Karnataka By Election Result 2021 : ಮಸ್ಕಿಯಲ್ಲಿ ಬಿಜೆಪಿಗೆ ಭಾರಿ ಮುಖಭಂಗ : ಗೆಲುವಿನತ್ತ ಕಾಂಗ್ರೆಸ್..!

ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಭಾರೀ ಮುಖಭಂಗವಾಗುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಗೆಲುವು ಬಹುತೇಕ ನಿಶ್ಚಯವಾಗಿದೆ. ಇಷ್ಟು ಹೊತ್ತು ನಡೆದ ಮತ ಎಣಿಕೆ ಕೇಂದ್ರದಲ್ಲಿದ್ದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಇದೀಗ ತಮ್ಮ ಸೋಲು ಖಚಿತ ಎಂದು ಗೊತ್ತಾಗುತ್ತಿದ್ದಂತೆ ಹೊರ ನಡೆದಿದ್ದಾರೆ.

Last Updated : May 2, 2021, 12:20 PM IST
  • ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಭಾರೀ ಮುಖಭಂಗ
  • ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಗೆಲುವು ಬಹುತೇಕ ನಿಶ್ಚಯವಾಗಿದೆ
  • ಕ್ಷೇತ್ರದಲ್ಲಿ ಇಷ್ಟೊಂದು ಅಭಿವೃದ್ಧಿ ಕೆಲಸಗಳನ್ನು ತಾವು ಮಾಡಿದ್ದರೂ ಜನರು ಬೆಲೆ ಕೊಟ್ಟಿಲ್ಲ
Karnataka By Election Result 2021 : ಮಸ್ಕಿಯಲ್ಲಿ ಬಿಜೆಪಿಗೆ ಭಾರಿ ಮುಖಭಂಗ : ಗೆಲುವಿನತ್ತ ಕಾಂಗ್ರೆಸ್..! title=

ಮಸ್ಕಿ: ರಾಯಚೂರು ಜಿಲ್ಲೆಯ ಮಸ್ಕಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆ ಭಾರೀ ಮುಖಭಂಗವಾಗುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ ಗೆಲುವು ಬಹುತೇಕ ನಿಶ್ಚಯವಾಗಿದೆ. ಇಷ್ಟು ಹೊತ್ತು ನಡೆದ ಮತ ಎಣಿಕೆ ಕೇಂದ್ರದಲ್ಲಿದ್ದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಇದೀಗ ತಮ್ಮ ಸೋಲು ಖಚಿತ ಎಂದು ಗೊತ್ತಾಗುತ್ತಿದ್ದಂತೆ ಹೊರ ನಡೆದಿದ್ದಾರೆ.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ  ಪ್ರತಾಪ್ ಗೌಡ ಪಾಟೀಲ್(Pratap Gowda Patil), ಕ್ಷೇತ್ರದಲ್ಲಿ ಇಷ್ಟೊಂದು ಅಭಿವೃದ್ಧಿ ಕೆಲಸಗಳನ್ನು ತಾವು ಮಾಡಿದ್ದರೂ ಜನರು ಬೆಲೆ ಕೊಟ್ಟಿಲ್ಲ, ನಿರೀಕ್ಷಿತ ಮತಗಟ್ಟೆಗಳಲ್ಲಿಯೂ ತಮ್ಮ ಪರ ಮತಗಳು ಬಂದಿಲ್ಲ, ಜನ ಹೀಗೆ ಯಾಕೆ ಮಾಡಿದ್ದಾರೆ ಎಂದು ಗೊತ್ತಾಗುತ್ತಿಲ್ಲ, ಕ್ಷೇತ್ರದಲ್ಲಿ ವಿರೋಧಿ ಅಲೆ ಎದ್ದಿರುವುದು ಗೊತ್ತಾಗುತ್ತಿದೆ ಎಂದು ಬೇಸರದಿಂದಲೇ ಹೇಳಿದರು.

ಇದನ್ನೂ ಓದಿ : New Guidelines : ಲಾಕ್ ಡೌನ್ ಮಾರ್ಗಸೂಚಿ ಬದಲಾವಣೆ : ಸಂತೆ, ಮಾರುಕಟ್ಟೆ ಸಂಪೂರ್ಣ ಬಂದ್..!

ಹೊಸಬರೊಂದಿಗೆ ಒಡನಾಟ ಬೇಕು ಎಂದು ಕ್ಷೇತ್ರದ ಜನ ಭಾವಿಸಿದ್ದಾರೆ ಎನಿಸುತ್ತದೆ, ಕ್ಷೇತ್ರ(Constituency)ದ ಜನಕ್ಕೆ ಅಭಿವೃದ್ಧಿ, ಪ್ರೀತಿ-ವಿಶ್ವಾಸ ಬೇಕಾಗಿಲ್ಲ ಎಂದು ನನಗೆ ಇಂದು ಉಂಟಾದ ಸೋಲಿನಿಂದ ಕಂಡುಬರುತ್ತಿದೆ. ಹೊಸಬರಿಂದ ಹೆಚ್ಚು ನಿರೀಕ್ಷಿಸುತ್ತಿದ್ದಾರೆ ಎನಿಸುತ್ತಿದೆ, ಯಾರು ಬಂದು ಪ್ರಚಾರ ಮಾಡಿದರೂ ಪರಿಣಾಮ ಬೀರುವುದಿಲ್ಲ ಎಂದರು.

ಇದನ್ನೂ ಓದಿ : BS Yediyurappa : 'ರಾಜ್ಯದ ಕೊರೋನಾ ಲಸಿಕೆ ಕೊರತೆಯನ್ನ 2-3 ದಿನಗಳಲ್ಲಿ ಬಗೆಹರಿಸಲಾಗುವುದು'

ಮುಂದಿನ ದಿನಗಳಲ್ಲಿ ಪಕ್ಷ(BJP Party)ದ ಹಿರಿಯರ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಸೋಲಿಗೆ ಏನು ಕಾರಣ ಎಂದು ಪಕ್ಷದ ಹಿರಿಯ ನಾಯಕರು ತೀರ್ಮಾನಿಸುತ್ತಾರೆ, ಸೋತೆನೆಂದು ಕ್ಷೇತ್ರ, ಪಕ್ಷ ಬಿಟ್ಟು ಹೋಗುವುದಿಲ್ಲ, ಮುಂದೆಯೂ ಕ್ಷೇತ್ರದ ಜನರ ಪರವಾಗಿ ಕೆಲಸ ಮಾಡುತ್ತೇನೆ, ಇನ್ನೂ ಎರಡು ವರ್ಷಗಳ ಕಾಲ ನಮ್ಮ ಪಕ್ಷ ಅಧಿಕಾರದಲ್ಲಿ ಇರುತ್ತದೆ, ಈ ಸಮಯದಲ್ಲಿ ನನ್ನಿಂದ ಏನು ಈ ಕ್ಷೇತ್ರಕ್ಕೆ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇನೆ ಎಂದರು.

ಇದನ್ನೂ ಓದಿ : Covid Protocol : ಬೈಎಲೆಕ್ಷನ್ ಮತ ಎಣಿಕೆಗೆ ತೆಗೆದುಕೊಳ್ಳಲಿದೆ ಹೆಚ್ಚು ಸಮಯ..!

ಇತ್ತೀಚಿನ ವರದಿ ಬಂದಾಗ ಕಾಂಗ್ರೆಸ್(Congress) ನ ಬಸನಗೌಡ ತುರುವಿಹಾಳ 8,618 ಮತಗಳ ಅಂತರಿಂದ 8ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರಿಂದ ಮುನ್ನಡೆಯಲ್ಲಿದ್ದಾರೆ.

ಇದನ್ನೂ ಓದಿ : Corona Vaccine: ಆದಷ್ಟು ಬೇಗ ಕೊರೋನಾ ಲಸಿಕೆ ಕೊರತೆ ನಿವಾರಿಸಿ, ಎಲ್ಲರಿಗೂ ಲಸಿಕೆ ಕೊಡಿ-ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News