ಇಂದಿರಾ ಕ್ಯಾಂಟೀನ್ ಮುಳುಗಿಸುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರ: ಕಾಂಗ್ರೆಸ್ ಆಕ್ರೋಶ

ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಯೋಜನೆಯ ಗುಣಮಟ್ಟವನ್ನು ಭ್ರಷ್ಟ ಬಿಜೆಪಿ ಸರ್ಕಾರ ಕಳೆದುಹಾಕಿದೆ ಅಂತಾ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

Written by - Zee Kannada News Desk | Last Updated : Mar 14, 2022, 09:23 PM IST
  • ಜನಪರ ಯೋಜನೆ ಇಂದಿರಾ ಕ್ಯಾಂಟೀನ್ ಬಗ್ಗೆ ಬಿಜೆಪಿ ಸರ್ಕಾರ ದ್ವೇಷ ಸಾದಿಸುತ್ತಲೇ ಬಂದಿದೆ
  • ದೇಶದಲ್ಲೇ ಮಾದರಿ ಯೋಜನೆ ಎನಿಸಿಕೊಂಡಿದ್ದ ಇಂದಿರಾ ಕ್ಯಾಂಟೀನ್ ಅನ್ನು ಕಳಪೆ ಹಂತಕ್ಕೆ ತಂದ ಬಿಜೆಪಿ
  • ಬಿಜೆಪಿ ಸರ್ಕಾರವು ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ
ಇಂದಿರಾ ಕ್ಯಾಂಟೀನ್ ಮುಳುಗಿಸುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರ: ಕಾಂಗ್ರೆಸ್ ಆಕ್ರೋಶ   title=
ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಇಡೀ ದೇಶದಲ್ಲಿಯೇ ಮಾದರಿ ಎನಿಸಿಕೊಂಡಿದ್ದ ಇಂದಿರಾ ಕ್ಯಾಂಟೀನ್(Indira Canteens)ಅನ್ನು ಭ್ರಷ್ಟ ಬಿಜೆಪಿ ಸರ್ಕಾರ ಮುಳುಗಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಸೋಮವಾರ ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಇಂದಿರಾ ಕ್ಯಾಂಟೀನ್ ಗೆ ಸಮಪರ್ಕ ಅನುದಾನ ನೀಡದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದೆ.

‘ಅನುದಾನ ಕಡಿತಗೊಳಿಸುವುದು, ಗುತ್ತಿಗೆದಾರರಿಗೆ ಹಣ ಪಾವತಿಸದಿರುವುದು ಸೇರಿದಂತೆ ಬಿಜೆಪಿ ಸರ್ಕಾರ(BJP Government) ಮೊದಲಿಂದಲೂ ಉತ್ತಮ ಜನಪರ ಯೋಜನೆಯಾದ ಇಂದಿರಾ ಕ್ಯಾಂಟೀನ್ ಬಗ್ಗೆ ದ್ವೇಷ ಸಾದಿಸುತ್ತಲೇ ಬಂದಿದೆ. ದೇಶದಲ್ಲಿಯೇ ಮಾದರಿ ಯೋಜನೆ ಎನಿಸಿಕೊಂಡಿದ್ದ ಇಂದಿರಾ ಕ್ಯಾಂಟೀನ್ ಕಳಪೆ ಹಂತಕ್ಕೆ ತಂದು ಬಿಜೆಪಿ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ’ ಅಂತಾ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ: '2023 ರ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ'

‘ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಯೋಜನೆಯ ಗುಣಮಟ್ಟವನ್ನು ಭ್ರಷ್ಟ ಬಿಜೆಪಿ ಸರ್ಕಾರ ಕಳೆದುಹಾಕಿದೆ’ ಅಂತಾ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಬಡವರ ಊಟಕ್ಕೆ ಕಲ್ಲು!

ಇಂದಿರಾ ಕ್ಯಾಂಟೀನ್‌ಗೆ ಅನುದಾನ ಸ್ಥಗಿತಗೊಳಿಸುವ ಮೂಲಕ ರಾಜ್ಯ ಸರ್ಕಾರ ಬಡವರಿಗೆ ರಿಯಾಯಿತಿ ದರದಲ್ಲಿ ದೊರಕುತ್ತಿದ್ದ ಊಟಕ್ಕೆ ಕಲ್ಲು ಹಾಕಿದೆ ಎಂದು ಗುಂಡೂರಾವ್(Dinesh Gundu Rao) ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಇಂದಿರಾ ಕ್ಯಾಂಟೀನ್ ಕಾಂಗ್ರೆಸ್‌ನ ಕೊಡುಗೆ ಎನ್ನುವ ಕಾರಣಕ್ಕೆ ಅನುದಾನ ನಿಲ್ಲಿಸಿದ್ದೀರಾ? ಅಥವಾ ಬಡವರ ಮೇಲೆ ನಿಷ್ಕಾಳಜಿಯಿಂದ ಅನುದಾನ ಸ್ಥಗಿತಗೊಳಿಸಿದಿರೋ ಎಂದು ಸಿಎಂ ಬಸವರಾಜ್ ಬೊಮ್ಮಾಯಿಯವರಿಗೆ ಅವರು ಪ್ರಶ್ನಿಸಿದ್ದಾರೆ.

ರಾಜಕೀಯ ದುರುದ್ದೇಶದಿಂದ ಬಿಜೆಪಿ ಸರ್ಕಾರ ಕ್ಯಾಂಟೀನ್‌(Indira Canteens)ಗೆ ಅನುದಾನ ಸ್ಥಗಿತಗೊಳಿಸಿರುವುದು ಹೀನ ಬುದ್ದಿಯನ್ನು ತೋರಿಸುತ್ತದೆ. ಈ ಸರ್ಕಾರಕ್ಕೆ ಬಡವರ ಮೇಲೆ ನೈಜ ಕಾಳಜಿಯಿದ್ದರೆ ಇಂದಿರಾ ಕ್ಯಾಂಟೀನ್‌ಗೆ ಅನುದಾನ ನೀಡಲಿ ಎಂದು ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.  

ಇದನ್ನೂ ಓದಿ: ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಂಡ ವಿಫಲಾಧ್ಯಕ್ಷ: ಬಿಜೆಪಿ ಟೀಕೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News