Karnataka Budget: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೃಷಿ-ತೋಟಗಾರಿಕೆಗೆ ನೀಡಿದ್ದೇನು?

Karnataka Budget: ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ  "ನಂದಿನಿ" ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸಲಾಗುವುದು.

Written by - Prashobh Devanahalli | Edited by - Yashaswini V | Last Updated : Jul 7, 2023, 01:04 PM IST
  • ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ.
  • ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಪ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು.
  • 2023-24ನೇ ಸಾಲಿನಲ್ಲಿ ಐದು ಕೋಟಿ ರೂ ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮಗಳನ್ನ ಕೈಗೊಳ್ಳಲಾಗುವುದು.
Karnataka Budget: ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೃಷಿ-ತೋಟಗಾರಿಕೆಗೆ ನೀಡಿದ್ದೇನು?  title=

Karnataka Budget: 2023-24 ರ ಕರ್ನಾಟಕ ಬಜೆಟ್‌ನಲ್ಲಿ ಕೃಷಿ ಹಾಗೂ ತೋಟಗಾರಿಕೆ ₹5860 ಕೋಟಿ ಮೀಸಲಿಡಲಾಗಿದೆ. ಈ ಪೈಕಿ ಪ್ರಮುಖ ಘೋಷಣೆಗಳು ಇಲ್ಲಿವೆ.

ಕೃಷಿ :
ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿತ್ತು. ಯೋಜನೆಯನ್ನು ಮಹಾತ್ಮಾ ಗಾಂಧಿ ಉದ್ಯೋಗ ಈ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸಲಾಗುವುದು.

ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮತ್ತು ಕೃಷಿ ಮಾರುಕಟ್ಟೆಗೆ ಸಂಬಂಧಿಸಿದ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ನಿಟ್ಟೆನಲ್ಲಿ ಕೃಷಿ ಉದ್ಯಮಗಳಿಗೆ ಉತ್ತೇಜನ ನೀಡಲು 'ನವೋದ್ಯಮ' ಎಂಬ ಹೊಸ ಯೋಜನೆಯಡಿ 10 ಕೋಟಿ ರೂ. ಒದಗಿಸಲಾಗುವುದು.

ಇದನ್ನೂ ಓದಿ- ಬಜೆಟ್ 2023-24: ಮದ್ಯ ಪ್ರಿಯರಿಗೆ ಬರೆ : ಶೇ 20 ಹೆಚ್ಚಳ

ರೈತರು ಬೆಳೆದ ಉತ್ಪನ್ನಗಳನ್ನು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅನುಕೂಲವಾಗುವಂತೆ  "ನಂದಿನಿ" ಮಾದರಿಯಲ್ಲಿ ರೈತ ಉತ್ಪನ್ನಗಳಿಗೆ ಏಕೀಕೃತ ಬ್ರಾಂಡಿಂಗ್ ವ್ಯವಸ್ಥೆ ರೂಪಿಸಲು 10 ಕೋಟಿ ರೂ. ಒದಗಿಸಲಾಗುವುದು.

ರೈತ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಹಿಂದುಳಿದ ತಾಲ್ಲೂಕುಗಳ 100 ರೈತ ಉತ್ಪಾದಕ ಸಂಸ್ಥೆಗಳಿಗೆ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕುಗಳು ನೀಡುವ ತಲಾ 20 ಲಕ್ಷ ರೂ. ವರೆಗಿನ ಸಾಲಕ್ಕೆ ಶೇ.4 ರ ಬಡ್ಡಿ ಸಹಾಯಧನ ನೀಡಲಾಗುವುದು.

ರೈತ ಉತ್ಪಾದಕ ಸಂಸ್ಥೆಗಳ ಉತ್ಪನ್ನಗಳನ್ನು ರಫ್ತು ಮಾಡಲು ಅನುಕೂಲವಾಗುವಂತೆ ಗೋದಾಮು, ಶೀತಲಗೃಹ ನಿರ್ಮಾಣ ಮತ್ತು ಇತರ ಮೂಲಸೌಕರ್ಯ ಸೃಜನೆಗೆ ಯೋಜನಾ ವೆಚ್ಚದ ಗರಿಷ್ಠ ಶೇ. 20ರಷ್ಟು, ಒಂದು ಕೋಟಿ ರೂ. ಮೀರದಂತೆ Seed Capital ಒದಗಿಸಲಾಗುವುದು.

ರಾಜ್ಯದಲ್ಲಿ ಬೆಳೆದ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತನ್ನು ಉತ್ತೇಜಿಸಲು ಕೆಪೆಕ್‌ ಸಂಸ್ಥೆಯ ಮೂಲಕ ರೈತ ಉತ್ಪಾದಕ ಸಂಸ್ಥೆಗಳು, ನವೋದ್ಯಮಿಗಳು (Startups) ಮತ್ತು ಕಿರು ಆಹಾರ ಸಂಸ್ಕರಣಾ ಉದ್ದಿಮೆದಾರರಿಗೆ ಬೆಂಬಲ ನೀಡಲು ಐದು ಕೋಟಿ ರೂ ಒದಗಿಸಲಾಗುವುದು. 

ಇದನ್ನೂ ಓದಿ- ಕರ್ನಾಟಕ ಇತಿಹಾಸದಲ್ಲಿ ಸಿಎಂ ಸಿದ್ದರಾಮಯ್ಯ ಹೊಸ ದಾಖಲೆ

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಆಧಾರದಲ್ಲಿ ಒದಗಿಸುವ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಈ ಕೇಂದ್ರಗಳನ್ನು ಇನ್ನಷ್ಟು ಬಲಪಡಿಸಿ, ಇವುಗಳಲ್ಲಿ 300 ಹೈಟೆಕ್ ಹಾರ್ವೆಸ್ಟರ್ ಹಬ್ ಗಳನ್ನು ಹಂತಹಂತವಾಗಿ ಸ್ಥಾಪಿಸಲು ಉದ್ದೇಶಿಸಲಾಗಿದ್ದು, 2023-24ನೇ ಸಾಲಿನಲ್ಲಿ 100 ಹಬ್‌ಗಳನ್ನು ಸ್ಥಾಪಿಸಲು 50 ಕೋಟಿ ರೂ. ಒದಗಿಸಲಾಗುವುದು.

ತೋಟಗಾರಿಕೆ :
ರೈತರ ಆದಾಯವನ್ನು ಹೆಚ್ಚಿಸುವುದರಲ್ಲಿ ತೋಟಗಾರಿಕಾ ಬೆಳೆಗಳು ಪ್ರಮುಖ ಪಾತ್ರ ವಹಿಸುತ್ತವೆ. ತೋಟಗಾರಿಕಾ ವಲಯದಲ್ಲಿನ ರಾಜ್ಯದ ಸಾಮರ್ಥ್ಯವನ್ನು ಹೆಚ್ಚಿಸಲು ತೆಂಗು, ಅಡಿಕೆ, ದ್ರಾಕ್ಷಿ, ದಾಳಿಂಬೆ, ಮಾವು ಮತ್ತಿತರ ಹಣ್ಣು, ತರಕಾರಿ, ಹೂವುಗಳು ಸೇರಿದಂತೆ ತೋಟಗಾರಿಕಾ ಬೆಳೆಗಳ ಉತ್ಪಾದನೆ, ಸಂಸ್ಕರಣೆ, ಬ್ರಾಂಡಿಂಗ್ ಮತ್ತು ರಪ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು. 2023-24ನೇ ಸಾಲಿನಲ್ಲಿ ಐದು ಕೋಟಿ ರೂ ವೆಚ್ಚದಲ್ಲಿ ರೋಗ ನಿಯಂತ್ರಣ ಕ್ರಮಗಳನ್ನ ಕೈಗೊಳ್ಳಲಾಗುವುದು. ತೋಟಗಾರಿಕಾ ಉತ್ಪನ್ನಗಳ ಸಂಸ್ಕರಣೆಗಾಗಿ ಎಂಟು ಶೀತಲ ಘಟಕಗಳನ್ನು ನಿರ್ಮಾಣ ಮಾಡಲಾಗುವುದು. 

ಅನನ್ಯವಾದ ರುಚಿ ಮತ್ತು ಕಂಪನ್ನು ಹೊಂದಿರುವ ಚಿಕ್ಕಮಗಳೂರು, ಕೊಡಗು ಮತ್ತು ಬಾಬಾ ಬುಡನಗಿರಿಯ ರಿಯ ಅರೇಬಿಕಾ ಕಾಫಿ ವೈವಿಧ್ಯಗಳು GI Tag ಹೊಂದಿವೆ. ರಾಜ್ಯದ ಕಾಫಿಯನ್ನು ಇನ್ನಷ್ಟು ಪ್ರಚುರಪಡಿಸಿ ಜನಪ್ರಿಯಗೊಳಿಸಲು ಮತ್ತು ಕಾಫಿ ಎಕೋ ಟೂರಿಸಂ ಅನ್ನು ಉತ್ತೇಜಿಸಲು ಕರ್ನಾಟಕದ ಕಾಫಿಗೆ ಬ್ರಾಂಡಿಂಗ್ ಮಾಡಲು ಕ್ರಮ.

ವಿಶೇಷ ಕಂಪು, ರುಚಿ ಮತ್ತು ಸೊಗಡಿನಿಂದ ಜನಮನದಲ್ಲಿ ನೆಲೆಸಿರುವ ಮೈಸೂರು ಮಲ್ಲಿಗೆ, ನಂಜನಗೂಡು ರಸಬಾಳೆ ಹಾಗೂ ಮೈಸೂರು ವೀಳ್ಯದೆಲೆಗಳು GI Tag ಗಳನ್ನು ಪಡೆದಿವೆ. ಇವುಗಳ ಉತ್ಪಾದನೆ, ಸಂಶೋಧನೆ, ಮಾರುಕಟ್ಟೆ ಮತ್ತು ಬ್ರಾಂಡಿಂಗ್ ಉತ್ತೇಜಿಸಲು ನೂತನ ಕಾರ್ಯಕ್ರಮವನ್ನು ರೂಪಿಸಲಾಗುವುದು.

ವಾಣಿಜ್ಯ ಹೂವಿನ ರತ್ತಿನಲ್ಲಿ ಕರ್ನಾಟಕ ಅಗ್ರಸ್ಥಾನ ಹೊಂದುವ ಸಾಮರ್ಥ್ಯ ಹೊಂದಿದ್ದು, ಇವುಗಳ ತಳಿಗಳ ಕೊರತೆ ನಿವಾರಿಸಲು ಅಂತಹ ತಳಿಗಳನ್ನು ಆಮದು ಮಾಡಿಕೊಂಡು ರೈತರಿಗೆ ಕೈಗೆಟಕುವ ದರದಲ್ಲಿ ಒದಗಿಸಲು ಕ್ರಮವಹಿಸಲಾಗುವುದು.

ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಕ್ಷೇತ್ರದ ಪ್ರಾಯೋಗಿಕ ಅರಿವು ಮೂಡಿಸಲು “ವಿದ್ಯಾರ್ಥಿಗಳಿಗಾಗಿ ತೋಟಗಾರಿಕೆ” ಯೋಜನೆಯನ್ನು ಜಾರಿಗೊಳಿಸಲಾಗುವುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=38l6m8543Vk

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
 

Trending News