ವರುಣನ ಆರ್ಭಟ: ನಾಳೆ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

Bangalore weather forecast: ಬೆಂಗಳೂರಿನಲ್ಲಿ ಸೋಮವಾರ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದೆ. ​

Written by - Puttaraj K Alur | Last Updated : Oct 15, 2024, 05:21 PM IST
  • ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ
  • ವರುಣನ ಆರ್ಭಟಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತ
  • ಮಳೆಯಿಂದ ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳ ಪರದಾಟ
ವರುಣನ ಆರ್ಭಟ: ನಾಳೆ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ! title=
ನಾಳೆ ಶಾಲಾ-ಕಾಲೇಜುಗಳಿಗೆ ರಜೆ!

Bengaluru rain updates: ರಾಜ್ಯ ರಾಜಧಾನಿ, ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಮಳೆಯ ಆರ್ಭಟಕ್ಕೆ ವಾಹನ ಸವಾರರು ಪರದಾಡುವಂತಾಗಿದೆ. ನಿರಂತವಾಗಿ ಸುರಿಯುತ್ತಿರುವ ಮಳೆಯಿಂದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. 

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರು ನಗರ ಜಿಲ್ಲಾಧಿಕಾರಿ ನಾಳೆ(ಅ.೧೬) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ ಎಂದು ವರದಿಯಾಗಿದೆ. 

ಇದನ್ನೂ ಓದಿ: "ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ"

ಬೆಂಗಳೂರಿನಲ್ಲಿ ಸೋಮವಾರ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದೆ. ಬೆಂಗಳೂರಿನ ಹಲವಡೆ ರಸ್ತೆಗಳು ಸಂಪೂರ್ಣವಾಗಿ ಜಲಾವೃತವಾಗಿದ್ದು, ಕೆರೆಗಳಂತೆ ನೀರು ತುಂಬಿಕೊಂಡಿವೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಬೆಂಗಳೂರಿನಲ್ಲಿ ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು ನಗರ ಡಿಸಿ ಜಿ.ಜಗದೀಶ್‌ ಅವರು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಈಗಾಗಲೇ ಸರ್ಕಾರಿ ಶಾಲೆಗಳಿಗೆ ದಸರಾ ಹಬ್ಬದ ಅಂಗವಾಗಿ ಅಕ್ಟೋಬರ್ 20ರವರೆಗೆ ರಜೆಯನ್ನು ಘೋಷಿಸಲಾಗಿತ್ತು.

ಇದನ್ನೂ ಓದಿ: ‌cm ಸಿದ್ದರಾಮಯ್ಯನವರ ವಿರುದ್ಧ ಮತ್ತೊಂದು ದೂರು

ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ತೆರಳಲು ಸಮಸ್ಯೆ ಉಂಟಾಗಿದ್ದರಿಂದ ಡಿಸಿ ಜಗದೀಶ್ ಅವರು ರಜೆ ಘೋಷಿಸಿದ್ದಾರೆ. ನಾಳೆ ಮತ್ತು ನಾಡಿದ್ದು ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಈ ಹಿನ್ನೆಲೆ ನಾಳೆ ಮತ್ತು ನಾಡಿದ್ದು ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಕುರಿತು ಜಿಲ್ಲಾಧಿಕಾರಿ ಇಂದು(ಮಂಗಳವಾರ) ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News