ರಾಜ್ಯದ ಎಸ್ಸಿ/ಎಸ್ಟಿ ನೌಕರರಿಗೆ ಸಿಹಿ ಸುದ್ದಿ; ಬಡ್ತಿ ಮೀಸಲಾತಿ ಕಾಯ್ದೆಗೆ ಸಂಪುಟ ಅಸ್ತು

ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಂಪುಟ ಸಮ್ಮತಿ ನೀಡಿದೆ. ಈಗಾಗಲೇ ಈ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಹಾಕಿದ್ದಾರೆ. ಹಾಗಾಗಿ ಕಾಯ್ದೆ ಜಾರಿಗೊಳಿಸಲಾಗುತ್ತಿದೆ.

Last Updated : Jan 30, 2019, 05:54 PM IST
ರಾಜ್ಯದ ಎಸ್ಸಿ/ಎಸ್ಟಿ ನೌಕರರಿಗೆ ಸಿಹಿ ಸುದ್ದಿ; ಬಡ್ತಿ ಮೀಸಲಾತಿ ಕಾಯ್ದೆಗೆ ಸಂಪುಟ ಅಸ್ತು title=

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸರ್ಕಾರಿ ನೌಕರರ ಬಡ್ತಿ ಮೀಸಲಾತಿ ಕಾಯ್ದೆಗೆ ಬುಧವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕ ಜಾರಿಗೆ ಒಪ್ಪಿಗೆ ಸೂಚಿಸಲಾಗಿದೆ. ಸುಪ್ರೀಂಕೋರ್ಟ್​ನಲ್ಲಿ ಇನ್ನೂ ವಿಚಾರಣೆ ಬಾಕಿ ಇದ್ದರೂ ವಿಧೇಯಕ ಜಾರಿಗೆ ತರಲು ನಿರ್ಧರಿಸಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ ಎಸ್ಸಿ, ಎಸ್ಟಿ ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೆ ಸಂಪುಟ ಸಮ್ಮತಿ ನೀಡಿದೆ. ಈಗಾಗಲೇ ಈ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಹಾಕಿದ್ದಾರೆ. ಹಾಗಾಗಿ ಕಾಯ್ದೆ ಜಾರಿಗೊಳಿಸಲಾಗುತ್ತಿದೆ. ಅಲ್ಲದೆ, ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪಿಗೆ ಒಳಪಡುವಂತೆ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರದಿಂದ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆಯಾಗುವುದಿಲ್ಲ ಎಂದು ಹೇಳಿದರು.

ಡಿಸಿಎಂ ಡಾ.ಜಿ.ಪರಮೇಶ್ವರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ತೀವ್ರ ಒತ್ತಡ ಬಂದಿತ್ತು. ಅಲ್ಲದೇ ಸಮನ್ವಯ ಸಮಿತಿ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ಒತ್ತಡಕ್ಕೆ ಮಣಿದು ಕಾಯ್ದೆ ಜಾರಿಗೆ ತೀರ್ಮಾನಿಸಲಾಗಿದೆ ಎನ್ನಲಾಗಿದೆ. 

ಏತನ್ಮಧ್ಯೆ, ರಾಜ್ಯ ಸರ್ಕಾರ ಮೀಸಲಾತಿ ವಿಧೇಯಕಕ್ಕೆ ಸಮ್ಮತಿ ಸೂಚಿಸಿದ ಬೆನ್ನಲ್ಲೇ ವಿಧಾನಸೌಧದಲ್ಲಿ ಎಸ್ಸಿ, ಎಸ್ಟಿ ನೌಕರರು ಸಿಹಿ ಹಂಚಿ ಸಂಭ್ರಮಿಸಿದರು. ಈ ಕಾಯ್ದೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಅನುಕೂಲವಾಗಲಿದೆ.
 

Trending News