Karnataka Cabinet Expansion: ಇಂದು ಸಂಜೆ ಜೆ.ಪಿ.ನಡ್ಡಾ ಭೇಟಿಯಾಗಲಿರುವ ಸಿಎಂ ಬೊಮ್ಮಾಯಿ

ಕ್ಯಾಬಿನೆಟ್ ಫೈನಲ್ ಮಾಡಲು ಸಿಎಂ ಬಸವರಾಜ್ ಬೊಮ್ಮಾಯಿ ಅಂತಿಮ ಹಂತದ ಕಸರತ್ತು

Written by - Puttaraj K Alur | Last Updated : Aug 2, 2021, 04:24 PM IST
  • ರಾಜ್ಯದ ಸಚಿವ ಸಂಪುಟ ರಚನೆಗೆ ಬಿಜೆಪಿ ಹೈಕಮಾಂಡ್ 3 ಸೂತ್ರ ಸಿದ್ಧಪಡಿಸಿದೆಯಂತೆ
  • ಜೆಪಿ ನಡ್ಡಾ-ಬಸವರಾಜ್ ಬೊಮ್ಮಾಯಿ ಭೇಟಿ ಬಳಿಕ ಕ್ಯಾಬಿನೆಟ್ ಕುರಿತ ಸ್ಪಷ್ಟ ಚಿತ್ರಣ ದೊರೆಯಲಿದೆ
  • ಒಂದು ವೇಳೆ ಇಂದು ಲಿಸ್ಟ್ ಫೈನಲ್ ಆದರೆ ಬುಧವಾರವೇ ಪ್ರಮಾಣ ವಚನ ನಡೆಯಲಿದೆ
Karnataka Cabinet Expansion: ಇಂದು ಸಂಜೆ ಜೆ.ಪಿ.ನಡ್ಡಾ ಭೇಟಿಯಾಗಲಿರುವ ಸಿಎಂ ಬೊಮ್ಮಾಯಿ title=
ಜೆ.ಪಿ.ನಡ್ಡಾ ಭೇಟಿಯಾಗಲಿರುವ ಬಸವರಾಜ್ ಬೊಮ್ಮಾಯಿ

ನವದೆಹಲಿ: ಭಾರೀ ಕುತೂಹಲ ಮೂಡಿಸಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ(Karnataka Cabinet Expansion) ಅಂತಿಮ ಹಂತಕ್ಕೆ ಬಂದು ತಲುಪಿದೆ. ಕ್ಯಾಬಿನೆಟ್ ಫೈನಲ್ ಮಾಡಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಂತಿಮ ಹಂತದ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆ ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಿ ಚರ್ಚಿಸಲು ಬೊಮ್ಮಾಯಿ ದೆಹಲಿಗೆ ಆಗಮಿಸಿದ್ದಾರೆ.

ಸಂಪುಟ ವಿಸ್ತರಣೆ ಹಿನ್ನೆಲೆ ಸೋಮವಾರ ದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ಸಚಿವ ಧರ್ಮೆಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ಚರ್ಚೆ ನಡೆಸಿದ್ದಾರೆ. ಇಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಕೂಡ ಭೇಟಿಯಾಗಿ ಚರ್ಚಿಸಲಿದ್ದಾರೆ. ಇವತ್ತೆ ಬೊಮ್ಮಾಯಿಯವರ ಕ್ಯಾಬಿನೆಟ್ ಲಿಸ್ಟ್(Karnataka Cabinet List) ಫೈನಲ್ ಆಗಲಿದೆಯಾ ಎಂಬ ಪ್ರಶ್ನೆ ಮೂಡಿದ್ದು, ರಾಜ್ಯದ ಸಚಿವ ವಿಸ್ತರಣೆ ಬಗ್ಗೆ ಭಾರೀ ಕುತೂಹಲ ಮೂಡಿದೆ.

ಇದನ್ನೂ ಓದಿ: ಅನಾಥೆಯನ್ನು ಮಗಳಂತೆ ಸಾಕಿ ಹಿಂದೂ ಸಂಪ್ರದಾಯದಂತೆ ಮದುವೆ ಮಾಡಿಕೊಟ್ಟ ಮುಸ್ಲಿಂ ವ್ಯಕ್ತಿ!

ಸಚಿವ ಸಂಪುಟ ರಚನೆಗೆ ಹೈಕಮಾಂಡ್ 3 ಸೂತ್ರ

ರಾಜ್ಯದ ಸಚಿವ ಸಂಪುಟ ರಚನೆಗೆ ಬಿಜೆಪಿ ಹೈಕಮಾಂಡ್(BJP Hicommand) 3 ಸೂತ್ರ ಸಿದ್ಧಪಡಿಸಿದೆಯಂತೆ. ಎಷ್ಟು ಹಂತ, ಎಷ್ಟು ಜನ ಹಾಗೂ ಪ್ರಾದೇಶಿಕವಾರು ಸೂತ್ರದಡಿ ಸಂಪುಟ ರಚನೆಯಾಗಲಿದೆ ಅಂತಾ ಈಗಾಗಲೇ ಸಿಎಂ ಬೊಮ್ಮಾಯಿ ದೆಹಲಿಯಲ್ಲಿ ಹೇಳಿದ್ದಾರೆ. ಜೆಪಿ ನಡ್ಡಾ-ಬಸವರಾಜ್ ಬೊಮ್ಮಾಯಿ ಭೇಟಿ ಬಳಿಕ ಕ್ಯಾಬಿನೆಟ್ ಕುರಿತ ಸ್ಪಷ್ಟ ಚಿತ್ರಣ ದೊರೆಯಲಿದೆ. ಒಂದು ವೇಳೆ ಇಂದು ಲಿಸ್ಟ್ ಫೈನಲ್ ಆದರೆ ಬುಧವಾರವೇ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಮಂತ್ರಿಗಿರಿ ಮರಳಿ ಪಡೆಯಲು ಸಿ.ಪಿ.ಯೋಗೇಶ್ವರ್‌ ಕಸರತ್ತು

ಬಿ.ಎಸ್.ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್(CP Yogeeshwara) ಮಂತ್ರಿಗಿರಿ ಮರಳಿ ಪಡೆಯಲು ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಬೊಮ್ಮಾಯಿ ಕ್ಯಾಬಿನೆಟ್ ನಲ್ಲಿ ಮಂತ್ರಿ ಸ್ಥಾನ ಪಡೆದುಕೊಳ್ಳಲು ಚಣ್ಣಪಟ್ಟಣದ ಸೈನಿಕ ದೆಹಲಿಗೆ ಹಾರಿದ್ದಾರೆ. ಹೈಕಮಾಂಡ್ ನಾಯಕರ ಮೇಲೆ ಒತ್ತಡ ಹಾಕಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಯೋಗೇಶ್ವರ್ ತಂತ್ರ ರೂಪಿಸಿದ್ದಾರೆಂದು ತಿಳಿದುಬಂದಿದೆ.

ಇದನ್ನೂ ಓದಿ: Karnataka Weather: ರಾಜ್ಯದ ಈ ಭಾಗಗಳಲ್ಲಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಮಂತ್ರಿಗಿರಿಗಾಗಿ ಮುಂದುವರಿದ ಲಾಬಿ

ನೂತನ ಸಂಪುಟದಲ್ಲಿ ಮಂತ್ರಿಸ್ಥಾನ ಪಡೆದುಕೊಳ್ಳಲು ಬಿಜೆಪಿಯ ಅನೇಕ ಶಾಸಕ(BJP MLAs)ರು ಮತ್ತು ಮಾಜಿ ಸಚಿವರು ಭರ್ಜರಿ ಲಾಬಿ ನಡೆಸುತ್ತಿದ್ದಾರೆ. ಈಗಾಗಲೇ ಅನೇಕರು ಸಿಎಂ ಬಸವರಾಜ್ ಬೊಮ್ಮಾಯಿಯವರನ್ನು ಭೇಟಿ ಮಾಡಿ ತಮ್ಮನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಕೆಲವರು ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಯಾರ್ಯಾರಿಗೆ ಮಂತ್ರಿಗಿರಿ ಭಾಗ್ಯ ಸಿಗುತ್ತದೆ ಎಂಬುದು ಕೂತಹಲಕ್ಕೆ ಕಾರಣವಾಗಿದೆ.  ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News