಪಕ್ಷ ನಾಯಕ ಅಶೋಕ್ ಆಗ್ರಹ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News