ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ!

Udupi Gang War: ʼಇದು ಕರ್ನಾಟಕ ಮಾಡೆಲ್! ಗ್ಯಾಂಗ್ ವಾರ್‌ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್‌ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆʼ ಎಂದು ಬಿಜೆಪಿ ಟೀಕಿಸಿದೆ.

Written by - Puttaraj K Alur | Last Updated : May 25, 2024, 05:21 PM IST
  • ಉಡುಪಿಯ ಕುಂಜಿಬೆಟ್ಟುವಿನಲ್ಲಿ ಎರಡು ಗುಂಪಿನ ನಡುವೆ ಭಯಾನಕ ಗ್ಯಾಂಗ್ ವಾರ್
  • ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್! ಎಂದು ಬಿಜೆಪಿ ಟೀಕೆ
  • ಗ್ಯಾಂಗ್‌ ವಾರ್‌ ಪ್ರಕರಣ ಸಂಬಂಧ ಮೂವರನ್ನು ಬಂಧಿಸಿರುವ ಉಡುಪಿ ಪೊಲೀಸರು
ಉಡುಪಿ ಗ್ಯಾಂಗ್‌ ವಾರ್:‌ ಇದು ದೇಶಕ್ಕೆ ಕಾಂಗ್ರೆಸ್‌ ತೋರಿಸುತ್ತಿರುವ ʼಕರ್ನಾಟಕ ಮಾಡೆಲ್‌ʼ ಎಂದ ಬಿಜೆಪಿ! title=
ಉಡುಪಿ ಗ್ಯಾಂಗ್ ವಾರ್!

ಬೆಂಗಳೂರು: ಉಡುಪಿಯ ಕುಂಜಿಬೆಟ್ಟುವಿನಲ್ಲಿ ಎರಡು ಗುಂಪಿನ ನಡುವೆ ಭಯಾನಕ ಗ್ಯಾಂಗ್ ವಾರ್ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಪು ಮೂಲದ ಎರಡು ಬಣಗಳ ಯುವಕರು ಉಡುಪಿ-ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಗ್ಯಾಂಗ್‌ ವಾರ್‌ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಬೈಕ್‌, ಕಾರುಗಳನ್ನು ಪರಸ್ಪರ ಡಿಕ್ಕಿ ಹೊಡೆಸುತ್ತಾ ಡ್ರ್ಯಾಗರ್‌, ತಲವಾರು ಹಾಗೂ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ.

ಮೇ ೧೮ರಂದೇ ಈ ಗ್ಯಾಂಗ್‌ ವಾರ್‌ ನಡೆಸಿದ್ದು, ಇದರ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. ಈ ವಿಡಿಯೋ ಆಧರಿಸಿ ಪ್ರಕರಣ ದಾಖಲಿಸಿಕೊಂಡಿದ್ದ ಉಡುಪಿ ಠಾಣೆ ಪೊಲೀಸರು ಅಶಿಕ್‌, ರಖೀಬ್‌ ಮತ್ತು ಸಕ್ಲೇನ್‌ ಎಂಬ ಮೂವರನ್ನು ಬಂಧಿಸಿದ್ದು, ಜೂನ್ 1ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.

ಇದನ್ನೂ ಓದಿ: ಹೋಟೆಲ್ ಬಿಲ್ ಬಾಕಿಸೌಹಾರ್ದಯುತ ಇತ್ಯರ್ಥ: ಈಶ್ವರ ಖಂಡ್ರೆ

ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಎರಡು ಕಾರು, ಬೈಕ್‌, ಡ್ರ್ಯಾಗರ್‌, ತಲವಾರು ಹಾಗೂ ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತ ಆರೋಪಿಗಳು ಕಾಪುವಿನ ಗರುಡ ಗ್ಯಾಂಗಿನವರು ಎಂದು ತಿಳಿದುಬಂದಿದೆ. ಗ್ಯಾಂಗ್‌ ಸದಸ್ಯರಲ್ಲಿ ವೈಮನಸ್ಸು ಕಾಣಿಸಿಕೊಂಡು ಹೊಡೆದಾಟ ನಡೆಸಿದ್ದಾರೆ ಎನ್ನಲಾಗಿದೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. 
ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ! 

ಉಡುಪಿ ಗ್ಯಾಂಗ್‌ ವಾರ್‌ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಶನಿವಾರ ತನ್ನ ಟ್ವಿಟರ್‌ ಖಾತೆಯಲ್ಲಿ ಗ್ಯಾಂಗ್‌ ವಾರ್‌ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ʼಇದು ಕರ್ನಾಟಕ ಮಾಡೆಲ್! ಗ್ಯಾಂಗ್ ವಾರ್‌ಗಳು, ಯುವತಿಯರ ಮೇಲೆ ಅತ್ಯಾಚಾರ, ಹಲ್ಲೆ, ಹತ್ಯೆ, ಬಾಂಬ್ ಬ್ಲಾಸ್ಟ್‌ಗಳು, ಗಾಂಜಾ, ಅಫೀಮು, ರೇವ್ ಪಾರ್ಟಿಗಳು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆಗಳು ಸೇರಿ ಇತ್ಯಾದಿಗಳು ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾಮನ್ ಆಗಿದೆʼ ಎಂದು ಟೀಕಿಸಿದೆ.

ಇದನ್ನೂ ಓದಿ: ಹರೀಶ್ ಪೂಂಜಾ ಪೊಲೀಸ್ ಬೆದರಿಕೆ ಆರೋಪ ಪ್ರಕರಣ; ಕಾನೂನು ಎಲ್ಲರಿಗೂ ಒಂದೇ: ಮುಖ್ಯಮಂತ್ರಿ ಸಿದ್ದರಾಮಯ್ಯ

ಉಗ್ರರು, ಮತಾಂಧರು, ಪುಂಡರು, ಕಿಡಿಗೇಡಿಗಳು ರೌಡಿಗಳಿಗೆ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಫ್ರೀ ಹ್ಯಾಂಡ್ ಕೊಟ್ಟು ಪೊಲೀಸರನ್ನು ಕೈಗೊಂಬೆ ಮಾಡಿಕೊಂಡಿರುವ ಪರಿಣಾಮವೇ ಇಂದು ಅರಾಜಕತೆ ಸೃಷ್ಟಿಯಾಗಿದೆ. ಇದು ದೇಶಕ್ಕೆ ಕಾಂಗ್ರೆಸ್ ತೋರಿಸುತ್ತಿರುವ ಕರ್ನಾಟಕ ಮಾಡೆಲ್ ಎಂದು ಬಿಜೆಪಿ ಕಿಡಿಕಾರಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News