Siddaramotsava: ‘ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ!?’

ಕಾಂಗ್ರೆಸ್‌ ಪಕ್ಷವೇ ಸಿದ್ದರಾಮಯ್ಯನವರ ಅದ್ದೂರಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ರಾಜ್ಯದ ಜನತೆಯ ಕಣ್ಣೀರಿಗೆ ಮಾಡುತ್ತಿರುವ ಅವಮಾನವೆಂದು ಬಿಜೆಪಿ ಟೀಕಿಸಿದೆ.

Written by - Puttaraj K Alur | Last Updated : Aug 3, 2022, 02:42 PM IST
  • ಒಬ್ಬ ಕಾರ್ಯಕರ್ತನನ್ನು ಕಳೆದುಕೊಂಡ ನಾವು ಜನೋತ್ಸವ ಕಾರ್ಯಕ್ರಮವನ್ನೇ ರದ್ದು ಮಾಡಿದ್ದೇವೆ
  • ಕಾಂಗ್ರೆಸ್‌ ಸಿದ್ದರಾಮಯ್ಯರ ಹುಟ್ಟುಹಬ್ಬ ಆಚರಿಸುತ್ತಿರುವುದು ರಾಜ್ಯದ ಜನತೆಯ ಕಣ್ಣೀರಿಗೆ ಮಾಡುತ್ತಿರುವ ಅವಮಾನ
  • ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮದ ವಾತಾವರಣ ಎಷ್ಟು ಸರಿ!? ಎಂದು ಪ್ರಶ್ನಿಸಿದ ಬಿಜೆಪಿ
Siddaramotsava: ‘ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮ ಎಷ್ಟು ಸರಿ!?’ title=
‘ಸಿದ್ದರಾಮೋತ್ಸವ’ ಟೀಕಿಸಿದ ಬಿಜೆಪಿ

ಬೆಂಗಳೂರು: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಪ್ರಯುಕ್ತ ದಾವಣಗೆರೆಯಲ್ಲಿ ಆಯೋಜಿಸಿರುವ ‘ಸಿದ್ದರಾಮೋತ್ಸವ ಅಮೃತ ಮಹೋತ್ಸವ’ ಕಾರ್ಯಕ್ರಮವನ್ನು ಟೀಕಿಸಿರುವ ಬಿಜೆಪಿ, ‘ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮದ ವಾತಾವರಣ ಎಷ್ಟು ಸರಿ!?’ ಎಂದು ಪ್ರಶ್ನಿಸಿದೆ.

#ಜನವಿರೋಧಿಕಾಂಗ್ರೆಸ್ ಹ್ಯಾಶ್ ಟ್ಯಾಗ್ ಬಳಸಿ ಬುಧವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ ಅಮೃತ ಮಹೋತ್ಸವ ಮತ್ತು ಕರ್ನಾಟಕ. ರಾಜ್ಯದಲ್ಲಿ ಮೂವರು ಹತ್ಯೆಗೀಡಾಗಿದ್ದಾರೆ, ಕಳೆದೆರೆಡು ದಿನಗಳಲ್ಲಿ 11 ಸಾವು ಸಂಭವಿಸಿದೆ ಮತ್ತು ಕಾಂಗ್ರೆಸ್ ಕಾರ್ಯಕರ್ತನೊಬ್ಬ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ. ಕಾಂಗ್ರೆಸ್ಸಿಗರೇ ಸೂತಕದ ಮನೆಯಲ್ಲಿ ಸಂಭ್ರಮದ ವಾತಾವರಣ ಎಷ್ಟು ಸರಿ!?’ ಎಂದು ಟೀಕಿಸಿದೆ.

ಇದನ್ನೂ ಓದಿ: ಮಂಕಿಪಾಕ್ಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ: ಸಚಿವ ಸುಧಾಕರ್

‘ನಾಡಿನಾದ್ಯಂತ ಕಂಡು ಕೇಳರಿಯದ ಮಳೆಯಾಗಿ ಅಪಾರ ಸಾವು-ನೋವುಗಳುಂಟಾಗಿದೆ. ಈ ಸಂದರ್ಭದಲ್ಲೂ ಕಾಂಗ್ರೆಸ್‌ ಪಕ್ಷವೇ ಮುಂದೆ ನಿಂತು ಸಿದ್ದರಾಮಯ್ಯನವರ ಅದ್ದೂರಿ ಹುಟ್ಟುಹಬ್ಬ ಆಚರಣೆ ಮಾಡುತ್ತಿರುವುದು ರಾಜ್ಯದ ಜನತೆಯ ಕಣ್ಣೀರಿಗೆ ಮಾಡುತ್ತಿರುವ ಅವಮಾನ’ ಎಂದು ಕುಟುಕಿದೆ.

‘ಒಬ್ಬ ಕಾರ್ಯಕರ್ತನನ್ನು ಕಳೆದುಕೊಂಡೆವು ಎಂಬ ಕಾರಣಕ್ಕೆ ನಾವು ಜನೋತ್ಸವ ಕಾರ್ಯಕ್ರಮವನ್ನೇ ರದ್ದು ಮಾಡಿದ್ದೇವೆ. ಆದರೆ ಅಮೃತ ಮಹೋತ್ಸವಕ್ಕೆ ಆಗಮಿಸುತ್ತಿದ್ದ ಕಾಂಗ್ರೆಸ್‌ ಕಾರ್ಯಕರ್ತ ಅಪಘಾತದಲ್ಲಿ ಮೃತಪಟ್ಟಾಗಲೂ ಕಾಂಗ್ರೆಸ್‌ ಕೇಕ್‌ ಕತ್ತರಿಸಿಕೊಂಡು ಸಂಭ್ರಮಿಸುತ್ತಿದೆ. ಕಾರ್ಯಕರ್ತನ ಸಾವಿಗೂ ಇಲ್ಲಿ ಬೆಲೆಯಿಲ್ಲ! ಗಾಂಧಿ ಕುಟುಂಬದ ಹೊರತಾದ ವ್ಯಕ್ತಿಯ ವೈಭವೀಕರಣವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಸಹಿಸುವುದಿಲ್ಲ. ದೇವರಾಜ ಅರಸು, ಬಂಗಾರಪ್ಪ ಅವರ ರಾಜಕೀಯ ಜೀವನದ ಅಂತ್ಯ ಹೇಗಾಯಿತು ಎಂಬುದನ್ನು ರಾಜ್ಯದ ಜನತೆ ಮರೆತಿಲ್ಲ. ಎಚ್ಚರಿಕೆಯ ಕರೆಗಂಟೆಯಿದು!’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: Siddaramosthava: ಸಿದ್ದರಾಮಯ್ಯ ‘ಅಮೃತ ಮಹೋತ್ಸವ’ಕ್ಕೆ ಸಿದ್ಧಗೊಂಡ ಬೃಹತ್ ವೇದಿಕೆ

‘75ನೇ ವರ್ಷದ ಹುಟ್ಟು ಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರಿಗೆ ಅಭಿನಂದನೆಗಳು. ನಕಲಿ ಗಾಂಧಿ ಕುಟುಂಬ ಹೊರತುಪಡಿಸಿ ಇದೇ ಮೊದಲ ಬಾರಿಗೆ ಕಾಂಗ್ರೆಸ್ಸಿಗರಿಂದ ಬೇರೊಬ್ಬ ವ್ಯಕ್ತಿಯ "ವ್ಯಕ್ತಿಪೂಜೆ" ನಡೆಸುವಂತೆ ಮಾಡಿದ ಸಿದ್ದರಾಮಯ್ಯ ಅವರ ಹಠಕ್ಕೂ ಅಭಿನಂದನೆಗಳು!’ ಎಂದು ಬಿಜೆಪಿ ಲೇವಡಿ ಮಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News