ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರದ ಮಧ್ಯೆ ‘ಅನ್ನಭಾಗ್ಯ’ ಯೋಜನೆ ಜಾರಿ: ಕಾಂಗ್ರೆಸ್

Anna Bhagya scheme: ಅಕ್ಕಿ ಕೊಳೆತು ಹೋದರೂ ಸರಿ ಬಡವರ ಹಸಿವಿಗೆ ಅನ್ನವಾಗಬಾರದು ಎಂಬ ಪ್ರಧಾನಿ ಮೋದಿಯವರ ಜನವಿರೋಧಿ ಧೋರಣೆಯಂತಹ ಕ್ರೌರ್ಯ ಇನ್ನೊಂದಿಲ್ಲವೆಂದು ಕಾಂಗ್ರೆಸ್ ಟೀಕಿಸಿದೆ.

Written by - Puttaraj K Alur | Last Updated : Jul 10, 2023, 05:14 PM IST
  • ನಾವು ಭರವಸೆ ನೀಡಿದ್ದ ಮೂರನೇ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆ ಇಂದಿನಿಂದ ಜಾರಿಗೆ ಬರುತ್ತಿದೆ
  • ಕೇಂದ್ರದ ಕುತಂತ್ರವನ್ನೂ ಮೀರಿ ಹಣ ನೀಡುವ ಮೂಲಕ ಕೊಟ್ಟ ಮಾತು ಉಳಿಸಿಕೊಳ್ಳುತ್ತಿದ್ದೇವೆ
  • ಈಗಾಗಲೇ ನಾವು 3 ಗ್ಯಾರಂಟಿಗಳನ್ನು ನೀಡಿದರೂ ಬಿಜೆಪಿಗೆ ವಿಪಕ್ಷ ನಾಯಕ ಸಿಗುವ ಗ್ಯಾರಂಟಿ ಇಲ್ಲವೆಂದು ಟೀಕೆ
ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರದ ಮಧ್ಯೆ ‘ಅನ್ನಭಾಗ್ಯ’ ಯೋಜನೆ ಜಾರಿ: ಕಾಂಗ್ರೆಸ್ title=
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ನೀಡಿದ್ದ ಗ್ಯಾರಂಟಿ ಯೋಜನೆಗಳ ಪೈಕಿ ಸೋಮವಾರದಿಂದ ‘ಅನ್ನಭಾಗ್ಯ’ ಯೋಜನೆಯು ಜಾರಿಯಾಗುತ್ತಿದೆ. ಈ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.  

‘ನಾವು ಭರವಸೆ ನೀಡಿದ್ದ ಮೂರನೇ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆ ಇಂದಿನಿಂದ ಜಾರಿಗೆ ಬರುತ್ತಿದೆ. ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರವನ್ನೂ ಮೀರಿ ಹಣ ನೀಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುನ್ನೆಡೆಯುತ್ತಿದ್ದೇವೆ. ಈಗಾಗಲೇ ನಾವು 3 ಗ್ಯಾರಂಟಿಗಳನ್ನು ನೀಡಿದರೂ ಬಿಜೆಪಿಗೆ ವಿಪಕ್ಷ ನಾಯಕ ಸಿಗುವ ಗ್ಯಾರಂಟಿ ಇಲ್ಲ! ಗೌರವಾನ್ವಿತ ಸದನವನ್ನು, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿದೆಯೇ ಬಿಜೆಪಿ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದ ಬಳಿಕ ರಾಜ್ಯದಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿದೆ: ಯತ್ನಾಳ್ ಆರೋಪ

‘ಕರ್ನಾಟಕದ ಸರ್ಕಾರಕ್ಕೆ ಅಕ್ಕಿ ನೀಡಲು ನಿರಾಕರಿಸಿ, ಖಾಸಗಿ ಮಾರಾಟಕ್ಕೆ ಮುಂದಾಗಿತ್ತು ಕೇಂದ್ರ ಸರ್ಕಾರ. ಆಹಾರ ನಿಗಮದಲ್ಲಿ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರಾಟಕ್ಕಿದ್ದರೂ ಬಿಡ್ ಆಗಿದ್ದು ಕೇವಲ 170 ಮೆಟ್ರಿಕ್ ಟನ್‍ಗೆ ಮಾತ್ರ! ಉಳಿದ ಅಕ್ಕಿ ಗೋದಾಮಿನಲ್ಲಿ ಕೊಳೆತು ಹೋಗಬೇಕೆ? ಅಕ್ಕಿ ಕೊಳೆತು ಹೋದರೂ ಸರಿ ಬಡವರ ಹಸಿವಿಗೆ ಅನ್ನವಾಗಬಾರದು ಎಂಬ ಪ್ರಧಾನಿ ಮೋದಿಯವರ ಜನವಿರೋಧಿ ಧೋರಣೆಯಂತಹ ಕ್ರೌರ್ಯ ಇನ್ನೊಂದಿಲ್ಲ’ವೆಂದು ಕಾಂಗ್ರೆಸ್ ಟೀಕಿಸಿದೆ.

ಸಿದ್ದರಾಮಯ್ಯ ಸರ್ಕಾರ ಜನರಿಗೆ ಅಕ್ಕಿ ನೀಡದೆ ಹಣ ನೀಡುತ್ತಿದೆ. ಜನರಿಗೆ ನೀಡುತ್ತಿರುವ 170 ರೂ.ನಲ್ಲಿ 2 ಕೆಜಿ ಅಕ್ಕಿಯೂ ಬರುವುದಿಲ್ಲವೆಂಬ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ‘ಮಾಜಿ ಗೃಹಸಚಿರು ಮೋದಿ ಸರ್ಕಾರದ ಬೆಲೆ ಏರಿಕೆಯನ್ನು ನೇರಾನೇರಾವಾಗಿ ಒಪ್ಪಿಕೊಳ್ಳುತ್ತಿದ್ದಾರೆಯೇ ? ಬಿಜೆಪಿ ಸರ್ಕಾರ ಬಡಜನರಿಗೆ ನೀಡಲಾಗುತ್ತಿದ್ದ ಅಕ್ಕಿಯನ್ನು 7-5 ಕೆಜಿಗೆ ಕಡಿತಗೊಳಿಸುವಾಗ ಈ ದುಬಾರಿ ಬೆಲೆ ಏರಿಕೆಯ ಬಗ್ಗೆ ಗಮನವಿರಲಿಲ್ಲವೇ, ಜನರ ಬಗ್ಗೆ ಕಾಳಜಿ ಇರಲಿಲ್ಲವೇ ಆರಗ ಜ್ಞಾನೇಂದ್ರ ಅವರೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಟೊಮ್ಯಾಟೊಗೆ ಬಂಗಾರದ ಬೆಲೆ: ಕಳ್ಳರಿಂದ ಟೊಮ್ಯಾಟೊ ತುಂಬಿದ ವಾಹನ ಹೈಜಾಕ್..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News