'ಕೈ' ಬಿಟ್ಟು 'ಕಮಲ' ಹಿಡಿಯುವರೇ ರಾಮಲಿಂಗಾರೆಡ್ಡಿ?

ರಾಜೀನಾಮೆ ನೀಡಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಅತೃಪ್ತ ಶಾಸಕರ ಮುಂದಿನ ನಡೆ ಬಗ್ಗೆ ಕುತೂಹಲ ಒಂದೆಡೆಯಾದರೆ, ರಾಜೀನಾಮೆ ನೀಡಿ ಬೆಂಗಳೂರಿನಲ್ಲೇ ಉಳಿದಿರುವ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ನಡೆ ಕೂಡ ನಿಗೂಢವಾಗಿದೆ.

Last Updated : Jul 9, 2019, 10:25 AM IST
'ಕೈ' ಬಿಟ್ಟು 'ಕಮಲ' ಹಿಡಿಯುವರೇ ರಾಮಲಿಂಗಾರೆಡ್ಡಿ? title=
File Image

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿ, ರಾಜೀನಾಮೆ ನೀಡಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಅತೃಪ್ತ ಶಾಸಕರ ಮುಂದಿನ ನಡೆ ಬಗ್ಗೆ ಕುತೂಹಲ ಒಂದೆಡೆಯಾದರೆ, ರಾಜೀನಾಮೆ ನೀಡಿ ಬೆಂಗಳೂರಿನಲ್ಲೇ ಉಳಿದಿರುವ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರ ನಡೆ ಕೂಡ ನಿಗೂಢವಾಗಿದೆ. 

ಏತನ್ಮಧ್ಯೆ, ಬಿಜೆಪಿ ನಾಯಕ ಎಸ್.ಕೆ ನಟರಾಜ್ ಅವರು ರಾಮಲಿಂಗಾರೆಡ್ಡಿ ನಿವಾಸಕ್ಕೆ ಭೇಟಿ ನೀಡಿದ್ದು, ರಾಮಲಿಂಗಾರೆಡ್ಡಿ ಬಿಜೆಪಿ ಸೇರಲಿದ್ದಾರೆಯೇ ಎಂಬ ಪ್ರಶ್ನೆ ಉದ್ಭವವಾಗಿದೆ.

ಈ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿರುವ ರಾಮಲಿಂಗಾರೆಡ್ಡಿ, ನಾನು ಕಾಂಗ್ರೆಸ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನಷ್ಟೇ, ಆದರೆ ನಾನಿನ್ನೂ ಕಾಂಗ್ರೆಸಿಗನೇ. ನಾನು ಯಾವ ಸಚಿವ ಸ್ಥಾನಕ್ಕೂ ಲಾಭಿ ನಡೆಸಿಲ್ಲ. ಅಂತೆಯೇ ಪಕ್ಷದ ಯಾವ ನಾಯಕರೊಂದಿಗೂ ನಾನಾಗಿಯೇ ಮಾತನಾಡಲು ಹೋಗುವುದಿಲ್ಲ. ಯಾರಾದರೂ ಬಂದರೆ ಮಾತನಾಡುತ್ತೇನೆ ಎಂದಿದ್ದಾರೆ.

ಬಿಜೆಪಿ ಸೇರಲಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ರಾಮಲಿಂಗಾರೆಡ್ಡಿ, ಪಕ್ಷದ ಬೆಳವಣಿಗೆಯಿಂದ ಬೇಸರಗೊಂಡು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಹಾಗಂದ ಮಾತ್ರಕ್ಕೆ ನಾನು ಬಿಜೆಪಿ ಸೇರುತ್ತೇನೆ ಎಂದಲ್ಲ. ನಾನು ಬಿಜೆಪಿಗೆ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Trending News