ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸಿಂಹಾಸನಾರೂಢ ಗಣಪತಿ ಪ್ರತಿಷ್ಠಾಪನೆ: ‘ಸುಪ್ರೀಂ’ ಮೆಟ್ಟಿಲೇರಿದ ಮುಸ್ಲಿಂ ಬೋರ್ಡ್

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿರುವ ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

Written by - Puttaraj K Alur | Last Updated : Aug 31, 2022, 08:53 AM IST
  • ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ
  • ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಹಿಂದೂ ಸಂಘಟನೆಗಳಿಂದ ಸಿಹಿ ಹಂಚಿ ಸಂಭ್ರಮಾಚರಣೆ
  • ಗಣೇಶೋತ್ಸವಕ್ಕೆ ಅನುಮತಿ ನೀಡಿರುವ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಅಂಜುಮನ್ ಇಸ್ಲಾಂ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಸಿಂಹಾಸನಾರೂಢ ಗಣಪತಿ ಪ್ರತಿಷ್ಠಾಪನೆ: ‘ಸುಪ್ರೀಂ’ ಮೆಟ್ಟಿಲೇರಿದ ಮುಸ್ಲಿಂ ಬೋರ್ಡ್  title=
ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಅಂಜುಮನ್ ಇಸ್ಲಾಂ  

ಹುಬ್ಬಳ್ಳಿ: ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುಂತೆ ಆದೇಶ ನೀಡದೆ. ಆದರೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಗಣೇಶೋತ್ಸವಕ್ಕೆ ಅನುಮತಿ ನೀಡಿರುವ ನಿರ್ಧಾರ ಪಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿತ್ತು. ಹೀಗಾಗಿ ಬುಧವಾರ ರಾತ್ರಿ 10 ಗಂಟೆಗೆ ನ್ಯಾ.ಅಶೋಕ್ ಎಸ್.ಕಿಣಗಿಯರ ಕಚೇರಿಯಲ್ಲಿ ಈ ಬಗ್ಗೆ ವಿಚಾರಣೆ ನಡೆದಿದೆ. ವಾದ-ವಿವಾದ ಆಲಿಸಿದ ಹೈಕೋರ್ಟ್ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಮ್ಮತಿಸಿ ತೀರ್ಪು ಪ್ರಕಟಿಸಿದೆ. ಅಂಜುಮಾನ್ ಇಸ್ಲಾಂ ಮನವಿ ತಿರಸ್ಕರಿಸಿದ ಹೈಕೋರ್ಟ್ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ಇದನ್ನೂ ಓದಿ: Supreme Court Verdict: ಬೆಂಗಳೂರಿನ ಈದ್ಗಾ ಮೈದಾನದಲ್ಲಿ ನಡೆಯಲ್ಲ ಗಣೇಶೋತ್ಸವ, ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಬ್ರೇಕ್

ಇನ್ನು ಗಣೇಶೋತ್ಸವಕ್ಕೆ ಅನುಮತಿ ನೀಡಿದ ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಹಿಂದೂ ಸಂಘಟನೆಗಳ ಸಂಭ್ರಮ ಮುಗಿಲು ಮುಟ್ಟಿದೆ. ಅನೇಕರು ಸಿಹಿ ಹಂಚಿ ಸಂಭ್ರಮ ಆಚರಿಸಿದ್ದಾರೆ. ಕೆಲ ಹಿಂದೂಪರ ಸಂಘಟನೆಗಳು ಈ ಬಾರಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂದು ಪಾಲಿಕೆಗೆ ಮನವಿ ಸಲ್ಲಿಸಿದ್ದವು. ಇದಕ್ಕೆ ಕಾಂಗ್ರೆಸ್‌ ಸೇರಿ ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಈ ಹಿನ್ನಲೆ ಪಾಲಿಕೆ ಐವರು ಸದಸ್ಯರ ಸದನ ಸಮಿತಿ ರಚಿಸಿತ್ತು. ಸಮಿತಿಯ ವರದಿ ಆದರಿಸಿ ಮೇಯರ್‌ ಈರೇಶ್‌ ಅಂಚಟಗೇರಿ ಗಣೇಶೋತ್ಸವಕ್ಕೆ ಅನುಮತಿ ನೀಡಿದ್ದರು. ಈ ನಿರ್ಧಾರ ಪ್ರಶ್ನಿಸಿ ಮುಸ್ಲಿಂ ಬೋರ್ಡ್ ಹೈಕೋರ್ಟ್ ಮೇಟ್ಟಿಲೇರಿತ್ತು.

ಈದ್ಗಾ ಮೈದಾನದಲ್ಲಿ 3 ದಿನ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆ ಒಪ್ಪಿಗೆ ಸೂಚಿಸಿದೆ. ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೇಳಿ ಅರ್ಜಿ ಸಲ್ಲಿಸಿರುವ 6 ಸಂಘಟನೆಗಳ ಪೈಕಿ 1 ಸಂಘಟನೆಗೆ ಅನುಮತಿ ನೀಡಲಾಗಿದೆ. ಪಾಲಿಕೆಯ ಈ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಮೈದಾನದಲ್ಲಿ ನಡೆಯುತ್ತಿದ್ದ ರಾಷ್ಟ್ರಧ್ವಜಾರೋಹಣ ಸ್ಥಳದಲ್ಲೇ ಗಣೇಶನನ್ನು ಪ್ರತಿಷ್ಠಾಪಿಸಬೇಕು. 3 ದಿನಗಳ ಕಾಲ ಪೂಜೆ-ಪುನಸ್ಕಾರ, ಧಾರ್ಮಿಕ ಕಾರ್ಯಕ್ರಮ ನಡೆಸಬಹುದು. ಆದರೆ ಡಿಜೆ ಬಳಸುವಂತಿಲ್ಲವೆಂದು ಸೂಚಿಸಲಾಗಿದೆ.

ಇದನ್ನೂ ಓದಿ:  "ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ಆಚರಿಸುವಂತಿಲ್ಲ"-ಸುಪ್ರೀಂ ಆದೇಶ

'ಇನ್ನು ಮುಂದೆ ಪ್ರತಿ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅವಕಾಶ ಸಿಗಲಿದೆ. ಮೊದಲ ವರ್ಷವಾಗಿರುವುದರಿಂದ 3 ದಿನ ಅನುಮತಿ ನೀಡಲಾಗಿದೆ. ಮುಂದಿನ ವರ್ಷ ಎಷ್ಟು ದಿನ ಪ್ರತಿಷ್ಠಾಪನೆ ಮಾಡಬೇಕೆಂಬುದನ್ನು ನಿರ್ಧರಿಸಲಾಗುವುದು' ಎಂದು ಮೇಯರ್‌ ಈರೇಶ್‌ ಅಂಚಟಗೇರಿ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಅಂಜುಮನ್ ಇಸ್ಲಾಂ

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿರುವ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಗಣೇಶನ ಪ್ರತಿಷ್ಠಾಪನೆ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನ 12 ಗಂಟೆ ಬದಲು 7:30ಕ್ಕೆ ಗಣೇಶನ ಪ್ರತಿಷ್ಠಾಪಿಸಲಾಗಿದೆ. 3 ಸಾವಿರ ಮಠದಿಂದ ಮೆರವಣಿಗೆ ನಡೆಸಿ ಈದ್ಗಾದಲ್ಲಿ ಗಣೇಶನ ಪ್ರತಿಷ್ಠಾಪಿಸಲಾಗಿದೆ. ಸಿಂಹಾಸನಾರೂಢ ಗಣಪತಿ ವಿರಾಜಮಾನನಾಗಿದ್ದಾನೆ. ಉತ್ಸವ ಮೂರ್ತಿ ಬಿಟ್ಟು ಸಣ್ಣ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಗಣೇಶ ಮೂರ್ತಿ ಪ್ರತಿಷ್ಠಾಪನೆ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸ್ ಕಮಿಷನರ್ ಲಾಭೂರಾಮ್ ಧಾವಿಸಿದ್ದಾರೆ. ಉತ್ಸವ ಸಮಿತಿ ಅಧ್ಯಕ್ಷ ಸಂಜೀವ್ ಬಡೆಸ್ಕರ್ ನೇತೃತ್ವದಲ್ಲಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.

ಮಂತ್ರಘೋಷಣೆಗಳ ಮೂಲಕ ಗಣಪತಿ ಪೂಜೆ ಆರಂಭವಾಗಿದ್ದು, ಉತ್ಸವ ಸಮಿತಿ ಅಧ್ಯಕ್ಷ ಸಂಜೀವ್ ಬಡೆಸ್ಕರ್ ಭಾಗಿಯಾಗಿದ್ದಾರೆ. ಪಾಲಿಕೆ ಸಮಿತಿ ಅಧ್ಯಕ್ಷ ಸಂತೋಷ ಚೌಹ್ವಾಣ್ ಸೇರಿ ಹಲವಾರು ಹಿಂದೂ ಸಂಘಟನೆ ಮುಖಂಡರು ಭಾಗಿಯಾಗಿದ್ದಾರೆ. ಮುಂಜಾಗೃತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News