ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ

MUDA Scam Case: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. 

Written by - Chetana Devarmani | Last Updated : Aug 17, 2024, 11:27 AM IST
  • ಮುಡಾ ಹಗರಣ ಪ್ರಕರಣದಲ್ಲಿ ಬಿಗ್‌ ಅಪ್‌ಡೇಟ್‌
  • ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ
  • ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರು
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ title=

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. 

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅವ್ಯವಹಾರದ ಕುರಿತು ಕರ್ನಾಟಕ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೋರಿ ಪ್ರದೀಪ್ ಕುಮಾರ್, ಟಿಜೆ ಅಬ್ರಹಾಂ ಮತ್ತು ಸ್ನೇಹಮಯಿ ಕೃಷ್ಣ ಎಂಬ ಮೂವರು ಕಾರ್ಯಕರ್ತರು ಸಲ್ಲಿಸಿದ ಅರ್ಜಿಗಳ ಆಧಾರದ ಮೇಲೆ ಮುಡಾ ಭೂ ಹಗರಣ ಪ್ರಕರಣದಲ್ಲಿ ರಾಜ್ಯಪಾಲ ಥಾವರ್‌ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮೋದಿಸಿದ್ದಾರೆ.

ಇದನ್ನೂ ಓದಿ: ದೇಶದ್ರೋಹಿಗಳು ದೇಶಪ್ರೇಮದ ಪಾಠ ಮಾಡುತ್ತಿರುವುದು ಇಂದಿನ ದುರಂತ: ಡಿಸಿಎಂ ಡಿ. ಕೆ. ಶಿವಕುಮಾರ್

ಕಳೆದ ತಿಂಗಳು ರಾಜ್ಯಪಾಲರು ಮುಖ್ಯಮಂತ್ರಿ ಅವರಿಗೆ ‘ಷೋಕಾಸ್ ನೋಟಿಸ್’ ಜಾರಿ ಮಾಡಿದ್ದರು. ಏಳು ದಿನಗಳೊಳಗೆ ತಮ್ಮ ವಿರುದ್ಧದ ಆರೋಪಗಳಿಗೆ ಉತ್ತರ ನೀಡುವಂತೆ ಸೂಚಿಸಿದ್ದರು.

ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಟಿಜೆ ಅಬ್ರಹಾಂ ಅವರು ಮುಡಾದಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರ ನೋಟಿಸ್ ಜಾರಿಯಾಗಿದೆ. ಬಹುಕೋಟಿ ಹಗರಣದಿಂದ ರಾಜ್ಯದ ಬೊಕ್ಕಸಕ್ಕೆ ಭಾರಿ ನಷ್ಟ ಉಂಟಾಗಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. 

ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಮೈಸೂರು ಬಡಾವಣೆಯಲ್ಲಿ 14 ಪರ್ಯಾಯ ನಿವೇಶನ ಹಂಚಿಕೆಗಳು ಅಕ್ರಮವಾಗಿದ್ದು, ಇದರಿಂದ ಬೊಕ್ಕಸಕ್ಕೆ ₹45 ಕೋಟಿ ನಷ್ಟವಾಗಿದೆ ಎಂದು ಅಬ್ರಹಾಂ ಅವರು ಜುಲೈನಲ್ಲಿ ಲೋಕಾಯುಕ್ತ ಪೊಲೀಸರಿಗೆ ಸಲ್ಲಿಸಿದ್ದ ದೂರಿನಲ್ಲಿ ಆರೋಪಿಸಿದ್ದರು.

ಇದನ್ನೂ ಓದಿ: ಸ್ವಾತಂತ್ರ್ಯ ದಿನದಂದು ಸಿಹಿ ತಿಂಡಿ ನೀಡಿಲ್ಲ ಎಂದು ಶಿಕ್ಷಕರಿಗೆ ಥಳಿಸಿದ ವಿದ್ಯಾರ್ಥಿಗಳು! 

ದೂರಿನಲ್ಲಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ, ಪುತ್ರ ಎಸ್.ಯತೀಂದ್ರ ಹಾಗೂ ಮುಡಾ ಹಿರಿಯ ಅಧಿಕಾರಿಗಳ ಹೆಸರಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News