ಸ್ತಬ್ಧಚಿತ್ರ ವಿವಾದ: ಸಿದ್ದರಾಮಯ್ಯ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆಂದ ಬಿಜೆಪಿ

ಸ್ತಬ್ಧಚಿತ್ರವನ್ನು ಏಕೆ ತಿರಸ್ಕರಿಸಲಾಗಿದೆ ಎಂದು ಆಯಾ ರಾಜ್ಯಗಳಿಗೆ ಕೇಂದ್ರ ರಕ್ಷಣಾ ಇಲಾಖೆಯೇ ಸ್ಪಷ್ಟಪಡಿಸಿದೆ. ಇಷ್ಟರ ಮೇಲೂ ಸಿದ್ದರಾಮಯ್ಯ ಅವರು ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.

Written by - Zee Kannada News Desk | Last Updated : Jan 19, 2022, 07:25 PM IST
  • ಸ್ತಬ್ಧಚಿತ್ರ ವಿವಾದ ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಬಿಜೆಪಿ
  • ರಾಜ್ಯದ ಸ್ಥಬ್ದಚಿತ್ರ ಆಯ್ಕೆಯಾಗಿರುವುದಕ್ಕೆ ಸಂತಸಪಡುವುದು ಬಿಟ್ಟು ರಾಜಕೀಯ ಮಾಡಬೇಡಿ
  • ಸುದ್ದಿಯಲ್ಲಿರಬೇಕೆನ್ನುವ ಹುಚ್ಚಾಟಕ್ಕೆ ನಾರಾಯಣ ಗುರುಗಳ ಹೆಸರು ಬಳಸಿಕೊಳ್ಳಬೇಡಿ ಎಂದ ಬಿಜೆಪಿ
ಸ್ತಬ್ಧಚಿತ್ರ ವಿವಾದ: ಸಿದ್ದರಾಮಯ್ಯ ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆಂದ ಬಿಜೆಪಿ   title=
ಸಿದ್ದರಾಮಯ್ಯಗೆ ಬಿಜೆಪಿ ತಿರುಗೇಟು ನೀಡಿದೆ

ಬೆಂಗಳೂರು: ಸ್ತಬ್ಧಚಿತ್ರ ವಿವಾದ ವಿಚಾರವಾಗಿ ಸಿದ್ದರಾಮಯ್ಯನವರು ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಗಣರಾಜ್ಯೋತ್ಸ ಪರೇಡ್‌(Republic Day Parade 2022)ನಲ್ಲಿ ಪಾಲ್ಗೊಳ್ಳುವ ಸ್ತಬ್ಧಚಿತ್ರ ವಿವಾದ ಪ್ರಕರಣ(Tableaue Controversy) ವಿಚಾರವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಮಾಡಿದ್ದ ಸರಣಿ ಟ್ವೀಟ್ ಗೆ ಬಿಜೆಪಿ ತಿರುಗೇಟು ನೀಡಿದೆ.

‘ಸಿದ್ದರಾಮಯ್ಯ ಅವರೇ ನೀವು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಲ್ಲಿ ಬಿಜೆಪಿ ಸರ್ಕಾರ(BJP Government)ವೇ ಅಧಿಕಾರದಲ್ಲಿತ್ತು. ಆಗೇನಾದರೂ ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರದಲ್ಲಿದೆ ಎಂದು ಸ್ಥಬ್ದಚಿತ್ರವನ್ನು ಕೇಂದ್ರ ಆಯ್ಕೆ ಸಮಿತಿ ನಿರಾಕರಿಸಿತ್ತೇ? ಆಗಲೂ ನಮ್ಮ ರಾಜ್ಯ ಆಯ್ಕೆ ಆಗಿತ್ತಲ್ಲವೇ?’ ಅಂತಾ ಪ್ರಶ್ನಿಸಿದೆ.

ಇದನ್ನೂ ಓದಿ: ಬೈಕ್ ಮಾರಾಟಗಾರರೇ ಎಚ್ಚರ! ಸ್ಕೂಟರ್ ಜತೆ 1 ಲಕ್ಷ ಹಣವನ್ನೂ ಹೊತ್ತೊಯ್ದ ಚಾಲಾಕಿ ಚೋರ

‘ಈ ವರ್ಷವೂ ನಮ್ಮ ರಾಜ್ಯದ ಸ್ಥಬ್ದಚಿತ್ರ ಆಯ್ಕೆಯಾಗಿರುವುದಕ್ಕೆ ಸಿದ್ದರಾಮಯ್ಯ ಅವರು ಸಂತಸಪಡಬೇಕು. ಅದನ್ನು ಬಿಟ್ಟು ಅನಗತ್ಯ ವಿಚಾರಗಳನ್ನು ಹಿಡಿದುಕೊಂಡು ರಾಜಕಾರಣ ಮಾಡಬೇಡಿ. ರಾಜಕಾರಣ ಮಾಡಲು ಬೇರೆ ವೇದಿಕೆ ನೋಡಿಕೊಳ್ಳಿ. ಮಾಧ್ಯಮದಲ್ಲಿ ಸುದ್ದಿಯಲ್ಲಿರಬೇಕು ಎನ್ನುವ ಹುಚ್ಚಾಟಕ್ಕೆ ನಾರಾಯಣ ಗುರುಗಳ ಹೆಸರು ಬಳಸಿಕೊಳ್ಳಬೇಡಿ’ ಅಂತಾ ಬಿಜೆಪಿ ಕುಟುಕಿದೆ.

‘ಸ್ತಬ್ಧಚಿತ್ರ(Narayana Guru Tableau)ವನ್ನು ಏಕೆ ತಿರಸ್ಕರಿಸಲಾಗಿದೆ ಎಂದು ಆಯಾ ರಾಜ್ಯಗಳಿಗೆ ಕೇಂದ್ರ ರಕ್ಷಣಾ ಇಲಾಖೆಯೇ ಸ್ಪಷ್ಟಪಡಿಸಿದೆ. ಇಷ್ಟರ ಮೇಲೂ ಸಿದ್ದರಾಮಯ್ಯ ಅವರು ಕ್ಷುಲ್ಲಕ ರಾಜಕೀಯ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರೇ ನಿಮ್ಮ ಅನಗತ್ಯ ಕಂಠಶೋಷಣೆಗೆ ನಾವ್ಯಾರೂ ಹೊಣೆಗಾರರಲ್ಲ’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: Weekend Curfew: ವಾರಾಂತ್ಯ ಕರ್ಫ್ಯೂ, ನೈಟ್ ಕರ್ಫ್ಯೂ ವಿರುದ್ಧ ಬಿಜೆಪಿಯಲ್ಲೇ ಮೂಡಿದೆಯೇ ಅಸಮಾಧಾನ!

ಬಿಜೆಪಿ ಎನ್ನುವುದು ಸುಳ್ಳುಗಳ ಕಾರ್ಖಾನೆ ಎಂದಿದ್ದ ಸಿದ್ದರಾಮಯ್ಯ

ಸ್ತಬ್ಧಚಿತ್ರ ವಿವಾದ(Tableaue Controversy)ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಸಿದ್ದರಾಮಯ್ಯ(Siddaramaiah) ಬಿಜೆಪಿ ಎನ್ನುವುದು ಸುಳ್ಳುಗಳ ಕಾರ್ಖಾನೆ ಎಂದು ಕಿಡಿಕಾರಿದ್ದರು. ಕೇರಳದ ನಾರಾಯಣ ಗುರುಗಳ ಸ್ತಬ್ಧಚಿತ್ರ, ಪಶ್ಚಿಮ ಬಂಗಾಳದ ಸುಭಾಷ್ ಚಂದ್ರ ಬೋಸ್ ಸ್ತಬ್ಧಚಿತ್ರ ಮತ್ತು ತಮಿಳುನಾಡಿನ ಸ್ವಾತಂತ್ರ್ಯ ಹೋರಾಟಗಾರ ಚಿದಂಬರನರ್ ಸ್ತಬ್ಧಚಿತ್ರಗಳನ್ನು ತಿರಸ್ಕರಿಸಲಾಗಿದೆ. ತಿರಸ್ಕೃತ 3 ರಾಜ್ಯಗಳಲ್ಲಿ ಬಿಜೆಪಿಯೇತರ ಪಕ್ಷಗಳ ಸರ್ಕಾರ ಇರುವುದು ಕೇವಲ ಕಾಕತಾಳಿಯ ಎನ್ನುವುದನ್ನು ನಂಬಬಹುದೇ?’ ಅಂತಾ ಅವರು ಪ್ರಶ್ನಿಸಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News