ಬೆಂಗಳೂರು: ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಭಾನುವಾರ ಬೆಳಿಗ್ಗೆ ಟ್ರಕ್ ಮತ್ತು ಮಿನಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಏಳು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಬಗ್ಗೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಅವರ ಜೊತೆ ಮಾತನಾಡಿದ್ದಾರೆ.
ಇದನ್ನೂ ಓದಿ: IPL 2022 : ಗುಜರಾತ್-ರಾಜಸ್ಥಾನ ಫೈನಲ್ ಫೈಟ್: ಅಂತಿಮ ಜಿದ್ದಾಜಿದ್ದಿ ನೋಡಲಿದ್ದಾರಾ ಪಿಎಂ ಮೋದಿ?
ಮೋತಿಪುರ್ ಪ್ರದೇಶದ ಲಖಿಂಪುರ-ಬಹ್ರೈಚ್ ರಾಜ್ಯ ರಸ್ತೆಯಲ್ಲಿ ಭಾನುವಾರ ಮುಂಜಾನೆ ರಸ್ತೆ ಅಪಘಾತ ಸಂಭವಿಸಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅಪಘಾತದಲ್ಲಿ ಮೃತರ ಬಗ್ಗೆ ಉತ್ತರ ಪ್ರದೇಶದ ಸಿಎಂ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಮೃತದೇಹಗಳನ್ನು ಹೈದರಾಬಾದ್ ಮೂಲಕ ಬೀದರ್‌ಗೆ ತರಲು ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.
ಇದನ್ನೂ ಓದಿ: Knowledge News: ಡಿಟಿಎಚ್ ಆಂಟೆನಾಗಳ ಶೇಪ್ ಈ ರೀತಿ ಇರಲು ಕಾರಣ ಏನು ಗೊತ್ತಾ?
ಈ ಬಗ್ಗೆ ಪ್ರಿತಿಕ್ರಿಯಿಸಿರುವ ಸಿಎಂ ಬೊಮ್ಮಾಯಿ, "ಪುಣ್ಯಭೂಮಿ ಅಯೋಧ್ಯೆಗೆ ತೆರಳುತ್ತಿದ್ದ ಬೀದರ್‌ನ ಪ್ರವಾಸಿಗರ ತಂಡದ ಬಸ್ ಉತ್ತರಪ್ರದೇಶದ ಲಖೀಂಪುರಖೇರಿ ಬಳಿ ಭೀಕರ ಅಪಘಾತಕ್ಕೆ ಒಳಗಾಗಿ ಒಂದೇ ಕುಟುಂಬದ 7 ಜನ ಅಸುನೀಗಿದ್ದಾರೆ. 9 ಜನ ಗಾಯಗೊಂಡಿರುವ ಸುದ್ದಿ ತಿಳಿದು ಅತ್ಯಂತ ದುಃಖಿತನಾಗಿದ್ದೇನೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತಾ, ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ನಾನು ಈ ಕುರಿತು ಈಗಾಗಲೇ ಉತ್ತರಪ್ರದೇಶದ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ ಹಾಗೂ ಸ್ಥಳೀಯ ಜಿಲ್ಲಾಧಿಕಾರಿಯೊಂದಿಗೆ ಮಾತನಾಡಿದ್ದೇನೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ನಾವು ಅಲ್ಲಿನ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ. ಮೃತದೇಹಗಳನ್ನು ರಾಜ್ಯಕ್ಕೆ ತರಲು ಎಲ್ಲಾ ಸೂಕ್ತವ್ಯವಸ್ಥೆ ಮಾಡಲಾಗಿದೆ" ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.