ಗ್ರಾ. ಪಂ. ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಂಟ್ರಿ: ಗರಂ ಆದ ಚುನಾವಣಾ ಆಯೋಗ!

ಗ್ರಾಮ ಪಂಚಾಯತಿ ಚುನಾವಣೆಯನ್ನು ರಾಜಕೀಯಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಗರಂ

Last Updated : Dec 13, 2020, 04:19 PM IST
  • ಗ್ರಾಮ ಪಂಚಾಯತಿ ಚುನಾವಣೆಯನ್ನು ರಾಜಕೀಯಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಗರಂ
  • ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಸತ್ ಸಂಪ್ರದಾಯಗಳನ್ನು ಗಾಳಿಗೆ ತೂರಿ ಪಕ್ಷದ ನೆಲೆಯಲ್ಲಿ ಸಭೆ, ಸಮಾರಂಭ
  • ಕಲುಷಿತ ವಾತಾವರಣವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವಂತೆ ರಾಜ್ಯ ಚುನಾವಣಾ ಆಯೋಗ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ
ಗ್ರಾ. ಪಂ. ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಂಟ್ರಿ: ಗರಂ ಆದ ಚುನಾವಣಾ ಆಯೋಗ! title=

ಬೆಂಗಳೂರು: ರಾಜ್ಯದಲ್ಲಿ ಇದೇ 22 ಮತ್ತು 27 ರಂದು ಎರಡು ಹಂತಗಳಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ಹೆಚ್ಚಾಗುತ್ತಿರುವುದನ್ನು ರಾಜ್ಯ ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಿದೆ.

ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣಾ ಸತ್ ಸಂಪ್ರದಾಯಗಳನ್ನು ಗಾಳಿಗೆ ತೂರಿ ಪಕ್ಷದ ನೆಲೆಯಲ್ಲಿ ಸಭೆ, ಸಮಾರಂಭಗಳನ್ನು ನಡೆಸಿ ಗ್ರಾಮ ಪಂಚಾಯತಿ ಚುನಾವಣೆ(Election)ಯನ್ನು ರಾಜಕೀಯಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಗರಂ ಆಗಿದೆ.

ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಚಿವ ಸುಧಾಕರ್..!

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಬಾರದು, ರಾಜಕೀಯದಿಂದ ಪಂಚಾಯತಿ ಗಳನ್ನು ಮುಕ್ತಗೊಳಿಸಬೇಕು. ಇಂತಹ ಕಲುಷಿತ ವಾತಾವರಣವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವಂತೆ ರಾಜ್ಯ ಚುನಾವಣಾ ಆಯೋಗ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದೆ.

ಪಡಿತರ ಚೀಟಿದಾರರಿಗೊಂದು 'ಎಚ್ಚರಿಕೆ ಸಂದೇಶ' ನೀಡಿದ ರಾಜ್ಯ ಸರ್ಕಾರ!

Trending News