ಸಂಪುಟ ತಿಂಗಳಾಂತ್ಯಕ್ಕೆ ವಿಸ್ತರಣೆ ಸಾಧ್ಯತೆ..?

ರಾಜ್ಯ ಬಿಜೆಪಿ ಸಚಿವಾಕಾಂಕ್ಷಿಗಳಿಗೆ ಶೀಘ್ರವೇ ಸಿಹಿ ಸುದ್ದಿ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ.ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು,ಈ ಮಾಸಾಂತ್ಯಕ್ಕೆ ಸಂಪುಟ ಪುನಃರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Written by - RACHAPPA SUTTUR | Edited by - Manjunath Naragund | Last Updated : Apr 18, 2022, 12:07 AM IST
  • ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು,ಈ ಮಾಸಾಂತ್ಯಕ್ಕೆ ಸಂಪುಟ ಪುನಃರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸಂಪುಟ ತಿಂಗಳಾಂತ್ಯಕ್ಕೆ ವಿಸ್ತರಣೆ ಸಾಧ್ಯತೆ..? title=

ಬೆಂಗಳೂರು : ರಾಜ್ಯ ಬಿಜೆಪಿ ಸಚಿವಾಕಾಂಕ್ಷಿಗಳಿಗೆ ಶೀಘ್ರವೇ ಸಿಹಿ ಸುದ್ದಿ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ.ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು,ಈ ಮಾಸಾಂತ್ಯಕ್ಕೆ ಸಂಪುಟ ಪುನಃರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಭಾನುವಾರ ನಡೆದ ರಾಜ್ಯ ಕಾರ್ಯಕಾರಿಣಿ ನಂತರ ಪಕ್ಷದ ಕೋರ್ ಕಮಿಟಿ ಸಭೆ ನಡೆಸಲಾಗಿದೆ.ಆ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಅವರು ಉಳಿದು ಕೊಂಡಿರುವ ಹೊಟೇಲ್‌ ನಲ್ಲಿಯೇ ಪ್ರತ್ಯೇಕವಾಗಿ ಭೇಟಿ ಮಾಡಿ ಸಮಾರು ಅರ್ಧಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ: ನಿಮ್ಮ ಋಣ ನಾ ಎಂದೂ ಮರೆಯಲ್ಲ..ನನಗೆ ರೊಟ್ಟಿ ಕೊಟ್ರಿ, ಮಲಗೋಕೆ ಕಟ್ಟೆ ಜಾಗ ಕೊಟ್ರಿ..

ಪ್ರಮುಖವಾಗಿ ಬಹು ದಿನಗಳಿಂದ ನೆನೆಗುದಿಗೆ ಬಿದ್ದಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ವಿಸ್ತೃತವಾಗಿ ಇಬ್ಬರೂ ನಾಯಕರು ಚರ್ಚಿಸಿದ್ದು, ಪ್ರಸ್ತುತ ಐದು ಸ್ಥಾನಗಳು ಖಾಲಿ ಇದ್ದು, ಹದಿನೈದಕ್ಕೂ ಹೆಚ್ಚು ಜನ ಆಕಾಂಕ್ಷಿಗಳಿದ್ದಾರೆ.ಹೀಗಾಗಿ ಸಂಪುಟ ಪುನಾರಚನೆಗೆ ಒತ್ತಡ ಹೆಚ್ಚಿದೆ ಎಂಬ ಅಭಿಪ್ರಾಯವನ್ನು ಸಿಎಂ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು,ಆದರೆ, ಪುನಾರಚನೆಗೆ ನಡ್ಡಾ ಅವರು ಸ್ಪಷ್ಟ ಸೂಚನೆ ನೀಡಿಲ್ಲ ಎನ್ನಲಾಗಿದ್ದು, ಮುಖ್ಯಮಂತ್ರಿಗಳು ಸಧ್ಯಕ್ಕೆ ಖಾಲಿ ಇರುವ ಸ್ಥಾಾನಗಳನ್ನಷ್ಟೇ ಭರ್ತಿ ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಮುಖವಾಗಿ ಚುನಾವಣಾ ವರ್ಷವಾಗಿರುವುದರಿಂದ ಸಂಪುಟ ಪುನಾರಚನೆ ಅತ್ಯಂತ ಸೂಕ್ಷ್ಮವಾಗಿದ್ದು, ಈ ಸಂದರ್ಭದಲ್ಲಿ ದೊಡ್ಡ ಮಟ್ಟದ ಪುನಾರಚನೆಗೆ ಕೈ ಹಾಕುವುದು ಕಷ್ಟದ ಕೆಲಸ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎನ್ನಲಾಗಿದೆ.ಪ್ರಮುಖವಾಗಿ ಚುನಾವಣೆ ದೃಷ್ಠಿಯಿಂದ ಜಾತಿ ಮತ್ತು ಪ್ರಾದೇಶಿಕತೆ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗೆ ಅನುಕೂಲವಾಗುವಂತೆ ನೋಡಿಕೊಂಡು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ: 'ಎಲ್ಲಾ ಸರ್ಕಾರದಲ್ಲೂ ಪರ್ಸೆಂಟ್ ವಿಚಾರ ನಡೆಯುತ್ತಿದೆ, ಯಾವ ಸರಕಾರದಲ್ಲಿ ನಡೆಯುವುದಿಲ್ಲ ಹೇಳಿ?'

ಎಲ್ಲವೂ ಅಂದಕೊಂಡಂತೆ ನಡೆದರೆ ಈ ತಿಂಗಳ 22 ಅಥವಾ 25 ರಂದು ಸಂಪುಟ ವಿಸ್ತರಣೆ ಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News