ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಬರೋಬ್ಬರಿ 29 ಪೋಲಿಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್. ರಾಜು ಅವರು ಆದೇಶ ಹೊರಡಿಸಿದ್ದಾರೆ. ವರ್ಗಾವಣೆಗೊಂಡ ಪಿಎಸ್ಐಗಳು ಆದಷ್ಟು ಬೇಗ ತಮಗೆ ನೀಡಿದ ಠಾಣಾ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಬೇಕೆಂದು ತಿಳಿಸಲಾಗಿದೆ.