ಚುನಾವಣೆ, ಉಪಚುನಾವಣೆ ಬಂದಾಗಲೆಲ್ಲ ವರಸೆ ಬದಲಾಯಿಸುವ ಸಿದ್ದರಾಮಯ್ಯ: ಬಿಜೆಪಿ

ಬಾದಾಮಿಯಿಂದ ಮತ್ತೆ ವಲಸೆ ಹೋಗಲು ಸಿದ್ದರಾಮಯ್ಯ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.

Written by - Zee Kannada News Desk | Last Updated : Oct 19, 2021, 11:53 AM IST
  • ಸಿದ್ದರಾಮಯ್ಯರ ನಿಜವಾದ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಹೇಳಿಕೆಗೆ ಬಿಜೆಪಿ ತಿರುಗೇಟು
  • ಚುನಾವಣೆ, ಉಪಚುನಾವಣೆ ಬಂದಾಗಲೆಲ್ಲ ಸಿದ್ದರಾಮಯ್ಯನವರ ವರಸೆ ಬದಲಾಗುತ್ತದೆ ಎಂದು ಟ್ವೀಟ್
  • ಬಹುಸಂಖ್ಯಾತರ ಮೇಲೆ ದ್ವೇಷ ಕಕ್ಕುವುದು, ಅಲ್ಪಸಂಖ್ಯಾತರನ್ನು ಓಲೈಸುವುದು ನಿಮ್ಮ ಖಯಾಲಿ ಎಂದ ಬಿಜೆಪಿ
ಚುನಾವಣೆ, ಉಪಚುನಾವಣೆ ಬಂದಾಗಲೆಲ್ಲ ವರಸೆ ಬದಲಾಯಿಸುವ ಸಿದ್ದರಾಮಯ್ಯ: ಬಿಜೆಪಿ title=
ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ

ಬೆಂಗಳೂರು: ಹಾನಗಲ್ ಉಪಚುನಾವಣೆ(Hanagal By election) ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು ನೀಡಿದೆ. ‘ನಾನು ಮುಖ್ಯಮಂತ್ರಿ ಆಗುವ ಮೊದಲು ಅಲ್ಪಸಂಖ್ಯಾತರ ಅಭಿವೃದ್ಧಿಗೆ ನೀಡುತ್ತಿದ್ದ ಅನುದಾನ 400 ಕೋಟಿ ರೂ.ಇತ್ತು, ನಾನು ಪ್ರತಿ ವರ್ಷ ಅನುದಾನ ಹೆಚ್ಚಿಸಿದ್ದೆ. ಕೊನೆ ಬಜೆಟ್ ನಲ್ಲಿ ಅದು 3,100 ಕೋಟಿ ರೂ. ಆಗಿತ್ತು. ಇದು ನಿಜವಾದ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಎಂದು ಸಿದ್ದರಾಮಯ್ಯ ಹೇಳಿದ್ದರು.

ಸಿದ್ದರಾಮಯ್ಯ(Siddaramaiah) ಹೇಳಿಕೆಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಬಿಜೆಪಿ ‘ಚುನಾವಣೆ, ಉಪಚುನಾವಣೆ ಬಂದಾಗಲೆಲ್ಲ ಸಿದ್ದರಾಮಯ್ಯ ವರಸೆ ಬದಲಾಗುತ್ತದೆ’ ಅಂತಾ ಕುಟುಕಿದೆ. #ಬುರುಡೆರಾಮಯ್ಯ ಹ್ಯಾಶ್ ಟ್ಯಾಗ್ ಬಳಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ಮಾನ್ಯ ಸಿದ್ದರಾಮಯ್ಯನವರೇ ಯಾರನ್ನು ಓಲೈಸಲು ನೀವು ಈ ಮಾತನ್ನು ಹೇಳಿದ್ದೀರಿ ಎಂದು ರಾಜ್ಯದ ಜನತೆಗೆ ತಿಳಿದಿದೆ. ಚುನಾವಣೆ, ಉಪಚುನಾವಣೆ ಎದುರಾದಾಗಲೆಲ್ಲ ನಿಮ್ಮ ವರಸೆ ಇದೇ ರೀತಿ ಬದಲಾಗುತ್ತದೆ. ಬಹುಸಂಖ್ಯಾತರ ಮೇಲೆ ದ್ವೇಷ ಕಕ್ಕುವುದು, ಅಲ್ಪಸಂಖ್ಯಾತರನ್ನು ಓಲೈಸುವುದು ನಿಮ್ಮ ಖಯಾಲಿಯಾಗಿಬಿಟ್ಟಿದೆ’ ಎಂದು ಟೀಕಿಸಿದೆ.

ಇದನ್ನೂ ಓದಿ: ಹೆಬ್ಬೆಟ್ಟು ಗಿರಾಕಿ ಪ್ರಧಾನಿ ಮೋದಿಯಿಂದ ದೇಶ ನರಳುತ್ತಿದೆ: ಕಾಂಗ್ರೆಸ್

‘ಸಿದ್ದರಾಮಯ್ಯ ಅವರೇ, ಈ ರೀತಿ ಸುತ್ತಿ ಬಳಸಿ ಮಾತನಾಡುವ ಬದಲು ಬಹುಸಂಖ್ಯಾತರ ತುಳಿದು, ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಿದ್ದೇನೆ. ಹೀಗಾಗಿ ಮುಂದಿನ ಬಾರಿ ಚಾಮರಾಜಪೇಟೆಗೆ ವಲಸೆ ಹೋಗುತ್ತೇನೆ ಎಂದು ನೇರವಾಗಿಯೇ ಹೇಳಬಹುದಲ್ಲವೇ?’ ಎಂದು ಬಿಜೆಪಿ(Karnataka BJP)ಪ್ರಶ್ನಿಸಿದೆ.

ಇದನ್ನೂ ಓದಿ: ನೈತಿಕ ಪೊಲೀಸ್‌ಗಿರಿ ಸಮರ್ಥನೆ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

ಇದೇ ಖಡ್ಗದ ಮೂಲಕ ರಾಜ್ಯದಲ್ಲಿ ಹಿಂದೂಗಳ ಮಾರಣಹೋಮ ನಡೆಸುವುದಕ್ಕೆ ಸಿದ್ದರಾಮಯ್ಯ ಪ್ರೋತ್ಸಾಹ ನೀಡಿದ್ದರು. ಒಂದು ವರ್ಗದ ಓಲೈಕೆಗಾಗಿ ಮಾಡಿದ ಪ್ರಹಸನದಿಂದಾಗಿಯೇ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟು ಬಾದಾಮಿ(Badami)ಗೆ ಓಡುವಂತಾಗಿತ್ತು. ಆದರೂ, ಸಿದ್ದರಾಮಯ್ಯ ಅವರಿಗೆ ಇನ್ನೂ ಬುದ್ದಿ ಬಂದಿಲ್ಲ’ವೆಂದು ಟಿಪ್ಪು ಸುಲ್ತಾನ್ ವೇಷ ತೊಟ್ಟು ಖಡ್ಗ ಹಿಡಿದಿರುವ ಸಿದ್ದರಾಮಯ್ಯರ ಫೋಟೋವನ್ನು ಬಿಜೆಪಿ ಟ್ವೀಟ್ ಮಾಡಿದೆ.  

‘ಬಾದಾಮಿಯಿಂದ ಮತ್ತೆ ವಲಸೆ ಹೋಗಲು ಸಿದ್ದರಾಮಯ್ಯ ಈಗಿನಿಂದಲೇ ತಯಾರಿ ನಡೆಸುತ್ತಿದ್ದಾರೆ. ಅದಕ್ಕಾಗಿ ಈಗ ಮತ್ತೆ ಓಲೈಕೆ ರಾಜಕಾರಣದ ಹಾದಿ ಹಿಡಿದಿದ್ದಾರೆ. ಈ ಮೂಲಕ ಚಾಮರಾಜಪೇಟೆ ಕ್ಷೇತ್ರಕ್ಕೆ ವಲಸೆಗೆ ಹೋಗಲು ಸಿದ್ಧತೆ ನಡೆಸಿದ್ದು ನಿಜವಲ್ಲವೇ? ಸಿದ್ದರಾಮಯ್ಯ(Siddaramaiah)ನವರೇ ‘ಕಿಸ್ ಕಾ ಸಾತ್ ಕಿಸ್ ಕಾ ವಿಕಾಸ್?’ ಎಂದು ಬಿಜೆಪಿ ವ್ಯಂಗ್ಯವಾಗಿ ಪ್ರಶ್ನೆ ಮಾಡಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News