Property tax : ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧಾರ

ಬಿಬಿಎಂಪಿ  ಹೊರತುಪಡಿಸಿ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಪ್ರದೆಶಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳ  ಮಾಡಲು ಸರ್ಕಾರ ನಿರ್ಧರಿಸಿದೆ.

Written by - Ranjitha R K | Last Updated : Jan 14, 2021, 08:08 AM IST
  • ಜನತೆಗೆ ಆರ್ಥಿಕ ಬರೆ ನೀಡಲು ಮುಂದಾದ ಸರ್ಕಾರ
  • ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ
  • ಕೇಂದ್ರದ ಮಾರ್ಗಸೂಚಿಯಂತೆ ತೆರಿಗೆ ಪರಿಷ್ಕರಣೆ
Property tax  : ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ನಿರ್ಧಾರ  title=
ಸ್ಥಳೀಯ ಸಂಸ್ಥೆಗಳ ಪ್ರದೆಶಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ.

ಬೆಂಗಳೂರು : ವಿದ್ಯುತ್ ದರ ಏರಿಕೆ ಬೆನ್ನಲ್ಲೇ ರಾಜ್ಯದ ಜನತೆಗೆ  ಸರ್ಕಾರ ಮತ್ತೊಂದು ಶಾಕ್ ನೀಡಿದೆ.   ಈಗಾಗಲೇ ಕರೋನಾದಿಂದಾಗಿ (Coronavirus) ಆರ್ಥಿಕವಾಗಿ ಕಂಗೆಟ್ಟಿರುವ  ಜನತೆಯ ಮೇಲೆ ಮತ್ತೊಂದು ಬರೆ ಎಳೆದಿದೆ.   ಬಿಬಿಎಂಪಿ (BBMP) ಹೊರತುಪಡಿಸಿ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಪ್ರದೆಶಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳ  ಮಾಡಲು ಸರ್ಕಾರ ನಿರ್ಧರಿಸಿದೆ.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (BS Yadiyurappa) ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ  (Cabinet) ಈ ತೀರ್ಮಾನ ಕೈಗೊಳ್ಳಲಾಗಿದೆ. ಕೇಂದ್ರದಮಾರ್ಗಸೂಚಿಯಂತೆ ತೆರಿಗೆ ಪರಿಷ್ಕರಣೆಗೆ ಸಂಪುಟ ಒಪ್ಪಿಗೆ ನೀಡಿದೆ. ಈವಿಚಾರವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ (Madhuswamy) ತಿಳಿಸಿದ್ದಾರೆ. ಆಸ್ತಿ ತೆರಿಗೆ ಹೆಚ್ಚಿಸುವ  ಪರಿಣಾಮ ಸ್ಥಳೀಯ ಸಂಸ್ಥೆಗಳ ಆಸ್ತಿ ತೆರಿಗೆ ಆದಾಯ ಹೆಚ್ಚಾಗಲಿದೆ. ಹೀಗಾಗಿ ಸ್ಥಳೀಯ ಸಂಸ್ಥೆಗಳು ಆರ್ಥಿಕವಾಗಿ ಸುದೃಢವಾಗಲಿದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ವಸತಿ ಹಾಗೂ ವಸತಿಯೇತರ ಕಟ್ಟಡಗಳ ತೆರಿಗೆಯನ್ನು (Tax)  ಶೇ. 0.2ರಿಂದ ಶೇ. 1.5ಕ್ಕೆ ಹೆಚ್ಚಿಸಲಾಗಿದೆ. ಇಲ್ಲಿಯವರೆಗೆ ನಿವೇಶನಗಳಿಗೆ 1000 ಚದರ ಮೀಟರ್‌ ತೆರಿಗೆ ವಿನಾಯಿತಿ ನೀಡಲಾಗಿತ್ತು. ಈಗ ವಿನಾಯಿತಿಯನ್ನು ರದ್ದುಪಡಿಸಿ ನಿವೇಶನಗಳಿಗೆ ಶೇ. 0.2ರಿಂದ ಶೇ. 0.5ರವರೆಗೆ ತೆರಿಗೆ ವಿಧಿಸುವ ತೀರ್ಮಾನ ಕೈಗೊಳ್ಳಲಾಗಿದೆ.

ಇದಲ್ಲದೆ  ಕಟ್ಟಡಕ್ಕೆ ಹೊಂದಿಕೊಂಡ ಖಾಲಿ ನಿವೇಶನ ಎಷ್ಟೇ ವಿಸ್ತೀರ್ಣವಿದ್ದರೂ ಇಲ್ಲಿತನಕ ಆ ನಿವೇಶನದ ಮೇಲೆ  ತೆರಿಗೆ ವಿಧಿಸುತ್ತಿರಲಿಲ್ಲ. ಆದರೆ ಇನ್ನು ಮುಂದೆ  ಕಟ್ಟಡಕ್ಕೆ ಹೊಂದಿಕೊಂಡ ನಿವೇಶನದಲ್ಲಿ 1,000 ಚದರಡಿವರೆಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಆದರೆ, 1000 ಚದರಡಿಗಿಂತ ಹೆಚ್ಚು ವಿಸ್ತೀರ್ಣದ ಖಾಲಿ ಜಾಗಕ್ಕೆ ತೆರಿಗೆ ಅನ್ವಯವಾಗಲಿದೆ.

ಇದನ್ನೂ ಓದಿ : H.Nagesh: ರಾಜೀನಾಮೆ ನೀಡಿದ ಬೆನ್ನಲ್ಲೇ ನಾಗೇಶ್ ಗೆ ಸಂಪುಟ ದರ್ಜೆ ಸ್ಥಾನಮಾನ ಹುದ್ದೆ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News