ಕರ್ನಾಟಕಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಮಾಡಿದ ದ್ರೋಹ ಒಂದೆರಡಲ್ಲ!: ಕಾಂಗ್ರೆಸ್ ಆಕ್ರೋಶ

ಮುಖ್ಯಮಂತ್ರಿಗಳು ಪ್ರಧಾನಿಯನ್ನು ಖುದ್ದು ಭೇಟಿಯಾಗಿ ಬರ ಪರಿಹಾರ ನೀಡುವಂತೆ ಕೇಳಿದರೂ ನಯಾಪೈಸೆ ಬಿಡುಗಡೆಯಾಗಿಲ್ಲ, GST ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯ, ಕೇಂದ್ರ ಪುರಸ್ಕೃತ ಯೋಜನೆಗಳ ಜಾರಿಗೆ ಬಿಡಿಗಾಸನ್ನೂ ಬಿಡುಗಡೆ ಮಾಡಿಲ್ಲವೆಂದು ಕಾಂಗ್ರೆಸ್ ಟೀಕಿಸಿದೆ.

Written by - Puttaraj K Alur | Last Updated : Jan 11, 2024, 07:52 PM IST
  • ಪ್ರಧಾನಿಯನ್ನು ಖುದ್ದು ಸಿಎಂ ಭೇಟಿಯಾಗಿ ಬರ ಪರಿಹಾರ ನೀಡುವಂತೆ ಕೇಳಿದರೂ ನಯಾಪೈಸೆ ಬಿಡುಗಡೆಯಾಗಿಲ್ಲ
  • GST ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡಿದೆ
  • ಕೇಂದ್ರ ಪುರಸ್ಕೃತ ಯೋಜನೆಗಳ ಜಾರಿಗೆ ಬಿಡಿಗಾಸನ್ನೂ ಬಿಡುಗಡೆ ಮಾಡಿಲ್ಲವೆಂದ ಕಾಂಗ್ರೆಸ್
ಕರ್ನಾಟಕಕ್ಕೆ ಕೇಂದ್ರ ಬಿಜೆಪಿ ಸರ್ಕಾರ ಮಾಡಿದ ದ್ರೋಹ ಒಂದೆರಡಲ್ಲ!: ಕಾಂಗ್ರೆಸ್ ಆಕ್ರೋಶ title=
ಕರ್ನಾಟಕಕ್ಕೆ ಕೇಂದ್ರದಿಂದ ನಿರಂತರ ಅನ್ಯಾಯ!

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಆಗುತ್ತಿರುವ ಮಲತಾಯಿ ಧೋರಣೆ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ. ಅತ್ತ ‘ಶ್ರೀರಾಮ ದೇಗುಲ’ ವಿಚಾರವಾಗಿ ಕಾಂಗ್ರೆಸ್‌ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸುತ್ತಿದ್ದರೆ, ಇತ್ತ ಕಾಂಗ್ರೆಸ್ ಅಭಿವೃದ್ಧಿ ವಿಚಾರವನ್ನು ಮುಂದಿಟ್ಟುಕೊಂಡು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಗುರುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ ಎಂದು ಟೀಕಿಸಿದ್ದು, ಆರೋಪ ಪಟ್ಟಿಯನ್ನು ಬಿಡುಗಡೆ ಮಾಡಿದೆ. ‘ಕರ್ನಾಟಕಕ್ಕೆ ಬಿಜೆಪಿಯ ಕೇಂದ್ರ ಸರ್ಕಾರ ಮಾಡಿದ ದ್ರೋಹ ಒಂದೆರಡಲ್ಲವೆಂದು ಕುಟುಕಿದೆ.

ಇದನ್ನೂ ಓದಿ: ‘ಟಿಕೆಟ್ ಕೊಡಿ ಅಜ್ಜಿ’ ಎಂದಿದ್ದಕ್ಕೆ ವಿದ್ಯಾರ್ಥಿನಿಗೆ ಮೇಲೆ ಮಹಿಳಾ ಕಂಡಕ್ಟರ್ ಹಲ್ಲೆ!

‘ಮುಖ್ಯಮಂತ್ರಿಗಳು ಪ್ರಧಾನಿಯನ್ನು ಖುದ್ದು ಭೇಟಿಯಾಗಿ ಬರ ಪರಿಹಾರ ನೀಡುವಂತೆ ಕೇಳಿದರೂ ನಯಾಪೈಸೆ ಬಿಡುಗಡೆಯಾಗಿಲ್ಲ, GST ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ನಿರಂತರ ಅನ್ಯಾಯ, ಕೇಂದ್ರ ಪುರಸ್ಕೃತ ಯೋಜನೆಗಳ ಜಾರಿಗೆ ಬಿಡಿಗಾಸನ್ನೂ ಬಿಡುಗಡೆ ಮಾಡಿಲ್ಲ’ವೆಂದು ಕಾಂಗ್ರೆಸ್ ಟೀಕಿಸಿದೆ.

‘ಈಗ ಗಣರಾಜ್ಯೋತ್ಸವ ಪರೇಡ್‌ಗೆ ರಾಜ್ಯದ ಸ್ಥಬ್ದಚಿತ್ರಕ್ಕೆ ಅವಕಾಶ ನಿರಾಕರಣೆ. ಇಷ್ಟೆಲ್ಲ ಅನ್ಯಾಯಗಳಾದರೂ ರಾಜ್ಯ ಬಿಜೆಪಿ ನಾಯಕರು ಮಾತ್ರ ಮೌನ. ಡಿಯರ್ ಬಿಜೆಪಿ, ನಿಮಗೆ ರಾಜ್ಯದ ಹಿತಾಸಕ್ತಿ ಮುಖ್ಯವಾಗದೆ, ಪ್ರಧಾನಿ ಮೋದಿ ಗುಲಾಮಗಿರಿಯೇ ಮುಖ್ಯವಾಗಿರುವುದೇಕೆ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.   

ಇದನ್ನೂ ಓದಿ: ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News