10KG ಅಕ್ಕಿ ಹೆಸರಲ್ಲಿ ಸಿಎಂ ಸಿದ್ದರಾಮಯ್ಯ ಜನತೆಯ ತಲೆಮೇಲೆ ಹೂವಿನ ಕುಂಡವನ್ನೇ ಇಟ್ಟಿದ್ದಾರೆ: BJP

Anna Bhagya scheme: ʼ10 ಕೆಜಿ ಅಕ್ಕಿಯೂ ಇಲ್ಲ, ಅಕ್ಕಿಯ ಬದಲು ದುಡ್ಡು ಇಲ್ಲ, ಇದೊಂದು ರೀತಿ ಉಂಡು ಹೋದ ಕೊಂಡು ಹೋದದ ಅಪರಾವತಾರ. ಸಿಎಂ ಸಿದ್ದರಾಮಯ್ಯನವರೇ, 3 ತಿಂಗಳಿನಿಂದ ಅಕ್ಕಿ ದುಡ್ಡು ಬಂದಿಲ್ಲ, ದುಡ್ಡು ಕೊಡ್ತಿರೋ ಇಲ್ವೋ ಅನ್ನೊದನ್ನ ಹೇಳ್ಬಿಡಿ ಎಂದು ಬಿಜೆಪಿ ಕುಟುಕಿದೆ.

Written by - Puttaraj K Alur | Last Updated : May 26, 2024, 05:09 PM IST
  • ಕಳೆದ ಮೂರು ತಿಂಗಳಿನಿಂದ ಕಾಂಗ್ರೆಸ್‌ ಸರ್ಕಾರದಿಂದ ಅನ್ನಭಾಗ್ಯದ ಹಣ ಸ್ಥಗಿತ
  • ರಾಜ್ಯದ ಜನತೆಯ ತಲೆ ಮೇಲೆ ಹೂವಿನ ಕುಂಡವನ್ನೇ ಇಟ್ಟಿರುವ ಸಿಎಂ ಸಿದ್ದರಾಮಯ್ಯ
  • 10 ಕೆಜಿ ಅಕ್ಕಿಯೂ ಇಲ್ಲ, ಅಕ್ಕಿಯ ಬದಲು ದುಡ್ಡು ಇಲ್ಲವೆಂದು ಟೀಕಿಸಿದ ಬಿಜೆಪಿ
10KG ಅಕ್ಕಿ ಹೆಸರಲ್ಲಿ ಸಿಎಂ ಸಿದ್ದರಾಮಯ್ಯ ಜನತೆಯ ತಲೆಮೇಲೆ ಹೂವಿನ ಕುಂಡವನ್ನೇ ಇಟ್ಟಿದ್ದಾರೆ: BJP  title=
ಅನ್ನಭಾಗ್ಯ ಯೋಜನೆಯ ಹಣ ಸ್ಥಗಿತ

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ಅನ್ನಭಾಗ್ಯದ ಹಣ ಸ್ಥಗಿತಗೊಂಡಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಭಾನುವಾರ ಟ್ವೀಟ್‌ ಮಾಡಿರುವ ಬಿಜೆಪಿ, ʼಸೋಲು ಖಚಿತ-ನಿಶ್ಚಿತ-ಖಂಡಿತವೆಂದ ತಕ್ಷಣ ಗ್ಯಾರಂಟಿಗಳಿಗೆ ಲಭಿಸಿದೆ ಸಂಚಕಾರʼ ಎಂದು ಟೀಕಿಸಿದೆ.

ʼರಾಜ್ಯದ ಜನತೆಗೆ 10 ಕೆಜಿ ಅಕ್ಕಿ ಬೇಕೋ ಬೇಡ್ವೋ ಎಂದು ಕಿವಿಯ ಮೇಲೆ ಹೂವಿಟ್ಟಿದ್ದ ಸಿಎಂ ಸಿದ್ದರಾಮಯ್ಯನವರು, ಈಗ ಜನತೆಯ ತಲೆ ಮೇಲೆ ಹೂವಿನ ಕುಂಡವನ್ನೇ ಇಟ್ಟಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ.

ಇದನ್ನೂ ಓದಿ: ಇಂದು ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ

ʼ10 ಕೆಜಿ ಅಕ್ಕಿಯೂ ಇಲ್ಲ, ಅಕ್ಕಿಯ ಬದಲು ದುಡ್ಡು ಇಲ್ಲ, ಇದೊಂದು ರೀತಿ ಉಂಡು ಹೋದ ಕೊಂಡು ಹೋದದ ಅಪರಾವತಾರ. ಸಿಎಂ ಸಿದ್ದರಾಮಯ್ಯ ಅವರೇ, 3 ತಿಂಗಳಿನಿಂದ ಅಕ್ಕಿ ದುಡ್ಡು ಬಂದಿಲ್ಲ, ದುಡ್ಡು ಕೊಡ್ತಿರೋ ಇಲ್ವೋ ಅನ್ನೊದನ್ನ ಹೇಳ್ಬಿಡಿ ಎಂದು ಬಿಜೆಪಿ ಕುಟುಕಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ!

ಉಡುಪಿ ಗ್ಯಾಂಗ್‌ ವಾರ್‌ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಕರ್ನಾಟಕದ ಆರ್ಥಿಕತೆಯನ್ನು ದಿವಾಳಿಯನ್ನಾಗಿ"ಸಿದ್ದು", ಕರ್ನಾಟಕವನ್ನು ಅರಾಜಕತೆಯ ನಾಡನ್ನಾಗಿ"ಸಿದ್ದು", ಇವೇ ಸಿಎಂ ಸಿದ್ದರಾಮಯ್ಯನವರ ಸರ್ಕಾರ ತಮ್ಮ ಒಂದು ವರ್ಷದ ಆಡಳಿತದಲ್ಲಿ ಸಾಧಿ"ಸಿದ್ದು". ಎಂದು ಟೀಕಿಸಿದೆ.

ಇದನ್ನೂ ಓದಿ: ಶಾಸಕ ಠಾಣೆಗೆ ನುಗ್ಗಿ ದಾಂಧಲೆ ಎಸಗಿದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ?: ಗೃಹ ಸಚಿವ ಪರಮೇಶ್ವರ

ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿರುವ ಕಾಂಗ್ರೆಸ್, ಲೋಕಾರ್ಪಣೆ ಎಂದರೇ ಮಚ್ಚು, ಲಾಂಗು, ತಲ್ವಾರ್‌ಗಳ ಪ್ರದರ್ಶನ, ಶಂಕುಸ್ಥಾಪನೆ ಎಂದರೆ ಹಲ್ಲೆ, ಕೊಲೆ, ಸುಲಿಗೆ, ಅತ್ಯಾಚಾರಗಳು ಎಂದು ಭಾವಿಸಿದಂತಿದೆ. ಈ ಪರಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲು ಎಂದು ಬಿಜೆಪಿ ಟ್ವೀಟ್‌ ಮಾಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News