ರಾಜ್ಯ ಬಜೆಟ್ 2019: ಪ್ರಾಥಮಿಕ, ಪ್ರೌಢ ಶಿಕ್ಷಣಕ್ಕೆ ಸಿಕ್ಕಿದ್ದೆಷ್ಟು!

ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಅರಳಿಸಲು ಹಾಗೂ ಆರೋಗ್ಯಕರ ಸ್ಪರ್ಧೆಗೆ ವಿಶೇಷ ತರಬೇತಿ ಮತ್ತು ಮಾರ್ಗದರ್ಶನ ನೀಡಿ ಸಜ್ಜುಗೊಳಿಸಲು "ಸ್ಪರ್ಧಾ ಕಲಿ" ಯೋಜನೆ ಪ್ರಾರಂಭ.

Last Updated : Feb 8, 2019, 04:12 PM IST
ರಾಜ್ಯ ಬಜೆಟ್ 2019: ಪ್ರಾಥಮಿಕ, ಪ್ರೌಢ ಶಿಕ್ಷಣಕ್ಕೆ ಸಿಕ್ಕಿದ್ದೆಷ್ಟು! title=

ಬೆಂಗಳೂರು: 2019 - 20ನೇ ಸಾಲಿನ ರಾಜ್ಯ ಬಜೆಟ್‌ ಮಂಡಿಸಿದ ಸಿಎಂ ಕುಮಾರಸ್ವಾಮಿ ಪ್ರಾಥಮಿಕ, ಪ್ರೌಢ ಶಿಕ್ಷಣಕ್ಕೆ ವಿಶೇಷ ಕೊಡುಗೆಗಳನ್ನು ನೀಡಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ವಲಯದಲ್ಲಿ ಕಲಿಕೆಯ ಗುಣಮಟ್ಟ ಸುಧಾರಿಸಲು ಹಲವು ಅಂಶಗಳ ಬಗ್ಗೆ ಗಮನಹರಿಸಲಾಗಿದೆ.
◆ 'ಗುರುಚೇತನ' ಕಾರ್ಯಕ್ರಮದಡಿ 1 ಲಕ್ಷ ಶಿಕ್ಷಕರಿಗೆ 10 ದಿನಗಳ ತರಬೇತಿ.
◆ ಶಾಲೆಗಳ ಮೂಲಭೂತ ಸೌಕರ್ಯ ಆಧುನೀಕರಣಕ್ಕೆ ಕ್ರಮ; 1500 ಹೊಸ ಶಾಲಾ ಕೊಠಡಿ ಉನ್ನತೀಕರಣ, 1000 ಶಾಲೆಗಳಿಗೆ ಕಲಿಕಾ ಉಪಕರಣ ವಿತರಣೆ ಹಾಗೂ ಶಾಲಾ ಕಟ್ಟಡಗಳ ನಿರ್ವಹಣೆಗೆ ಒಬ್ಬ ಅಧಿಕಾರಿ ನೇಮಕ.
◆ ಶಾಲಾ ಆಡಳಿತದಲ್ಲಿ ಪಾರದರ್ಶಕತೆ ತರಲು ಆರ್ ಟಿ ಇ ಕಾಯ್ದೆಯಡಿ ರಚಿಸಲಾಗಿರುವ ಮೇಲುಸ್ತುವಾರಿ ಸಮಿತಿಗಳಿಗೆ ಹೆಚ್ಚಿನ ಹೊಣೆಗಾರಿಕೆ.
◆ಪ್ರತಿ ಶಿಕ್ಷಣ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಾಲೆಗಳ ರಿಪೋರ್ಟ್ ಕಾರ್ಡ್ ತಯಾರಿ.
◆ ಕಲಿಕೆಯ ಫಲಿತಾಮಶ ಸುಧಾರಣೆಗೆ ಆದ್ಯತೆ.
◆ ಟೀಚರ್-ಮೆಂಟರ್ ಕಾರ್ಯಕ್ರಮದ ಮೂಲಕ ಶಿಕ್ಷಕರಿಗೆ ಅರಿವು ಮೂಡಿಸಲು ಕ್ರಮ.
◆ ಮಕ್ಕಳು ಶಾಲೆಯಿಂದ ಹೊರಗುಲಿಯದಂತೆ ನೋಡಿಕೊಳ್ಳಲು ಮಕ್ಕಳ ಮೇಲೆ ವೈಯಕ್ತಿಕ ಗಮನ ಹರಿಸಲು ಕ್ರಮ.
◆ ಮುಂದಿನ 4 ವರ್ಷಗಳಲ್ಲಿ ಹೋಬಳಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ ಒದಗಿಸುವ್ ಒಂದು ಸಾವಿರ ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ. ಈ ಶಾಲೆಗಳಿಗೆ ಕೇಂದ್ರೀಯ ವಿದ್ಯಾಲಯ ಮಾದರಿಯ ಪ್ರತ್ಯೇಕ ಸಂಘಟನೆ ಹಾಗೂ ಮಾರ್ಗಸೂಚಿ ನಿಗದಿ.
◆ ಸರ್ಕಾರಿ ಶಾಲಾ ಶಿಕ್ಷಕರಿಗೆ ಭಾಷಾ ವಿಷಯಗಳಲ್ಲಿ ನಿರಂತರ ತರಬೇತಿ ನೀಡಲು 2 ಕೋಟಿ ರೂ. ವೆಚ್ಚದಲ್ಲಿ ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಆಲೂರು ವೆಂಕಟರಾವ್ ಅವರ ಹೆಸರಿನಲ್ಲಿ ಸುಸಜ್ಜಿತ ಭಾಷಾ ಕೌಶಲ್ಯ ತರಬೇತಿ ಕೇಂದ್ರ ಪ್ರಾರಂಭ.
◆ ಸರ್ಕಾರಿ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಅರಳಿಸಲು ಹಾಗೂ ಆರೋಗ್ಯಕರ ಸ್ಪರ್ಧೆಗೆ ವಿಶೇಷ ತರಬೇತಿ ಮತ್ತು ಮಾರ್ಗದರ್ಶನ ನೀಡಿ ಸಜ್ಜುಗೊಳಿಸಲು "ಸ್ಪರ್ಧಾ ಕಲಿ" ಯೋಜನೆ ಪ್ರಾರಂಭ. ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಪ್ರತಿ ಶೈಕ್ಷಣಿಕ ಜಿಲ್ಲೆಯ 20 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಕ್ರಮ. ಇದಕ್ಕಾಗಿ 1.5 ಕೋಟಿ ರೂ. ಅನುದಾನ.
◆ ಎಸ್.ಎಸ್.ಎಲ್.ಸಿ ಮೌಲ್ಯ ಮಾಪನ ಕೇಂದ್ರಗಳ ಡಿಜಿಟಲೀಕಾರಣಕ್ಕೆ 1 ಕೋಟಿ ರೂ ಅನುದಾನ.
◆ ಪದವಿ ಪೂರ್ವ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಆಸಕ್ತಿಯ ವಿಷಯದಲ್ಲಿ ವೃತ್ತಿ ಶಿಕ್ಷಣ ತರಬೇತಿ ನೀಡಲು 2 ಕೋಟಿ ರೂ. ಅನುದಾನ.

Trending News