ಬೆಂಗಳೂರು: ಉಕ್ರೇನ್ ನಲ್ಲಿ (Ukraine) ಮೃತಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಅವರ ತಂದೆ ಶೇಖರಗೌಡ ಅವರೊಂದಿಗೆ ಸಿಎಂ ಬಸವರಾಜ ಬೊಮ್ಮಾಯಿ (CM Basavaraj Bommai) ದೂರವಾಣಿಯಲ್ಲಿ ಮಾತನಾಡಿ, ಸಾಂತ್ವನ ಹೇಳಿದ್ದಾರೆ.
ಇದನ್ನೂ ಓದಿ: Russia Ukraine war : ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾವು
ನವೀನ್ (Naveen) ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಭರವಸೆ ನೀಡಿದ್ದಾರೆ.
ಮಗನ ಬಗ್ಗೆ ಮಾಹಿತಿ ನೀಡಿದ ಶೇಖರಗೌಡ ಜ್ಞಾನ ಗೌಡರ್ ಇಂದು ಮುಂಜಾನೆ ತಮ್ಮ ಮಗ ದೂರವಾಣಿ ಕರೆ (CM Phone Call with Naveen Father) ಮಾಡಿದ್ದ. ಪ್ರತಿ ದಿನ ಎರಡು ಮೂರು ಬಾರಿ ದೂರವಾಣಿ ಮೂಲಕ ಮಾತಾಡುತ್ತಿದ್ದ ಎಂದು ವಿವರಿಸಿದ್ದಾರೆ.
ನವೀನ್ ಸಾವು ಅತ್ಯಂತ ದುರಾದೃಷ್ಟಕರ. ಭಗವಂತ ನವೀನ್ ಆತ್ಮಕ್ಕೆ ಶಾಂತಿ ನೀಡಲಿ. ಕುಟುಂಬದವರಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ರಷ್ಯಾ ಉಕ್ರೇನ್ ವಿರುದ್ಧ ಯುದ್ದ (Rusia Ukraine war) ಘೋಷಿಸಿದ ನಂತರ ಉಕ್ರೇನ್ ನಲ್ಲಿ ಸರಣಿ ಬಾಂಬ್ ಸ್ಫೋಟಗಳು ನಡೆಯುತ್ತಿವೆ. ಈ ನಡುವೆ, ಜನರು ತಮ್ಮನ್ನು ರಕ್ಷಿಸಿಕೊಳ್ಳಲು ಸುರಕ್ಷಿತ ತಾಣಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಸುಮಾರು 16,000 ಭಾರತೀಯರು ಯುದ್ಧ ವಲಯದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: Russia Ukraine war : ಉಕ್ರೇನ್ ನಲ್ಲಿ ಕರ್ನಾಟಕದ ವಿದ್ಯಾರ್ಥಿ ಸಾವು
ಇದೀಗ ಉಕ್ರೇನ್‌ನಲ್ಲಿ ಸಿಲುಕಿಹಾಕಿಕೊಂಡಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಪಶ್ಚಿಮ ಗಡಿಯನ್ನು ತಲುಪಲು ಎಲ್ವಿವ್ ರೈಲು ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಸಿಎಂ ಯಡಿಯೂರಪ್ಪ ಸಾಂತ್ವನ:
ರಷ್ಯಾ-ಉಕ್ರೇನ್ ಯುದ್ಧದಲ್ಲಿ ಬಾಂಬ್ ದಾಳಿಗೆ ತುತ್ತಾಗಿ ಮೃತರಾಗಿರುವ ಕರ್ನಾಟಕದ ನವೀನ್ ಕುಟುಂಬಕ್ಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕರೆ ಮಾಡಿ ಸಾಂತ್ವನ ಹೇಳಿದರು. ನವೀನ್ ಕುಟುಂಬಕ್ಕೆ ಮಾಜಿ ಮುಖ್ಯಮಂತ್ರಿಗಳು ಧೈರ್ಯ ಹೇಳಿದ್ದಾರೆ. ಮೃತದೇಹ ತರಿಸಲು ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.