ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ

ಕೋವಿಡ್ ಸಂದರ್ಭದಲ್ಲಿ ವೈದ್ಯರು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ & ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿದೆ.

Last Updated : Dec 22, 2020, 04:30 PM IST
  • ವೈದ್ಯರ ಬೇಡಿಕೆಗೆ ಸ್ಪಂದಿಸಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್
  • ಹಿಂದೆ 2015ರಲ್ಲಿ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿತ್ತು
  • ಕರ್ನಾಟಕ ವೈದ್ಯಾಧಿಕಾರಿಗಳ ಸಂಘವು ಸಿಜಿಎಚ್ ಸಿ ಮಾದರಿಯಲ್ಲಿ ಭತ್ಯೆ ಪರಿಷ್ಕರಿಸುವಂತೆ ಕೋರಿತ್ತು
ತಜ್ಞ ವೈದ್ಯರು, ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳ ಭತ್ಯೆಗಳ ಪರಿಷ್ಕರಣೆ title=
File Images

ಬೆಂಗಳೂರು: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ವೃಂದಗಳ ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹಾಗೂ ದಂತ ಆರೋಗ್ಯಾಧಿಕಾರಿಗಳಿಗೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ವೈದ್ಯರಿಗೆ ಸ್ಪಂದಿಸಿದ್ದಾರೆ.

ಕೋವಿಡ್ -19 (Covid 19) ಸಂದರ್ಭದಲ್ಲಿ ವೈದ್ಯರು (Doctors) ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಮತ್ತು ಭವಿಷ್ಯದಲ್ಲಿ ಯುವ ವೈದ್ಯರು ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಮಾಡಲು ಪ್ರೋತ್ಸಾಹಿಸಲು ತಜ್ಞ ವೈದ್ಯರು, ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ & ದಂತ ಆರೋಗ್ಯಾಧಿಕಾರಿಗಳಿಗೆ 2020ರ ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ ವಿಶೇಷ ಭತ್ಯೆಗಳನ್ನು ಪರಿಷ್ಕರಿಸಲಾಗಿದೆ.

ಈ ಹಿಂದೆ 2015ರಲ್ಲಿ ವಿಶೇಷ ಭತ್ಯೆಗಳನ್ನು (Special Allowances) ಪರಿಷ್ಕರಿಸಲಾಗಿತ್ತು. 0-6 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಎಸ್/ಬಿಡಿಎಸ್ ವಿದ್ಯಾರ್ಹತೆ ಇರುವವರಿಗೆ ಮಾಸಿಕ 21,000 ರೂ.ನಿಂದ 30,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 42,600 ರೂ.ನಿಂದ 55,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 50,800 ರೂ.ನಿಂದ 64,500 ರೂ.ಗೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: PG Doctors: ಸರ್ಕಾರಿ ಆಸ್ಪತ್ರೆಗಳಲ್ಲಿ 10 ವರ್ಷ ಸೇವೆ ಮಾಡಿ, ಇಲ್ಲದಿದ್ದರೆ 1 ಕೋಟಿ ದಂಡ ಪಾವತಿಸಿ

6-13 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್/ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 22,000 ರೂ.ನಿಂದ 37,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 43,700 ರೂ.ನಿಂದ 64,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 52,100 ರೂ.ನಿಂದ 73,500 ರೂ.ಗೆ ಹೆಚ್ಚಿಸಲಾಗಿದೆ.

13-20 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್/ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23,000 ರೂ.ನಿಂದ 44,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44,800 ರೂ.ನಿಂದ 73,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58,400 ರೂ.ನಿಂದ 83,500 ರೂ.ಗೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: Vitamins ಔಷಧಿ ತೆಗೆದುಕೊಳ್ಳುವ ಮೊದಲು ಜಾಗರೂಕರಾಗಿರಿ!

20-25 ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್/ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23,000 ರೂ.ನಿಂದ 52,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44,800 ರೂ.ನಿಂದ 83,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58,400 ರೂ.ನಿಂದ 93,500 ರೂ.ಗೆ ಹೆಚ್ಚಿಸಲಾಗಿದೆ.

25 ವರ್ಷಕ್ಕಿಂತ ಹೆಚ್ಚು ವರ್ಷ ಸೇವೆ ಸಲ್ಲಿಸಿದ ಎಂಬಿಬಿಎಸ್ (MBBS)/ಬಿಡಿಎಸ್ ಅರ್ಹತೆ ಹೊಂದಿದವರಿಗೆ ಮಾಸಿಕ 23,000 ರೂ.ನಿಂದ 60,500 ರೂ., ಸ್ನಾತಕೋತ್ತರ ಪದವಿ/ಡಿಪ್ಲೊಮಾ ವಿದ್ಯಾರ್ಹತೆ ಇರುವವರಿಗೆ ಮಾಸಿಕ 44,800 ರೂ.ನಿಂದ 93,500 ರೂ., ಸೂಪರ್ ಸ್ಪೆಷಾಲಿಟಿ ವಿದ್ಯಾರ್ಹತೆ ಇರುವವರಿಗೆ ಮಾಸಿಕ 58,400 ರೂ.ನಿಂದ 1,03,500 ರೂ.ಗೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಹೊಸ ಪ್ರಭೇಧದ ಕೋವಿಡ್ ವೈರಸ್ ಪತ್ತೆ; ತತ್ತರವಾದ ಜಗತ್ತು- ಇಲ್ಲಿವೆ ಪ್ರಮುಖ ಬೆಳವಣಿಗೆಗಳ ಸಾರ

ಕರ್ನಾಟಕ ವೈದ್ಯಾಧಿಕಾರಿಗಳ ಸಂಘವು ಸಿಜಿಎಚ್ ಸಿ ಮಾದರಿಯಲ್ಲಿ ಭತ್ಯೆ ಪರಿಷ್ಕರಿಸುವಂತೆ ಕೋರಿತ್ತು. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಭೆ ನಡೆಸಿ ಈ ಕುರಿತು ಚರ್ಚೆ ನಡೆಸಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News