ವಿಧಾನ ಪರಿಷತ್ ಚುನಾವಣೆ: ಅಚ್ಚರಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್

ವಿಧಾನಸಭೆಯಿಂದ ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆ ದಿನವಾಗಿದೆ. ಹೀಗಾಗಿ ಕಾಂಗ್ರೆಸ್ ಸದ್ಯ ಇಬ್ಬರ ಹೆಸರುಗಳನ್ನು ಅಂತಿಮಗೊಳಿಸಿದೆ.

Written by - Puttaraj K Alur | Last Updated : May 23, 2022, 08:59 PM IST
  • ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ ಆಗಿದೆ
  • ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್‍ಗೆ ಸ್ಥಾನ ನೀಡಿ ಅಚ್ಚರಿ ಮೂಡಿಸಿದ ‘ಕೈ’ ಪಕ್ಷ
  • ವಿಧಾನ ಪರಿಷತ್‍ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆ ದಿನವಾಗಿದೆ
ವಿಧಾನ ಪರಿಷತ್ ಚುನಾವಣೆ: ಅಚ್ಚರಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಿದ ಕಾಂಗ್ರೆಸ್  title=
ಕಾಂಗ್ರೆಸ್ ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮೇಲ್ಮನೆ ಟಿಕೆಟ್ ಫೈಟ್ ಜೋರಾಗಿದೆ. ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ ಆಗಿದೆ. ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಗೆ ಸ್ಥಾನ ನೀಡುವ ಮೂಲಕ ‘ಕೈ’ ಪಕ್ಷ ಅಚ್ಚರಿ ಮೂಡಿಸಿದೆ.

ಈ ಇಬ್ಬರು ಅಭ್ಯರ್ಥಿಗಳು ಮಂಗಳವಾರ(ಮೇ 23) ವಿಧಾನ ಪರಿಷತ್ ಸ್ಥಾನಕ್ಕೆ ನಾಮ ಪತ್ರ ಸಲ್ಲಿಸಲಿದ್ದಾರೆ. ದಾವಣಗೆರೆ ಮೂಲದ ಅಬ್ದುಲ್ ಜಬ್ಬಾರ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷ. ಈ ಹಿಂದೆ ಇವರು ವಿಧಾನ ಪರಿಷತ್ ಸದಸ್ಯರಾಗಿದ್ದರು. ನಾಗರಾಜ್ ಯಾದವ್ ಅವರು ಕೆಪಿಸಿಸಿ ವಕ್ತಾರರಾಗಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೊಂದು ವಿವಾದಕ್ಕೆ ದಾರಿ ಮಾಡಿಕೊಡ್ತಾ ಸರ್ಕಾರ: ಹೆಡ್ಗೆವಾರ್ ಪಠ್ಯ ಸೇರಿಸಿದ್ರೆ ತಪ್ಪೇನು? ಎಂದ ಸಚಿವ ಬಿ.ಸಿ ನಾಗೇಶ್

ವಿಧಾನಸಭೆಯಿಂದ ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ನಾಳೆಯೇ ಕೊನೆ ದಿನವಾಗಿದೆ. ಹೀಗಾಗಿ ಕಾಂಗ್ರೆಸ್ ಸದ್ಯ ಇಬ್ಬರ ಹೆಸರುಗಳನ್ನು ಅಂತಿಮಗೊಳಿಸಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೂಚಿಸಿದ್ದ ಹೆಸರುಗಳನ್ನು ಬಿಟ್ಟು ಬೇರೆಯವರಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ನೀಡಿದೆ. ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಅಚ್ಚರಿ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ.   

ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರಿಗೆ ಅವಕಾಶ ನೀಡುವಂತೆ ಸಿದ್ದರಾಮಯ್ಯನವರು ಕೇಳಿದ್ದರು. ಹಿಂದುಳಿದ ವರ್ಗಗಳ ಪೈಕಿ ಬಲಿಜ‌ ಸಮುದಾಯದ ಎಂ.ಆರ್.ಸೀತಾರಾಂ ಮತ್ತು ಅಲ್ಪಸಂಖ್ಯಾತರ ಪರ ಕ್ರಿಶ್ಚಿಯನ್ ಸಮುದಾಯದ ಐವಾನ್ ಡಿಸೋಜಾರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಅದರಂತೆ ಡಿಕೆಶಿಯವರು ಎಸ್.ಆರ್.ಪಾಟೀಲ್ ಸೇರಿ ಕೆಲವರಿಗೆ ಟಿಕೆಟ್ ನೀಡುವಂತೆ ವರಿಷ್ಠರ ಬಳಿ ಮನವಿ ಮಾಡಿಕೊಂಡಿದ್ದರು. ಆದರೆ ಎಸ್.ಆರ್.ಪಾಟೀಲ್‍ಗೆ ಟಿಕೆಟ್ ತಪ್ಪಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:  'ಬಿ.ಸಿ.ನಾಗೇಶ್ ಅವರೇ ನಾನು ನಿಮ್ಮ ಹಾಗೆ ವಾಟ್ಸಪ್ ಯುನಿವರ್ಸಿಟಿಯ ವಿದ್ಯಾರ್ಥಿ ಅಲ್ಲ'

ಬರಿಗೈಲಿ ವಾಪಸ್ಸಾಗಿದ್ದರು!

ವಿಧಾನ ಪರಿಷತ್‌ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ದೆಹಲಿ ವರಿಷ್ಠರ ಭೇಟಿಗೆ ತೆರಳಿದ್ದ ರಾಜ್ಯ ಕಾಂಗ್ರೆಸ್‌ ನಾಯಕರು ವರಿಷ್ಠರ ಸಮ್ಮುಖದಲ್ಲಿಯೇ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ ಕೊನೆಗೆ ಅಂತಿಮ ಪಟ್ಟಿಯ ಸ್ಪಷ್ಟತೆ ಇಲ್ಲದೆ ಬರಿಗೈಲಿ ವಾಪಸ್ಸಾಗಿದ್ದರು. ಪಕ್ಷದ ಅಭ್ಯರ್ಥಿಗಳು ಯಾರಾಗಬೇಕು ಎಂಬುದರ ಕುರಿತು ಚರ್ಚಿಸಿ ಭಾನುವಾರ 11 ಗಂಟೆಯೊಳಗೆ ಪಟ್ಟಿ ರವಾನಿಸುವಂತೆ ಡಿಕೆಶಿ ಹಾಗೂ ಸಿದ್ದರಾಮಯ್ಯರಿಗೆ ಹೈಕಮಾಂಡ್‌ ಸೂಚಿಸಿತ್ತು.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News