ಅಮರನಾಥ ಮೇಘಸ್ಫೋಟ: ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರದಿಂದ ಸಹಾಯವಾಣಿ

ಅಮರನಾಥ ಮೇಘಸ್ಫೋಟದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಿದ್ಧತೆ ಮಾಡಕೊಂಡಿದ್ದು, ಈ ಹಿನ್ನೆಲೆ ಹೆಲ್ಪ್ ಲೈನ್ ಸ್ಥಾಪಿಸಲಾಗಿದೆ.

Written by - Puttaraj K Alur | Last Updated : Jul 9, 2022, 03:27 PM IST
  • ಅಮರನಾಥ ಮೇಘಸ್ಫೋಟದಲ್ಲಿ 16ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವು, 50ಕ್ಕೂ ಹೆಚ್ಚು ಮಂದಿ ನಾಪತ್ತೆ
  • ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಿದ್ಧತೆ
  • ಅಮರನಾಥದಲ್ಲಿ ಮೇಘಸ್ಫೋಟದಿಂದ ಅತಂತ್ರರಾಗಿರುವ ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ
ಅಮರನಾಥ ಮೇಘಸ್ಫೋಟ: ಕನ್ನಡಿಗರ ರಕ್ಷಣೆಗಾಗಿ ರಾಜ್ಯ ಸರ್ಕಾರದಿಂದ ಸಹಾಯವಾಣಿ  title=
ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ

ಬೆಂಗಳೂರು: ಜಮ್ಮು-ಕಾಶ್ಮೀರದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ, ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾಗಿರುವ ಅಮರನಾಥದಲ್ಲಿ ಭಾರೀ ಮೇಘಸ್ಫೋಟ ಸಂಭವಿಸಿದೆ. ಶುಕ್ರವಾರ ಸಂಜೆ 5.30ರ ವೇಳೆ ಮೇಘಸ್ಫೋಟ ಸಂಭವಿಸಿದೆ. 16ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ನೂರಕ್ಕೂ ಹೆಚ್ಚು ಮಂದಿ ಕನ್ನಡಿಗರು ಅಮರನಾಥ ಯಾತ್ರೆಗೆ ತೆರಳಿದ್ದರು. ಅಮರನಾಥ ಮೇಘಸ್ಫೋಟದಲ್ಲಿ ಸಿಲುಕು ಅನೇಕರು ಪರದಾಡುವಂತಾಗಿದೆ. ಈ ಹಿನ್ನೆಲೆ ಕನ್ನಡಿಗರನ್ನೆಲ್ಲಾ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಿದ್ಧತೆ ಮಾಡಿದೆ. ಈ ಹಿನ್ನೆಲೆ ಕನ್ನಡಿಗರ ರಕ್ಷಣೆಗಾಗಿ ಹೆಲ್ಪ್ ಲೈನ್ ಸ್ಥಾಪಿಸಲಾಗಿದೆ.

ಇದನ್ನೂ ಓದಿ: Heavy Rainfall : ರಾಜ್ಯದಲ್ಲಿ ಇಂದು ಮುಂದುವರೆದ ಮಳೆ ಆರ್ಭಟ : ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್!

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ‘ಅಮರನಾಥದಲ್ಲಿ ಮೇಘಸ್ಫೋಟದಿಂದ ಅತಂತ್ರರಾಗಿರುವ ಕನ್ನಡಿಗರ ರಕ್ಷಣೆಗಾಗಿ ಸಹಾಯವಾಣಿ ತೆರೆದಿದ್ದೇವೆ, ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಎಲ್ಲರನ್ನೂ ಸುರಕ್ಷಿತವಾಗಿ ಕರೆತರುತ್ತೇವೆ’ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ತೆರೆದಿರುವ ಸಹಾಯವಾಣಿಯ ವಿವರ ಈ ರೀತಿ ಇದೆ:

ಎನ್.ಡಿ.ಆರ್.ಎಫ್: 011-23438252 011-23438253

ಕಾಶ್ಮೀರ್ ಡಿವಿಷನಲ್ ಹೆಲ್ಪ್ ಲ್ಲೈನ್: 0914- 2496240

ದೇವಸ್ಥಾನ ಮಂಡಳಿಯ ಸಹಾಯವಾಣಿ: 0194-2313149

ಕರ್ನಾಟಕ ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ : 080-1070 22340676

ಮೇಘಸ್ಫೋಟದಲ್ಲಿ ಸಾವನ್ನಪ್ಪಿದವರಿಗೆ ಸಿಎಂ ಸಂತಾಪ

‘ಪವಿತ್ರ ಅಮರನಾಥ ಯಾತ್ರೆಯಲ್ಲಿದ್ದ ಯಾತ್ರಿಕರು ಮೇಘಸ್ಪೋಟದಿಂದಾಗಿ ಸಾವನ್ನಪ್ಪಿದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ, ಮೃತರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ’ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಟ್ವೀಟ್ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Separate Hospital for Mens : ಪುರುಷರಿಗೇ ಪ್ರತ್ಯೇಕ ಆಸ್ಪತ್ರೆ- ಮಲ್ಲೇಶ್ವರಂ, ರಾಮನಗರದಲ್ಲಿ ಸದ್ಯದಲ್ಲೇ ಆರಂಭ 

ಜಂಟಿ ಕಾರ್ಯಾಚರಣೆ ಪ್ರಗತಿಯಲ್ಲಿದೆ

ಅಮರನಾಥ ಗುಹೆಯ ಬಳಿ ಮೇಘ ಸ್ಫೋಟದಿಂದ ಪ್ರವಾಹ ಉಂಟಾಗಿ ಯಾತ್ರಾರ್ಥಿಗಳಿಗೆ ಸಮಸ್ಯೆ ಆಗಿದೆ. ಎನ್‌ಡಿಆರ್‌ಎಫ್, ಐಟಿಬಿಪಿ, ಭಾರತೀಯ ಸೇನೆ, ಸಿಆರ್‌ಪಿಎಫ್, ಬಿಎಸ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಜೆ & ಕೆ ಪೊಲೀಸರ ಜಂಟಿ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಕರ್ನಾಟಕದ ಯಾವುದೇ ವ್ಯಕ್ತಿಗಳು ಸಿಲುಕಿದರೆ ರಾಜ್ಯ ತುರ್ತು ನಿಯಂತ್ರಣ ಕೊಠಡಿಯ 080-1070, 22340676 ಮತ್ತು ಇಮೇಲ್: incomedmkar@gmail.com ಸಂಪರ್ಕಿಸಬೇಕೆಂದು’ ಸಚಿವ ಆರ್.ಅಶೋಕ್ ಟ್ವೀಟ್ ಮಾಡಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News