ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ: ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ 265 ಪ್ರಕರಣಗಳ ಇತ್ಯರ್ಥ

ಕರ್ನಾಟಕ ಉಚ್ಛ ನ್ಯಾಯಾಲಯ,ಧಾರವಾಡ ಪೀಠದಲ್ಲಿ ಇಂದು (ಡಿ.18) ರಂದು ರಾಷ್ಟ್ರೀಯ ಲೋಕ ಅದಾಲತ್‍ನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿಗಳಾದ ಎಸ್. ಸುನಿಲ್ ದತ್ ಯಾದವ್ ಅವರ ಮಾರ್ಗದರ್ಶನದಲ್ಲಿ  ಏರ್ಪಡಿಸಲಾಗಿತ್ತು.

Written by - Zee Kannada News Desk | Last Updated : Dec 18, 2021, 11:48 PM IST
  • ಕರ್ನಾಟಕ ಉಚ್ಛ ನ್ಯಾಯಾಲಯ,ಧಾರವಾಡ ಪೀಠದಲ್ಲಿ ಇಂದು (ಡಿ.18) ರಂದು ರಾಷ್ಟ್ರೀಯ ಲೋಕ ಅದಾಲತ್‍ನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿಗಳಾದ ಎಸ್. ಸುನಿಲ್ ದತ್ ಯಾದವ್ ಅವರ ಮಾರ್ಗದರ್ಶನದಲ್ಲಿ ಏರ್ಪಡಿಸಲಾಗಿತ್ತು
ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠ: ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ 265 ಪ್ರಕರಣಗಳ ಇತ್ಯರ್ಥ title=
file photo

ಧಾರವಾಡ : ಕರ್ನಾಟಕ ಉಚ್ಛ ನ್ಯಾಯಾಲಯ,ಧಾರವಾಡ ಪೀಠದಲ್ಲಿ ಇಂದು (ಡಿ.18) ರಂದು ರಾಷ್ಟ್ರೀಯ ಲೋಕ ಅದಾಲತ್‍ನ್ನು ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿಗಳಾದ ಎಸ್. ಸುನಿಲ್ ದತ್ ಯಾದವ್ ಅವರ ಮಾರ್ಗದರ್ಶನದಲ್ಲಿ  ಏರ್ಪಡಿಸಲಾಗಿತ್ತು.

ಇದನ್ನೂ ಓದಿ: ಬಿಸಿಎಂ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಸದರಿ ಅದಾಲತ್‍ನಲ್ಲಿ ನ್ಯಾಯಮೂರ್ತಿಗಳಾದ ಹೇಮಂತ ಚಂದನಗೌಡರ, ರವಿ .ವಿ. ಹೊಸಮನಿ,    ಎಂ.ಜಿ. ಉಮಾ, ಎಸ್. ರಾಚಯ್ಯ ಹಾಗೂ ಇವರೊಂದಿಗೆ ಲೋಕ ಅದಾಲತ್‍ನ ಸದಸ್ಯರುಗಳಾದ   ಎಸ್.ಎಸ್. ಬಡವಡಗಿ, ಎಲ್.ಟಿ. ಮಂಟಗಣಿ, ಎಮ್.ಟಿ. ಬಂಗಿ, ಅನುರಾಧಾ ದೇಶಪಾಂಡೆ ಮತ್ತು   ಎಮ್.ಸಿ. ಹುಕ್ಕೇರಿ ಈ ರೀತಿಯಾಗಿ ಒಟ್ಟು  5 ಪೀಠಗಳನ್ನು ಆಯೋಜಿಸಲಾಗಿತ್ತು. 

ಇದನ್ನೂ ಓದಿ: 'ಭಾರತಕ್ಕೆ ಫೆಬ್ರುವರಿಯಲ್ಲಿ ಅಪ್ಪಳಿಸಲಿದೆ ಮೂರನೇ ಕೊರೊನಾ ಅಲೆ'

ಸದರಿ ಅದಾಲತ್‍ನಲ್ಲಿ ಒಟ್ಟು 1483 ಪ್ರಕರಣಗಳನ್ನು ವಿಚಾರಣೆಗೆಂದು ಗುರುತಿಸಿಕೊಳ್ಳಲಾಗಿತ್ತು. ಆ ಪೈಕಿ ಒಟ್ಟು 265 ಪ್ರಕರಣಗಳನ್ನು ರೂ.3,96,91,250/- ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು ಎಂದು ನ್ಯಾಯಾಂಗ ಅಧೀಕ ವಿಲೇಖನಾಧಿಕಾರಿಗಳು ಮತ್ತು ಉಚ್ಛ ನ್ಯಾಯಾಲಯ ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಜೈಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News