ಗ್ರಾ.ಪಂ.ಚುನಾವಣೆ: 'ರಾಜ್ಯ ರಾಜಕೀಯ ನಾಯಕ'ರ ನಿದ್ದೆಗೆಡಿಸಿದ ಈ ಮಹತ್ವದ ಆದೇಶ..!

ಗ್ರಾಮ ಪಂಚಾಯಿತಿ ಚುನಾವಣೆಯನ್ನು ಪಕ್ಷರಹಿತವಾಗಿ, ಮುಕ್ತ ಹಾಗೂ ನ್ಯಾಯಯುತವಾಗಿ ನಡೆಸಲು ಸಹಕಾರ ನೀಡುವಂತೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ಸೂಚನೆ

Last Updated : Dec 18, 2020, 06:55 PM IST
  • ಗ್ರಾಮ ಪಂಚಾಯಿತಿ ಚುನಾವಣೆಯನ್ನು ಪಕ್ಷರಹಿತವಾಗಿ, ಮುಕ್ತ ಹಾಗೂ ನ್ಯಾಯಯುತವಾಗಿ ನಡೆಸಲು ಸಹಕಾರ ನೀಡುವಂತೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ಸೂಚನೆ
  • ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ನೀಡಿರುವ ಈ ಆದೇಶ, ರಾಜಕೀಯ ನಾಯಕರ ನಿದ್ದೆ ಗೆಡಿಸುವಂತಾಗಿದೆ.
  • ರಾಜಕೀಯ ಪಕ್ಷಗಳು ಈ ಚುನಾವಣೆಯಲ್ಲಿಯೂ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ, ಸಭೆ ಸಮಾರಂಭಗಳನ್ನು ನಡೆಸುವ, ರಾಜಕೀಯ ಮುಖಂಡರುಗಳ ಭಾವಚಿತ್ರಗಳನ್ನು ಕರ ಪತ್ರಗಳಲ್ಲಿ ಮುದ್ರಿಸಿ, ಪಕ್ಷಗಳ ಬಾವುಟ ಮತ್ತು ಚಿನ್ಹೆಯನ್ನು ಬಳಸಿಕೊಂಡು ಪ್ರಚಾರ ಮಾಡುವ ಸಂಭವ ಇರುತ್ತದೆ.
ಗ್ರಾ.ಪಂ.ಚುನಾವಣೆ: 'ರಾಜ್ಯ ರಾಜಕೀಯ ನಾಯಕ'ರ ನಿದ್ದೆಗೆಡಿಸಿದ ಈ ಮಹತ್ವದ ಆದೇಶ..! title=

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ರಾಜಕೀಯ ಪಕ್ಷಗಳಿಗೆ ಮಹತ್ವದ ಚುನಾವಣೆಯಾಗಿದೆ. ಆದ್ರೇ ಇಂತಹ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಹಸ್ತಕ್ಷೇಪ ಸರಿಯಲ್ಲ. ಗ್ರಾಮ ಪಂಚಾಯಿತಿ ಚುನಾವಣೆಯನ್ನು ಪಕ್ಷರಹಿತವಾಗಿ, ಮುಕ್ತ ಹಾಗೂ ನ್ಯಾಯಯುತವಾಗಿ ನಡೆಸಲು ಸಹಕಾರ ನೀಡುವಂತೆ ಎಲ್ಲಾ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ಸೂಚಿಸಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ನೀಡಿರುವ ಈ ಆದೇಶ, ರಾಜಕೀಯ ನಾಯಕರ ನಿದ್ದೆ ಗೆಡಿಸುವಂತಾಗಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತ ರಾಜ್ಯ ಚುನಾವಣಾ ಆಯೋಗ(Election Commission)ವು, ಗ್ರಾಮ ಪಂಚಾಯಿತಿ ಚುನಾವಣೆಗಳು ಪಕ್ಷ ರಹಿತ ಚುನಾವಣೆಯಾಗಿರುತ್ತದೆ. ರಾಜಕೀಯ ಪಕ್ಷಗಳು ಈ ಚುನಾವಣೆಯಲ್ಲಿಯೂ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ, ಸಭೆ ಸಮಾರಂಭಗಳನ್ನು ನಡೆಸುವ, ರಾಜಕೀಯ ಮುಖಂಡರುಗಳ ಭಾವಚಿತ್ರಗಳನ್ನು ಕರ ಪತ್ರಗಳಲ್ಲಿ ಮುದ್ರಿಸಿ, ಪಕ್ಷಗಳ ಬಾವುಟ ಮತ್ತು ಚಿನ್ಹೆಯನ್ನು ಬಳಸಿಕೊಂಡು ಪ್ರಚಾರ ಮಾಡುವ ಸಂಭವ ಇರುತ್ತದೆ.

ಶಾಲಾ ಪುನಾರಂಭ ವಿಚಾರ, ನಾಳೆ ಸಿಎಂ ಬಿಎಸ್‌ವೈ ನೇತೃತ್ವದಲ್ಲಿ ಮಹತ್ವದ ಸಭೆ

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ.

ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ 'ಬೆಳ್ಳಿ ಹೆಲಿಕಾಪ್ಟರ್' ನೀಡಿದ ಡಿಕೆಶಿ!

ಎಲ್ಲಾ ರಾಜಕೀಯ ಪಕ್ಷದ ಮುಖಂಡರುಗಳು ಚುನಾವಣಾ ಪ್ರಚಾರದಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಭಾಗವಹಿಸಿದಲ್ಲಿ ಅಥವಾ ಸಭೆಗಳನ್ನು ಆಯೋಜಿಸಿದಲ್ಲಿ ಮುಖಂಡರ ವರ್ಚಸ್ಸಿನಿಂದ, ಮತದಾರರ ಮೇಲೆ ಪ್ರಭಾವ ಬೀರಿದಂತಾಗುತ್ತದೆ. ಇದು ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಆದುದರಿಂದ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಪಕ್ಷರಹಿತವಾಗಿ, ಮುಕ್ತ ಹಾಗೂ ನ್ಯಾಯಯುತವಾಗಿ ನಡೆಸಲು ಸಹಕಾರ ನೀಡುವಂತೆ ಎಲ್ಲಾ ರಾಜಕೀಯ ಪಕ್ಷಗಳನ್ನು ಕೋರಿದ್ದಾರೆ.

ಶಾಲೆ ಆರಂಭಕ್ಕೆ ಆರೋಗ್ಯ ಇಲಾಖೆಯಿಂದ ಗ್ರೀನ್ ಸಿಗ್ನಲ್

Trending News