ಬೆಂಗಳೂರು : ಕೊರೋನಾ ಪ್ರಕರಣಗಳು ಜಾಸ್ತಿ ಇರುವ 11 ಜಿಲ್ಲೆಗಳಲ್ಲಿ ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಕುರಿತ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಕೊರೋನಾ ನಿಯಂತ್ರಣಕ್ಕೆ ಬಂದಿರುವ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್ ಲಾಕ್(Unlock) ಆರಂಭವಾಗಲಿದ್ದು, ರಾಜ್ಯಾದ್ಯಂತ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ.
ಇದನ್ನೂ ಓದಿ : BS Yediyurappa : ಸಿಎಂ ಬದಲಾವಣೆ ಚರ್ಚೆಗೆ ಸೆಡ್ಡು ಹೊಡೆದ ಯಡಿಯೂರಪ್ಪ!
ಸಂಜೆ 7ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ(Night Curfew) ಜಾರಿಯಲ್ಲಿರಲಿದ್ದು, ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.
ಇದನ್ನೂ ಓದಿ : Heavy Rain : ರಾಜ್ಯದಲ್ಲಿ ಇಂದಿನಿಂದ ಒಂದು ವಾರ ಭಾರೀ ಮಳೆ..!
ಹೊಸ ಮಾರ್ಗಸೂಚಿಗಳು :
- KSRTC, BMTC, ಖಾಸಗಿ ಬಸ್ ಸಂಚಾರಕ್ಕೆ ನಿರ್ಬಂಧ
- ಬೆಂಗಳೂರಿನಲ್ಲಿ ಮೆಟ್ರೋ(Namma Metro) ಸಂಚಾರಕ್ಕೆ ನಿರ್ಬಂಧ
ಇದನ್ನೂ ಓದಿ : ರಾಜ್ಯದಲ್ಲಿ ಕೆಲವು ವಿನಾಯಿತಿಯೊಂದಿಗೆ ಜೂನ್ 21 ರವರೆಗೆ ಲಾಕ್ ಡೌನ್ ವಿಸ್ತರಣೆ
- ಹೋಟೆಲ್ ಗಳಲ್ಲಿ ಪಾರ್ಸೆಲ್(Food Parcel ) ಗೆ ಅವಕಾಶ
- ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಸಲು(Travel) ಅವಕಾಶ
- ಮದುವೆಗಳಲ್ಲಿ(Marriage) 40 ಜನರಿಗೆ ಮಾತ್ರ ಭಾಗಿಯಾಗಲು ಅವಕಾಶ
ಇದನ್ನೂ ಓದಿ : Karnataka Lockdown Update : ರಾಜ್ಯದ ಈ 8 ಜಿಲ್ಲೆಗಳಲ್ಲಿ ಮತ್ತೆ '1 ವಾರ ಲಾಕ್ ಡೌನ್' ಮುಂದುವರಿಕೆ!
- ಅಂತ್ಯಕ್ರಿಯೆ(Funeral)ಯಲ್ಲಿ 5 ಜನರಿಗೆ ಮಾತ್ರ ಅವಕಾಶ
- ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಮಯ ವಿಸ್ತರಣೆ
- ಮಧ್ಯಾಹ್ನ 2 ಗಂಟೆಯವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ
ಇದನ್ನೂ ಓದಿ : Arun Singh : ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ : ಅರುಣ್ ಸಿಂಗ್ ಸ್ಪಷ್ಟನೆ
- ಶೇ.50ರಷ್ಟು ಸಿಬ್ಬಂದಿ ಬಳಸಿ ಎಲ್ಲಾ ಕಾರ್ಖಾನೆಗಳು ಆರಂಭ
- ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ
- ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ
- ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ
ಇದನ್ನೂ ಓದಿ : Heavy Rain in Karnataka : ರಾಜ್ಯದಲ್ಲಿ ಮುಂದಿನ ವಾರ ಭಾರೀ ಮಳೆ : ಕರಾವಳಿ ಜಿಲ್ಲೆಗಳಲ್ಲಿ 'ರೆಡ್' ಅಲರ್ಟ್'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.