ರಾಜ್ಯ ಸರ್ಕಾರದಿಂದ ಫೋನ್ ಕದ್ದಾಲಿಕೆ, ಬಿಜೆಪಿಯಿಂದ ಆರೋಪ

ರಾಜ್ಯದ ರಾಜಕೀಯದಲ್ಲಿ ಈಗ ಫೋನ್ ಕದ್ದಾಲಿಕೆ ವಿಚಾರ ಈಗ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ.ಬಿಜೆಪಿ ನಾಯಕರು ತಮ್ಮ ಫೋನ್ ಕದ್ದಾಲಿಕೆ ವಿಚಾರವಾಗಿ ಈಗ ಮೀಡಿಯಾ ಮುಂದೆ ಹಂಚಿಕೊಂಡಿದ್ದಾರೆ.ಫೋನ್ ಕದ್ದಾಲಿಕೆ ವಿಚಾರವಾಗಿ ಆರೋಪ ಮಾಡಿರುವ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಆರ್.ಅಶೋಕ ಈ ಸರ್ಕಾರವು ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರು ಸತ್ಯ ಎಂದು ತಿಳಿಸಿದ್ದಾರೆ.  

Last Updated : Nov 23, 2018, 04:06 PM IST
ರಾಜ್ಯ ಸರ್ಕಾರದಿಂದ ಫೋನ್ ಕದ್ದಾಲಿಕೆ, ಬಿಜೆಪಿಯಿಂದ ಆರೋಪ  title=

ಬೆಂಗಳೂರು: ರಾಜ್ಯದ ರಾಜಕೀಯದಲ್ಲಿ ಈಗ ಫೋನ್ ಕದ್ದಾಲಿಕೆ ವಿಚಾರ ಈಗ ಗಂಭೀರ ಸ್ವರೂಪವನ್ನು ಪಡೆದುಕೊಂಡಿದೆ.ಬಿಜೆಪಿ ನಾಯಕರು ತಮ್ಮ ಫೋನ್ ಕದ್ದಾಲಿಕೆ ವಿಚಾರವಾಗಿ ಈಗ ಮೀಡಿಯಾ ಮುಂದೆ ಹಂಚಿಕೊಂಡಿದ್ದಾರೆ.ಫೋನ್ ಕದ್ದಾಲಿಕೆ ವಿಚಾರವಾಗಿ ಆರೋಪ ಮಾಡಿರುವ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಆರ್.ಅಶೋಕ ಈ ಸರ್ಕಾರವು ಫೋನ್ ಕದ್ದಾಲಿಕೆ ಮಾಡುತ್ತಿರುವುದು ನೂರಕ್ಕೆ ನೂರು ಸತ್ಯ ಎಂದು ತಿಳಿಸಿದ್ದಾರೆ.  

ಪ್ರಮುಖವಾಗಿ ಸಮ್ಮಿಶ್ರ ಸರ್ಕಾರ ಭಾಗವಾಗಿರುವ ಜೆಡಿಎಸ್ ನಿಂದ ಈ ಕೃತ್ಯ ನಡೆಯುತ್ತಿದೆ ಎಂದು ಆರೋಪ ಮಾಡಲಾಗುತ್ತಿದೆ. ಫೋನ್ ಕದ್ದಾಲಿಕೆಯಾಗುತ್ತಿರುವ ನಾಯಕರಲ್ಲಿ ಸಿದ್ದರಾಮಯ್ಯ,ಯಡಿಯೂರಪ್ಪ ರಂತಹ ನಾಯಕರ ಫೋನ್ ಗಳನ್ನೂ ಸಹಿತ ಕದ್ದಾಲಿಸಲಾಗುತ್ತಿದೆ ಎಂದು ಆರೋಪ ಮಾಡಲಾಗುತ್ತಿದೆ.ದೂರವಾಣಿ ಕದ್ದಾಲಿಕೆಯು ಪ್ರಮುಖವಾಗಿ  ಬಿಜೆಪಿಯ ಆಪರೇಶನ್ ಕಮಲದಂತಹ ಕೆಲಸದಿಂದ ತಪ್ಪಿಸಿಕೊಳ್ಳಲು ಈ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಆರೋಪ ಕೇಳಿ ಬರುತ್ತಿದೆ.

ಕೆಲ ದಿನಗಳ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೂ ಕೂಡ  ಕುಮಾರಸ್ವಾಮಿ ವಿರುದ್ದ ವಿರುದ್ಧ ಫೋನ್ ಕದ್ದಾಲಿಕೆಯ ಆರೋಪವನ್ನು ಮಾಡಿದ್ದರು.ಆದರೆ ಫೋನ್ ಕದ್ದಾಲಿಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಮ್ಮಿಶ್ರ ಸರ್ಕಾರದ ನಾಯಕರು ಈ ವಿಷಯವನ್ನು ಅಲ್ಲಗಳೆದಿದ್ದಾರೆ .ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಸಾರಾ ಮಹೇಶ್ ಫೋನ್ ಕದ್ದಾಲಿಕೆ ವಿಚಾರವಾಗಿ ಬೇಕಿದ್ದರೆ ಕೇಂದ್ರ ಸರ್ಕಾರದಿಂದ ತನಿಖೆ ನಡೆಸಲಿ ಎಂದು ಅವರು ಸವಾಲು ಹಾಕಿದ್ದಾರೆ.

Trending News