ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ: ಸಿಎಂ ಕುಮಾರಸ್ವಾಮಿ

ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಭೀಕರ ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ.

Last Updated : Aug 18, 2018, 07:14 PM IST
ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ: ಸಿಎಂ ಕುಮಾರಸ್ವಾಮಿ title=

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಉಂಟಾಗಿರುವ ಭೀಕರ ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದ್ದು, ಮನೆ ಕಳೆದುಕೊಂಡ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಇಂದು ಮಧ್ಯಾಹ್ನ ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಂತರ ಗಂಜಿ ಕೇಂದ್ರಗಳಲ್ಲಿ ತಂಗಿರುವ ನೆರೆ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿ ಸಾಂತ್ವನ ಹೇಳಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದಾಗಿ ರಾಜ್ಯಕ್ಕೆ ಹಾಗೂ ಜನರಿಗೆ ಸಾಕಷ್ಟು ನಷ್ಟವುಂಟಾಗಿದೆ. ಹೀಗಾಗಿ ಮೆನೆ ಕಳೆದುಕೊಂಡವರಿಗೆ ಈಗಾಗಲೇ ಸರಕಾರ 2 ಲಕ್ಷ ಪರಿಹಾರ ಧನ ಘೋಷಿಸಿದೆ. ಅಲ್ಲದೆ, ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಹೆಲಿಕಾಪ್ಟರ್ ಗಳನ್ನೂ ಬಳಸಿಕೊಳ್ಳಲಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ. ಸರ್ಕಾರ ಜನರ ನೆರವಿಗೆ ಸದಾ ಸಿದ್ಧವಿದೆ ಎಂದು ಕುಮಾರಸ್ವಾಮಿ ಹೇಳಿದರು. 

ಮುಂದುವರೆದು ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಪ್ರವಾಹದಿಂದಾಗಿರುವ ನಷ್ಟದ ಬಗ್ಗೆ ಅಧಿಕಾರಿಗಳಿಗೆ ವರದಿ ತಯಾರಿಸುವಂತೆ ಸೂಚಿಸಿದ್ದೇನೆ. ಆ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ, ಕೇಂದ್ರದಿಂದಲೂ ನೆರವು ಪಡೆಯಲಾಗುವುದು ಎಂದು ತಿಳಿಸಿದರು. 
 

Trending News